ಬೆಂಗಳೂರು,ಡಿ.2- ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಿಸಿರುವ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಮಹತ್ವದ ಮಾಹಿತಿಗಳನ್ನು ಕಲೆ ಹಾಕಿದೆ. ನ.19ರಂದು ಮಂಗಳೂರಿನ ನಾಗೋರಿ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಪೋಟದ ಹಿಂದೆ ಉಗ್ರ ಚಟುವಟಿಕೆಗಳ ಸುಳಿವು ಇರುವುದರಿಂದ ರಾಷ್ಟ್ರೀಯ ತನಿಖಾ ದಳ ಪ್ರಕರಣವನ್ನು ಕೈಗೆತ್ತಿಕೊಂಡಿದೆ.
ರಾಜ್ಯದ ಪೊಲೀಸರು ಈಗಾಗಲೇ ಸಮಗ್ರ ತನಿಖೆ ನಡೆಸಿ ಸಾಕಷ್ಟು ಮಾಹಿತಿಗಳನ್ನು ಪತ್ತೆಹಚ್ಚಿದ್ದಾರೆ. ಶಾರೀಕ್‍ಗೆ ಅಂತಾರಾಷ್ಟ್ರೀಯ ನಂಟಿರುವುದರಿಂದ ಕೇಂದ್ರೀಯ ತನಿಖಾ ಸಂಸ್ಥೆಗಳ ಸಹಭಾಗಿತ್ವ ಅನಿವಾರ್ಯವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಎನ್‍ಐಎಗೆ ಒಪ್ಪಿಸಿದೆ.
ಗಡಿ ಭಾಗದಲ್ಲಿ ಮರಾಠಿ ಶಾಲೆ ಸ್ಥಾಪನೆಗೆ ತಡೆ
ಸ್ಪೋಟದಲ್ಲಿ ಶಾರೀಕ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈಗ ಆತನ ಆರೋಗ್ಯ ಸುಧಾರಣೆಯಾಗಿದ್ದು, ದೈಹಿಕ ಕ್ಷಮತೆ ಹೊಂದಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ. ರಾಜ್ಯದ ಪೊಲೀಸರು ಈಗಾಗಲೇ ಶಾರೀಕ್‍ನನ್ನು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದಾರೆ.
ಕನ್ನಡ ಬಾವುಟ ಹಾರಿಸಿದ ಯುವಕನಿಗೆ ಪೊಲೀಸ್ ಥಳಿತ : ತನಿಖೆಗೆ ಸಿಎಂ ಸೂಚನೆ
ಎನ್‍ಐಎ ಅಧಿಕಾರಿಗಳು ಕೂಡ ಮತ್ತಷ್ಟು ಮಾಹಿತಿ ಕಲೆ ಹಾಕಿದ್ದು, ಆನತೊಂದಿಗೆ ಸಂಪರ್ಕದಲ್ಲಿದ್ದ ಅಂತಾರಾಷ್ಟ್ರೀಯ ಮಟ್ಟದ ಶಂಕಿತರ ಬೆನ್ನತ್ತಿದ್ದಾರೆ.
NIA, takes, investigation, Mangaluru, cooker, blast, case,