ನವದೆಹಲಿ, ನ.8- ಮಾನವ ಕಳ್ಳ ಸಾಗಣೆ ಆರೋಪದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ 10 ರಾಜ್ಯಗಳಲ್ಲಿ ವಿವಿಧ ಕಡೆ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆಗೆ ಗುರಿಪಡಿಸಿದೆ.
ತ್ರಿಪುರಾ, ಅಸ್ಸಾಂ, ಪಶ್ಚಿಮ ಬಂಗಾಳ, ಕರ್ನಾಟಕ, ತಮಿಳುನಾಡು, ತೆಲಂಗಾಣ, ಹರಿಯಾಣ, ಪುದುಚೇರಿ, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಎನ್‍ಐಎ ಶೋಧ ನಡೆಸಿದೆ.
ಬೆಂಗಳೂರು ನಗರದಲ್ಲಿ 15ಕ್ಕೂ ಅಧಿಕ ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ಎನ್‍ಐಎ ದಾಳಿ ನಡೆಸಿದೆ. ನಗರದ ಸೋಲದೇವನಹಳ್ಳಿ, ಕೆಆರ್ ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದೆ.8 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆಯಲಾಗಿದೆ.
ಎನ್‍ಐಎ ನ 15 ಅಧಿಕಾರಿಗಳ ತಂಡವು ಮಾನವ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ದಾಳಿ ಮಾಡಿದ್ದಾರೆ ಎಂದು ಗೊತ್ತಾಗಿದೆ. ಬೆಂಗಳೂರು ನಗರದ 15ಕ್ಕೂ ಹೆಚ್ಚು ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ ಮಂಗಳವಾರ ರಾತ್ರಿ ದಾಳಿ ಮಾಡಿದೆ. ಎಂಟು ಮಂದಿ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದು ಎನ್‍ಐಎ ಅಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲಿಡಲು ಸರ್ಕಾರ ಆದೇಶ : ಡಿಸಿಎಂ
ಅಕ್ರಮ ಬಾಂಗ್ಲಾ ವಲಸಿಗರು ಮಾನವ ಕಳ್ಳಸಾಗಾಣಿಕೆ ಮತ್ತು ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಸಂಬಂಧ ವಿಶೇಷ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಾಂಗ್ಲಾ ದೇಶದಿಂದ ನೂರಾರು ಮಂದಿಯನ್ನು ಭಾರತಕ್ಕೆ ಅಕ್ರಮವಾಗಿ ಕರೆ ತರುವುದು, ಇಲ್ಲಿ ಅವರನ್ನು ಉಗ್ರಗಾಮಿ ಚಟುವಟಿಕೆಗಳಿಗೆ ಬಳಸುವುದು ಇವರ ಮೇಲಿನ ಆರೋಪವಾಗಿತ್ತು.
ಉದ್ಯೋಗದ ಆಮಿಷವೊಡ್ಡಿ ಅವರನ್ನು ಇಲ್ಲಿಗೆ ಕರೆತಂದು ಬಳಿಕ ಅವರಿಗೆ ಉಗ್ರ ತರಬೇತಿ ನೀಡಿ ದುಷ್ಕøತ್ಯಗಳಿಗೆ ಬಳಸುವ ವಿದ್ಯಮಾನಗಳು ನಡೆಯುತ್ತಿರುವ ಬಗ್ಗೆ ದೂರುಗಳು ದಾಖಲಾಗಿದ್ದವು. ಅವರಲ್ಲಿ ಕೆಲವರು ಕಳ್ಳತನ, ದರೋಡೆ ಕೃತ್ಯಗಳಲ್ಲಿ ಶಾಮೀಲಾದರೆ ಇನ್ನೂ ಕೆಲವರು ಕೊಲೆ, ಉಗ್ರ ಕೃತ್ಯಗಳಲ್ಲೂ ಭಾಗಿಯಾಗುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ರಾಜ್ಯದ ಕೆಲವು ಕಡೆ ಅವರು ತಮ್ಮದೇ ಆದ ಕಾಲೋನಿಗಳನ್ನು ಸೃಷ್ಟಿಸಿಕೊಂಡು ರಕ್ಷಣೆ ಪಡೆಯುತ್ತಿದ್ದಾರೆ ಎಂಬ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿದ್ದವು.
ಬೆಂಗಳೂರಿನ ಜಕ್ಕಸಂದ್ರ, ಬೆಳ್ಳಂದೂರು ಕೆರೆ ಮುಂಭಾಗ, ದೇವರಬೀಸನಹಳ್ಳಿ, ಕಾಡುಬೀಸನಹಳ್ಳಿ, ಮುನ್ನೇಕೊಳಲು, ಸೋಮಸುಂದರಪಾಳ್ಯ, ಬೇಗೂರು ರಸ್ತೆ ನೈಸ್ ರಸ್ತೆ ಸೇರುವ ಭಾಗ ಸೇರಿದಂತೆ ಅನೇಕ ಪ್ರದೇಶದಲ್ಲಿ ಅಕ್ರಮ ವಲಸಿಗರು ವಾಸಿಸುತ್ತಿದ್ದಾರೆ ಎಂಬ ಮಾತು ಈ ಹಿಂದೆಯೇ ಕೇಳಿ ಬಂದಿತ್ತು. ಕೆಲವರು ವೀಸಾ ಅವಧಿ ಮುಗಿದರೂ ಕಾನೂನು ಬಾಹಿರವಾಗಿ ದೇಶದ ವಿವಿಧ ಕಡೆ ನೆಲೆಸಿದ್ದರು.
ಮದುವೆ ದಿನವೇ ಪ್ರೇಯಸಿಗೆ ಕೈಕೊಟ್ಟು ಪ್ರಿಯಕರ ಪರಾರಿ
ಇನ್ನು ಕೆಲವು ಶ್ರೀಲಂಕಾ ಪ್ರಜೆಗಳು ಭಾರತದಲ್ಲಿ ಅಕ್ರಮವಾಗಿ ತಂಗಿದ್ದಕ್ಕೆ ಸಂಬಂಧಿಸಿದಂತೆ ಎನ್‍ಐಎ ಕಳೆದ ತಿಂಗಳು ತಮಿಳುನಾಡು ಮೂಲದ ವ್ಯಕ್ತಿ – ಮೊಹಮ್ಮದ್ ಇಮ್ರಾನ್ ಖಾನ್ ಅವರನ್ನು ಬಂಧಿಸಿತ್ತು ದಾಳಿಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ ಎಂಬುದು ಖಚಿತಪಟ್ಟಿಲ್ಲ.
ಇದಕ್ಕೂ ಮೊದಲು, 2022ರಲ್ಲಿ, ರೊಹಿಂಗ್ಯಾಗಳು ಮತ್ತು ಬಾಂಗ್ಲಾದೇಶಿ ಮುಸ್ಲಿಮರನ್ನು ಭಾರತದ ಭೂಪ್ರದೇಶಕ್ಕೆ ಸಾಗಿಸುವ ಹಾಗೂ ನಕಲಿ ದಾಖಲೆಗಳೊಂದಿಗೆ ಇಲ್ಲಿ ನೆಲೆಸಿರುವ ಬಗ್ಗೆ ತನಿಖೆ ನಡೆಸಿತ್ತು.