Monday, April 28, 2025
Homeರಾಜ್ಯಪೆಹಲ್ಗಾಮ್ ಉಗ್ರರ ದಾಳಿಯಲ್ಲಿ ಬಲಿಯಾದ ಭರತ್ ಭೂಷಣ್ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದ ಎನ್ಐಎ...

ಪೆಹಲ್ಗಾಮ್ ಉಗ್ರರ ದಾಳಿಯಲ್ಲಿ ಬಲಿಯಾದ ಭರತ್ ಭೂಷಣ್ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದ ಎನ್ಐಎ ಅಧಿಕಾರಿಗಳು

NIA officials visit house of Bharat Bhushan, who was killed in Pahalgam terrorist attack

ಬೆಂಗಳೂರು,ಏ.28- ಜಮ್ಮು-ಕಾಶ್ಮೀರದ ಪೆಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ಗುಂಡೇಟಿಗೆ ಬಲಿಯಾದ ಭರತ್ ಭೂಷಣ್ ಮನೆಗೆ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಭೇಟಿ ನೀಡಿ ಘಟನೆ ಕುರಿತು ಮಹತ್ವದ ಮಾಹಿತಿಯನ್ನು ಕಲೆ ಹಾಕಿದ್ದಾರೆ. ನಗರದ ಮತ್ತಿಕೆರೆಯಲ್ಲರುವ ಭರತ್ ಭೂಷಣ್ ಅವರ ನಿವಾಸಕ್ಕೆ ಎನ್‌ ಐಎನ ನಾಲ್ಕು ಅಧಿಕಾರಿಗಳು ಭೇಟಿ ನೀಡಿ ಪತ್ನಿ ಬಳಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

ಪೆಹಲ್ಟಾಮ್‌ನಲ್ಲಿ ದಾಳಿ ನಡೆದ ಸಂದರ್ಭದಲ್ಲಿ ಉಗ್ರರ ಚಲನವಲನಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ದಾಳಿಯ ವೇಳೆ ಎಷ್ಟು ಜನ ಉಗ್ರರಿದ್ದರು. ದಾಳಿ ಮಾಡುವಾಗ ಅವರು ಏನೆಲ್ಲಾ ಮಾತನಾಡಿದರು ಎಂಬುದರ ಕುರಿತು ಪ್ರಮುಖ ಮಾಹಿತಿಗಳನ್ನು ಕೂಡ ಸಂಗ್ರಹಿಸಿದ್ದಾರೆ.

ಈಗಾಗಲೇ 14 ಜನ ಉಗ್ರರ ಪಟ್ಟಿ ಮಾಡಿರುವ ಎನ್‌ಐಎ ತಂಡ, ಉಗ್ರರ ಪಟ್ಟಿ ಹಾಗೂ ಕೆಲ ಫೋಟೋಗಳನ್ನು ಮುಂದಿಟ್ಟು ವಿಚಾರಣೆ ನಡೆಸುತ್ತಿದೆ. ಜೊತೆಗೆ ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ.

ಯಾವ ಟ್ರಾವೆಲ್ ಏಜೆನ್ಸಿಯಿಂದ ಪ್ರಯಾಣಿಸಿದ್ದಾರೆ ಎಂಬ ಮಾಹಿತಿಯಿಂದ ಆರಂಭಿಸಿ, ಕಾಶ್ಮೀರದಲ್ಲಿ ಎಲ್ಲಿ ಉಳಿದಿದ್ದರು, ಎಷ್ಟೋತ್ತಿಗೆ ಪೆಹಲ್ಯಾಮ್ ಹೋಗಿದ್ದರು. ಯಾರೆಲ್ಲಾ ಹೋಗಿದ್ದರು. ಉಗ್ರರು ಎಷ್ಟು ಜನ ಇದ್ದರು, ಹಾಗೇ ಯಾವ ಭಾಷೆ ಮಾತನಾಡಿದ್ದರು ಎಂಬ ವಿವರಗಳನ್ನು ಪಡೆಉಕೊಂಡಿದ್ದಾರೆ ಎಂದು ಎನ್ ಐಎ ಮೂಲಗಳು.

ಸುಮಾರು 12 ಗಂಟೆಗಳ ಕಾಲ ಭರತ್ ಭೂಷಣ್ ಅವರ ಮನೆಯಲ್ಲಿ ಎನ್‌ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಈ ಅವಧಿಯಲ್ಲಿ ಭರತ್ ಭೂಷಣ್ ಅವರ ಪತ್ನಿ ಸುಜಾತ ಅವರಿಂದ ಎನ್‌ಐಎ ಅಧಿಕಾರಿಗಳು ಇಂಚಿಂಚೂ ಮಾಹಿತಿಯನ್ನು ಸಂಗ್ರಹಿಸಿದ್ದಾರೆ ಎನ್ನಲಾಗಿದೆ. ಅಧಿಕಾರಿಗಳು ಸುಜಾತ ಅವರ ಬಳಿ ಸುಮಾರು 6 ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಕಾಶ್ಮೀರ ಪ್ರವಾಸದ ಕುರಿತು ಪ್ರಶ್ನೆಗಳನ್ನು ಕೇಳಿದ್ದಾರೆ. ಯಾವತ್ತು ನೀವು ಕಾಶ್ಮೀರಕ್ಕೆ ಹೋಗಿದ್ದು?, ಯಾವ ಟ್ರಾವೆಲ್ಸ್ ಮೂಲಕ ಹೋದ್ರಿ?, ಕಾಶ್ಮೀರದಲ್ಲಿ ಎಲ್ಲಿ ಉಳಿದುಕೊಂಡಿದ್ರಿ?, ಪೆಹಲಾಮ್‌ಗೆ ಯಾವತ್ತೂ ಹೋದ್ರಿ?, ಎಷ್ಟೋತ್ತಿಗೆ ಹೋದ್ರಿ? ಎನ್ನುವಂತೆ ಹಲವು ಪ್ರಶ್ನೆಗಳು ಕೇಳಲಾಯಿತು ಎಂದು ತಿಳಿದು ಬಂದಿದೆ.

ಅಧಿಕಾರಿಗಳು ಉಗ್ರರು ದಾಳಿ ಮಾಡಿದ ಸಮಯ, ಎಷ್ಟು ಜನ ಇದ್ದರು, ಅವರು ಯಾವ ಭಾಷೆಯಲ್ಲಿ ಮಾತನಾಡಿದರು ಎಂಬ ವಿಷಯಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿದರು. ಭರತ್ ಭೂಷಣ್ ಬಳಿ ಏನಾದ್ರೂ ಮಾತನಾಡಿದ್ರಾ?, ನಿಮ್ಮ ಬಳಿ ಏನ್ ಮಾತನಾಡಿದ್ರು?. ಅವರ ಮುಖದ ಚಹರೆ ನೆನಪು ಇದೆಯಾ?, ಮುಖ ಯಾವ ರೀತಿ ಇತ್ತು, ಮುಖದ ಮೇಲೆ ಯಾವುದಾದರೂ ಮಾರ್ಕ್ ಇತ್ತಾ? ಎಂಬ ಪ್ರಶ್ನೆಗಳ ಕೇಳಿದ್ದಾರೆ ಎನ್ನಲಾಗ್ತಿದೆ.

ಇದರ ಜೊತೆಗೆ ಸುಮಾರು 14ಕ್ಕೂ ಹೆಚ್ಚು ಶಂಕಿತರ ಫೋಟೋಗಳನ್ನು ತೋರಿಸಿದ ಅಧಿಕಾರಿಗಳು, ಇದರಲ್ಲಿ ಯಾರಾದ್ರೂ ಇದ್ರಾ? ಎಂದು ಕೇಳಿದರು. ಭರತ್ ಪತ್ನಿಯ ಹೇಳಿಕೆ ಆಧರಿಸಿ ಎನ್‌ಐಎ ಕೆಲ ರೇಖಾಚಿತ್ರಗಳನ್ನು ಬಿಡಿಸಿದ್ದು, ಈ ರೇಖಾಚಿತ್ರಗಳನ್ನು ತೋರಿಸಿಕೊಂಡು ಇನ್ನಷ್ಟು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಒಂದು ಮೂಲದ ಪ್ರಕಾರ ಎನ್‌ಐಎ ಅಧಿಕಾರಿಗಳು ಯಾವುದೇ ಕ್ಷಣದಲ್ಲಿ ಶಿವಮೊಗ್ಗಕ್ಕೂ ಭೇಟಿ ನೀಡಿ ಘಟನೆಯಲ್ಲಿ ಸಾವನ್ನಪ್ಪಿದ ಮಂಜುನಾಥರಾವ್ ಅವರ ಪತ್ನಿ ಹಾಗೂ ಪುತ್ರನಿಂದಲೂ ಮಾಹಿತಿ ಪಡೆಯಲಿದ್ದಾರೆ ಎಂದು ಹೇಳಲಾಗಿದೆ. ಪಹಲ್ಯಾಮ್ ಘಟನೆಯ ತನಿಖೆಯನ್ನು ಕೇಂದ್ರ ಸರ್ಕಾರ ಎನ್‌ಐಎಗೆ ವಹಿಸಿದೆ.

ಕಳೆದ ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಲಂಗ್ಲಾನ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಟ್ಟುಕೊಂಡು ಪಾಕಿಸ್ತಾನದ ಮೂಲದ ಉಗ್ರರು ನಡೆಸಿದ ಭೀಕರ ನರಮೇಧದಲ್ಲಿ 26 ಮಂದಿ ಸಾವನ್ನಪ್ಪಿದ್ದರು. ಈ ಘಟನೆಯ ನಂತರ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

RELATED ARTICLES

Latest News