ನವದೆಹಲಿ,ಡಿ.5- ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇಂದು ಕರ್ನಾಟಕದ 16 ಸ್ಥಳಗಳಲ್ಲಿ ಶೋಧ ನಡೆಸಿದೆ.2022ರ ಜುಲೈನಲ್ಲಿ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದ ನೆಟ್ಟಾರು ಅವರನ್ನು ಪಾಪ್ಯುರ್ಲ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸದಸ್ಯರು ಎಂದು ಆರೋಪಿಸಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ಮೋಟಾರ್ಸೈಕಲ್ನಲ್ಲಿ ಬಂದ ಇಬ್ಬರು ದುಷ್ಕರ್ಮಿ ಗಳು ಕೊಂದಿದ್ದರು.
ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ 16 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ. 2022ರ ಆ.4ರಂದು ಸ್ಥಳೀಯ ಪೊಲೀಸರಿಂದ ತನಿಖೆಯನ್ನು ಎನ್ಐಎ ವಹಿಸಿಕೊಂಡಿತ್ತು ಮತ್ತು 2023ರ ಜನವರಿಯಲ್ಲಿ 21 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿತ್ತು.
ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ಗೆ ಆಶ್ರಯ ನೀಡಿದ್ದ ಇಬ್ಬರು ಆರೋಪಿಗಳಾದ ಮನ್ಸೂರ್ ಪಾಷಾ ಹಾಗೂ ರಿಯಾಜ್ ಹೆಚ್.ವೈ. ಎಂಬವರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಚಾರ್ಜ್ಶೀಟ್ ಸಲ್ಲಿಸಿತ್ತು.
2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಮೇಲೆ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಮಾರ್ಗಮಧ್ಯೆ ಮೃತಪಟ್ಟಿದ್ದರು. ಕೃತ್ಯದ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಅದೇ ವರ್ಷ ಆ.4ರಂದು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದ ಎನ್ಐಎ ತನಿಖೆಗಿಳಿದಿತ್ತು.
ಎನ್ಐಎ ಅಧಿಕಾರಿಗಳು ತಲೆಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಸಂಚುಕೋರ ಹಾಗೂ ರಾಜ್ಯದಲ್ಲಿ ಪಿಎಫ್ಐ ಸಂಘಟನೆಯ ಮಾಸ್ಟರ್ ಟ್ರೈನರ್ ಆಗಿದ್ದ ಆರೋಪಿ ಮುಸ್ತಫಾ ಪೈಚಾರ್ ಹಾಗೂ ಆತನಿಗೆ ನೆರವು ನೀಡಿದ್ದ ಮನ್ಸೂರ್ ಪಾಷಾನನ್ನು ಮೇ 10ರಂದು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಂಧಿಸಿದ್ದರು.
ಬಳಿಕ ಆರೋಪಿ ಮುಸ್ತಫಾ ಪೈಚಾರ್ಗೆ ಆಶ್ರಯ ನೀಡಿದ್ದ ಮತ್ತೋರ್ವ ಆರೋಪಿ ರಿಯಾಜ್ ಹೆಚ್.ವೈ. ಭಾರತದಿಂದ ಪರಾರಿಯಾಗಲು ಯತ್ನಿಸುತ್ತಿದ್ದಾಗ ಜೂ.3ರಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.
ಇಬ್ಬರೂ ಆರೋಪಿಗಳ ಪಾತ್ರದ ಕುರಿತು ಐಪಿಸಿಯ ಸೆಕ್ಷನ್ 120 ಬಿ ಮತ್ತು 212 ಮತ್ತು ಯುಎ ಆ್ಯಕ್ಟ್ನ ಸೆಕ್ಷನ್ 19ರ ಆಧಾರದಲ್ಲಿ ತಕ್ಷಣ ಪ್ರಕರಣ ದಾಖಲಿಸಿದ ಎನ್ಐಎ ಸದ್ಯ ಇಬ್ಬರ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದೆ. ಪ್ರಕರಣದಲ್ಲಿ ಇದುವರೆಗೆ 19 ಆರೋಪಿಗಳನ್ನು ಬಂಧಿಸಿದಂತಾಗಿದ್ದು, ಉಳಿದ ಏಳು ಜನ ಆರೋಪಿಗಳಿಗಾಗಿ ಪತ್ತೆ ಕಾರ್ಯ ಮುಂದುವರೆದಿದೆ.
ಈ ಪ್ರಕರಣ ಸಂಬಂದ ಮುಸ್ತಫಾ ಪೈಚಾರ್ ಬಂಧಿತ ಆರೋಪಿ. ಇಂದು ಬೆಳಗ್ಗೆ ಹಾಸನ ಜಿಲ್ಲೆ ಸಕಲೇಶಪುರದ ಆನೆಮಹಲ್ ಬಳಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ ಮೂಲಗಳು ತಿಳಿಸಿವೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ಅವರು 2002ರ ಜು.26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.
ತಕ್ಷಣ ಪುತ್ತೂರು ಆಸ್ಪತ್ರೆಗೆ ಪ್ರವೀಣ್ ಅವರನ್ನು ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದ ಕಾರಣ ಚಿಕಿತ್ಸೆ ಫಲಕರಿಯಾಗದೇ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಈವರೆಗೆ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
ಬಂಧಿತ ಆರೋಪಿ ಮುಸ್ತಫಾ ಪೈಚಾರ್. ಆರಂಭದಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಲಾಗಿತ್ತು. ಕಳೆದ ವರ್ಷ ಜನವರಿಯಲ್ಲಿ ಎನ್ಐಎ 21 ಜನರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿತ್ತು. ಎನ್ಐಎ ಚಾರ್ಜ್ಶೀಟ್ನ ಪ್ರಕಾರ, ಒಂದು ಸಮುದಾಯದ ಸದಸ್ಯರಲ್ಲಿ ಭಯವನ್ನು ಸೃಷ್ಟಿಸಲು ಮತ್ತು ಸಮಾಜದಲ್ಲಿ ಕೋಮು ದ್ವೇಷ, ಅಶಾಂತಿಯನ್ನು ಸೃಷ್ಟಿಸಲು ಪಿಎಫ್ಐನ ಕಾರ್ಯಸೂಚಿಯ ಭಾಗವಾಗಿ ನೆಟ್ಟಾರು ಅವರನ್ನು ಹತ್ಯೆ ಮಾಡಲಾಗಿದೆ ಎನ್ನಲಾಗಿತ್ತು.
2022 ರ ಸೆಪ್ಟೆಂಬರ್ನಲ್ಲಿ ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮೇಲೆ ಐದು ವರ್ಷಗಳ ನಿಷೇಧ ಹೇರಿತ್ತು. ಪಿಎಫ್ಐ ಮತ್ತು ಅದರ ಎಲ್ಲ ಅಂಗ ಸಂಸ್ಥೆಗಳು, ಸಹವರ್ತಿಗಳು ಹಾಗೂ ರಂಗಗಳನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಅಡಿ ನಿಷೇಧ ಹೊರಡಿಸಿತ್ತು. ಇದರೊಂದಿಗೆ ಯುಎಪಿಎ ಸೆಕ್ಷನ್ 35ರ ಅಡಿ ನಿಷೇಧಕ್ಕೆ ಒಳಗಾದ 42 ಭಯೋತ್ಪಾದನಾ ಸಂಘಟನೆಗಳ ಪಟ್ಟಿಗೆ ಪಿಎಫ್ಐ ಸೇರ್ಪಡೆಯಾಗಿದೆ.