ಭಾರತ- ಪಾಕ್ ಗಡಿಯಲ್ಲಿ ನೈಟ್ ಕರ್ಫ್ಯೂ

Social Share

ಶ್ರೀನಗರ,ಜ.4- ಭಾರತ- ಪಾಕ್ ಅಂತಾರಾಷ್ಟ್ರೀಯ ಗಡಿಯಲ್ಲಿ ರಾತ್ರಿ ಕಫ್ರ್ಯೂ ವಿಧಿಸಲಾಗಿದೆ. ಪ್ರಸ್ತುತ ಮಂಜಿನ ವಾತಾವರಣವಿರುವುದರಿಂದ ಹಾಗೂ ಡ್ರೋನ್‍ಗಳ ಮೂಲಕ ಗಡಿಯಾಚೆ ನುಸುಳುವಿಕೆ ಮತ್ತು ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ.

ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯಿಂದ 1 ಕಿಮೀವರೆಗಿನ ಪ್ರದೇಶದಲ್ಲಿ ರಾತ್ರಿ 9 ರಿಂದ ಬೆಳಿಗ್ಗೆ 6 ರವರೆಗೆ ನಾಗರಿಕರ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುರಾಧಾ ಗುಪ್ತಾ ಅವರು ತಿಳಿಸಿದ್ದಾರೆ.

ಭಾರತಕ್ಕೆ ಅಮೆರಿಕ ರಾಯಭಾರಿಯಾಗಿ ಎರಿಕ್ ಗಾರ್ಸೆಟ್ಟಿ ನೇಮಕ

ಜಿಲ್ಲಾ ಮಟ್ಟದ ಸ್ಥಾಯಿ ಸಮಿತಿಯ ಸಭೆಯಲ್ಲಿ, ಗಡಿ ಭದ್ರತಾ ಪಡೆ (ಬಿಎಸ್‍ಎಫï) ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ನಿರ್ವಹಿಸಲು ಅನುವು ಮಾಡಿಕೊಡುವ ಸಲುವಾಗಿ ರಾತ್ರಿ ಕಫ್ರ್ಯೂ ವಿಧಿಸಲು ತೀರ್ಮಾನಿಸಲಾಗಿದೆ.

ಗಡಿಯಲ್ಲಿ ಸಂಚರಿಸಲೇಬೇಕಾದ ಅಗತ್ಯವಿದ್ದಲ್ಲಿ ತಮ್ಮ ಗುರುತಿನ ಚೀಟಿಗಳನ್ನು ಬಿಎಸ್‍ಎಫ್ ಮತ್ತು ಪೊಲೀಸ್ ಅಧಿಕಾರಿಗಳಿಗೆ ಹಾಜರುಪಡಿಸ ಬೇಕಾಗುತ್ತದೆ ಎಂದು ಅವರು ಹೇಳಿದರು.

#NightCurfew, #Imposed, #IndoPak, #Border,

Articles You Might Like

Share This Article