ರಾಜ್ಯದ ಹಲವೆಡೆ ನಿಷೇಧಿತ PFI ಪದಾಧಿಕಾರಿಗಳ ಮನೆಗಳ ಮೇಲೆ NIA ದಾಳಿ

Social Share

ಬೆಂಗಳೂರು, ನ.5- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಅಧಿಕಾರಿಗಳು ನಿಷೇಧಿತ ಪಿಎಫ್‍ಐ ಸಂಘಟನೆಯ ಪದಾಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ದಾಖಲಾತಿಗಳ ಪರಿಶೀಲನೆ ನಡೆಸಿದೆ.

ಇಂದು ಬೆಳಗ್ಗೆ ಮೈಸೂರು, ಹುಬ್ಬಳ್ಳಿ, ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ. ಸಾಂಸ್ಕøತಿಕ ನಗರಿ ಮೈಸೂರಿನ ಮಂಡಿಮೊಹಲ್ಲಾದ ವಾಸಿಯಾಗಿರುವ ಪಿಎಫ್‍ಐ ಸಂಘಟನೆಯ ಮಾಜಿ ಕಾರ್ಯದರ್ಶಿ ಸುಲೇಮಾನ್‍ರ ಮನೆ ಮೇಲೆ ದಾಳಿ ನಡೆಸಲಾಗಿದೆ.

ಪಿಎಫ್‍ಐ ನಿಷೇಧದ ನಂತರ ಸಂಘಟನೆಯ ಚಟುವಟಿಕೆಗಳಲ್ಲಿ ಯಾರು ಸಕ್ರಿಯರಾಗಿದ್ದಾರೆ. ತಟಸ್ಥವಾಗಿರುವವರು ಯಾರು ಎಂಬ ಮಾಹಿತಿ ಕಲೆ ಹಾಕಲಾಗಿದೆ. ಸುಲೇಮನ್‍ರ ಫೋನ್ ಕಾಲ್ ಲಿಸ್ಟ್ ಗಳನ್ನು ಪರಿಶೀನೆ ನಡೆಸಿ, ಇತರ ಸಂಪರ್ಕಗಳ ಕುರಿತು ವಿಚಾರಣೆ ನಡೆಸಲಾಗಿದೆ. ಸುಲೇಮಾನ್‍ರನ್ನು ವಶಕ್ಕೆ ಪಡೆದ ಎನ್‍ಐಎ ಅಧಿಕಾರಿಗಳು ರಹಸ್ಯೆ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಗೊತ್ತಾಗಿದೆ.

ಧಾರವಾಡ ಜಿಲ್ಲೆ ಹಳೆ ಹುಬ್ಬಳ್ಳಿಯಲ್ಲಿ ನುರಾನಿ ಪ್ಲಾಟ್‍ನಲ್ಲಿರುವ ಎಸ್‍ಡಿಪಿಐ ಮುಖಂಡ ಇಸ್ಮಾಯಿಲ್ ನಾಲಾಬಂದ್ ಅವರ ಮನೆಯ ಮೇಲೆ ಎನ್‍ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದಾರೆ. ಇಂದು ಮುಂಜಾನೆ 4 ಗಂಟೆಗೆ 10 ಜನ ಅಧಿಕಾರಿಗಳ ತಂಡ ಇಸ್ಮಾಯಿಲ್‍ರ ಮನೆಯಲ್ಲಿ ದಾಖಲಾತಿಗಳ ಪರಿಶೀಲನೆ ನಡೆಸಿ, ಇಸ್ಮಾಯಿಲ್‍ರನ್ನು ವಿಚಾರಣೆ ನಡೆಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನಲ್ಲೂ ಎನ್‍ಐಎ ದಾಳಿ ನಡೆದು, ಮೂವರನ್ನು ವಶಕ್ಕೆ ಪಡೆಯಲಾಗಿದೆ. ಗ್ರಾಮ ಪಂಚಾಯತ್ ಸದಸ್ಯರಾದ ಇಕ್ಬಾಲ್ ಬೆಳ್ಳಾರೆ, ಎಸ್‍ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಸುಳ್ಳದ ಇಬ್ರಾಹಿಂ ಶಾ ಅವರನ್ನು ವಿಚಾರಣೆಗೆ ಒಳಪಡಿಸಿರುವುದಾಗಿ ತಿಳಿದು ಬಂದಿದೆ.

ಮತ್ತೆ ದೆಹಲಿಯತ್ತ ಸಿಎಂ, ಸಂಪುಟ ವಿಸ್ತರಣೆಯೋ..?ಪುನಾರಚನೆಯೊ..?

ಇತ್ತೀಚೆಗೆ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಸಿದಂತೆ ಕೆಲ ಸಂಘಟನೆಗಳ ವಿರುದ್ಧ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಎನ್‍ಐಎ ಮಾಹಿತಿ ಕಲೆ ಹಾಕುತ್ತಿದೆ. ಸ್ಥಳೀಯ ಜಿಲ್ಲಾ ಆಡಳಿತಕ್ಕೆ ದಾಳಿಯ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಮೂಲಗಳು ಸ್ಪಷ್ಟ ಪಡಿಸಿವೆ.

ಭಯೋತ್ಪಾದನಾ ಕೃತ್ಯಗಳಿಗೆ ಬೆಂಬಲ ನೀಡುತ್ತಿರುವುದು ಮತ್ತು ಹಣಕಾಸು ಸಂಗ್ರಹ ನಡೆಸಿದ ಆರೋಪದ ಮೇಲೆ ಕೇಂದ್ರ ಸರ್ಕಾರ ಇತ್ತೀಚೆಗೆ ಪಿಎಫ್‍ಐ ಸಂಘಟನೆಯನ್ನು ನಿಷೇಸಿತ್ತು. ಆ ವೇಳೆ ಮೊದಲ ಹಂತದಲ್ಲಿ ದೇಶಾದ್ಯಂತ ಕಾರ್ಯಾಚರಣೆ ನಡೆಸಲಾಗಿದ್ದು 106 ಮಂದಿಯನ್ನು ಬಂಧಿಸಲಾಗಿತ್ತು. ನಂತರ ವಿವಿಧ ಹಂತಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು 247 ಮಂದಿಯನ್ನು ಬಂಧಿಸಲಾಗಿದೆ.

ಮಹಾರಾಷ್ಟ್ರ, ಅಸ್ಸಾ ಸೇರಿದಂತೆ ವಿವಿಧ ಕಡೆಗಳಲ್ಲಿ ಹಲವು ಸುತ್ತಿನ ದಾಳಿಗಳಾಗಿವೆ. ಜಾರಿ ನಿರ್ದೇಶನಾಲಯವೂ ದಾಳಿ ನಡೆಸಿ ಮಾಹಿತಿ ಕಲೆ ಹಾಕಲಾಗಿತ್ತು. ಬಂತ ಆರೋಪಿಗಳ ವಿರುದ್ಧ ಯುಎಪಿಎ ಕಾಯ್ಕೆ ಅಡಿ ಪ್ರಕರಣ ದಾಖಲಿಸಲಾಗಿತ್ತು.

ಸುಮಾರು ಎರಡು ತಿಂಗಳ ನಂತರ ಮತ್ತೆ ಎನ್‍ಐಎ ದಾಳಿ ನಡೆಸಿದೆ. ಎಸ್‍ಡಿಪಿಯ ಜೊತೆ ಗುರುತಿಸಿಕೊಂಡಿದ್ದವರು, ನಿಷೇಧದ ಬಳಿಕ ಹಲವು ಸಂಘಟನೆಗಳಲ್ಲಿ ಸಕ್ರಿಯರಾಗಿದ್ದಾರೆ ಎಂಬ ಆರೋಪಗಳಿವೆ.

Articles You Might Like

Share This Article