ಬೆಂಗಳೂರು, ಡಿ.13- ಭಯೋತ್ಪಾದನೆ ಸಂಚಿನ ಪ್ರಕರಣದ ಹಿನ್ನೆಲೆಯಲ್ಲಿ ಎನ್ಐಎ ನಗರದ 6 ಕಡೆ ದಾಳಿ ನಡೆಸಿದೆ.ಇಸ್ಲಾಮಿಕ್ ಸ್ಟೇಟ್ (ಐಎಸ್) ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ನಗರದ ಉದ್ಯಮಿಯೊಬ್ಬರನ್ನು ಕಳೆದ ಶನಿವಾರ ಎನ್ಐಎ ಅಧಿಕಾರಿಗಳು ವಿಚಾರಣೆಗೊಳಪಡಿಸಿ, ಕೆಲವು ಮಾಹಿತಿಗಳನ್ನು ಪಡೆದುಕೊಂಡಿದ್ದರು.
ಮೂಲಗಳ ಪ್ರಕಾರ, 2008 ರ ಬೆಂಗಳೂರು ಸೋಟದ ಮಾಸ್ಟರ್ ಮೈಂಡ್ ಎಂದು ಗುರುತಿಸಲಾದ ಟಿ.ನಾಸಿರ್, ಜೈಲಿನಲ್ಲಿ ಅಲ್ಲಿನ ಐದಾರು ಮಂದಿ ವಿಚಾರಣಾ ಖೈದಿಗಳ ಮನಪರಿವರ್ತನೆ ಮಾಡಿದ್ದಾನೆಂಬ ಶಂಕೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಗೊತ್ತಾಗಿದೆ.
ಸ್ನೇಹಿತನ ಜೊತೆ ಸಹಕರಿಸುವಂತೆ ಪೀಡಿಸುತ್ತಿದ್ದ ಪತಿ ವಿರುದ್ಧ ದೂರು
ನಗರದ ಆರ್.ಟಿ.ನಗರ, ಹೆಬ್ಬಾಳ ಮುಂತಾದ ಪ್ರದೇಶಗಳಲ್ಲಿ ಎನ್ಐಎ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಿನ್ನೆ ಮತ್ತು ಇಂದು ದಾಳಿ ನಡೆಸಿದ್ದಾರೆ.ಈ ದಾಳಿಯ ಸಂದರ್ಭದಲ್ಲಿ ಕೆಲವು ದಾಖಲೆಗಳನ್ನು ಎನ್ಐಎ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಕಳೆದ ಶನಿವಾರ ಮಹಾರಾಷ್ಟ್ರ ಮತ್ತು ಬೆಂಗಳೂರು ನಗರದಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದರು.