ಅಕ್ರಮವಾಗಿ ನೆಲೆಸಿದ್ದ ನೈಜೀರಿಯಾ ಪ್ರಜೆ ಅರೆಸ್ಟ್, ಮಾದಕ ವಸ್ತು ಜಪ್ತಿ

Social Share

ಬೆಂಗಳೂರು, ಡಿ.26- ಅಕ್ರಮವಾಗಿ ನಗರದಲ್ಲಿ ನೆಲೆಸಿದ್ದ ನೈಜೀರಿಯಾ ಪ್ರಜೆಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿ 13 ಗ್ರಾಂ 61 ಮಿಲಿ ತೂಕದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಜೇಮ್ಸ್ ಇಪೊಲುವಾ ಓವಾಲೆ(26) ಬಂಧಿತ ನೈಜೀರಿಯಾ ಪ್ರಜೆ. ಈತ ಬೆಂಗಳೂರು ಉತ್ತರ ತಾಲೂಕು ವಿದ್ಯಾರಣ್ಯ ಪುರದ ವಡೇರಹಳ್ಳಿ ಲೇಔಟ್‍ನಲ್ಲಿ ನೆಲೆಸಿದ್ದನು.

ಸುಮ್ಮನಹಳ್ಳಿಯ ಬಸ್ ನಿಲ್ದಾಣದ ಹತ್ತಿರ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ನೈಜೀರಿಯಾ ಪ್ರಜೆಯನ್ನು ಬಂಧಿಸಿ 3.46 ಗ್ರಾಂ ತೂಕದ ಎಂಡಿಎಂಎ ವಶಪಡಿಸಿಕೊಂಡು ಆರೋಪಿ ವಿರುದ್ಧ ಎನ್‍ಡಿಪಿಎಸ್ ಕಾಯ್ದೆ ಹಾಗೂ ವಿದೇಶಿ ಕಾಯ್ದೆ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ವಿಚಾರಣೆಗೆ ಒಳಪಡಿಸಿ ಆತ ವಾಸಿಸುತ್ತಿದ್ದ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 10.15 ಗ್ರಾಂ ತೂಕದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.

ಹೊಟೇಲ್‍ಗಳಲ್ಲಿ ಸ್ಮೋಕಿಂಗ್ ಜೋನ್ ಕಡ್ಡಾಯ : ಬಿಬಿಎಂಪಿ ಆದೇಶ

ಆರೋಪಿಯು ಅಕ್ರಮವಾಗಿ ನಗರದಲ್ಲಿ ನೆಲೆಸಿದ್ದು ಈತನ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುತ್ತದೆ.

ಮಾದಕ ವಸ್ತು ಮಾರಾಟವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ಪತ್ತೆ ಮಾಡಲು ಪಶ್ಚಿಮ ವಿಭಾಗದ ಉಪಪೊಲೀಸ್ ಆಯುಕ್ತ ಲಕ್ಷ್ಮಣ ಬಿ. ನಿಂಬರಗಿ ಅವರ ಮಾರ್ಗದರ್ಶನದಲ್ಲಿ ವಿಜಯನಗರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ರವಿ ಅವರ ನೇತೃತ್ವದಲ್ಲಿ ಇನ್ಸ್‍ಪೆಕ್ಟರ್ ರೋಹಿತ್ ಅವರನ್ನೊಳಗೊಂಡ ಸಿಬ್ಬಂದಿ ತಂಡ ಈ ಕಾರ್ಯಾಚರಣೆ ಕೈಗೊಂಡಿತ್ತು.

Nigerian citizen, arrested, drugs,

Articles You Might Like

Share This Article