ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸಂಚಾರಕ್ಕೆ ನಿರ್ಬಂಧ

Social Share

ಬೆಂಗಳೂರು, ಜ.13- ಪ್ರಯಾಣಿಕರ ಹಿತದೃಷ್ಟಿಯಿಂದ ಇದೇ 16ರಿಂದ ಅನ್ವಯವಾಗುವಂತೆ ಪ್ರತಿನಿತ್ಯ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ.
ಬೆಂಗಳೂರು ನಗರ ಸಂಚಾರಿ ಜಂಟಿ ಆಯುಕ್ತರ ಸೂಚನೆಯಂತೆ ನೈಸ್ ರಸ್ತೆಯಲ್ಲಿ ಸೋಮವಾರದಿಂದ ಜಾರಿಗೆ ಬರುವಂತೆ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ದ್ವಿಚಕ್ರ ವಾಹನ ಸಂಚಾರಕ್ಕೆ ನಿರ್ಬಂಧ ವಿಸಲಾಗಿದೆ.
ಇತ್ತೀಚೆಗೆ ಈ ರಸ್ತೆಯಲ್ಲಿ ರಾತ್ರಿ ವೇಳೆ ಅಪಘಾತಗಳ ಸಂಖ್ಯೆ ಹೆಚ್ಚಳ ಹಾಗೂ ಕೆಲವು ಅಹಿತಕರ ಘಟನೆಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

Articles You Might Like

Share This Article