Sunday, September 15, 2024
Homeಬೆಂಗಳೂರುಸಂಚಾರಿ ಪೊಲೀಸ್ ಠಾಣೆಗಳಲ್ಲಿ ಇಬ್ಬರು ಮಹಿಳಾ ಸಿಬ್ಬಂದಿಗೆ ರಾತ್ರಿ ಕರ್ತವ್ಯ ಕಡ್ಡಾಯ

ಸಂಚಾರಿ ಪೊಲೀಸ್ ಠಾಣೆಗಳಲ್ಲಿ ಇಬ್ಬರು ಮಹಿಳಾ ಸಿಬ್ಬಂದಿಗೆ ರಾತ್ರಿ ಕರ್ತವ್ಯ ಕಡ್ಡಾಯ

Night duty is mandatory for two women staff in traffic Police stations

ಬೆಂಗಳೂರು,ಆ.23-ನಗರದಲ್ಲಿ ರಾತ್ರಿ ವೇಳೆ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಚಾರ ವಿಭಾಗದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸಂಚಾರಿ ಪೊಲೀಸ್ ಠಾಣೆಗಳಲ್ಲಿ ಇಬ್ಬರು ಮಹಿಳಾ ಹೆಡ್ ಕಾನ್ಸ್ಟೆಬಲ್ ಮತ್ತು ಸಿಬ್ಬಂದಿಗಳನ್ನು ಕಡ್ಡಾಯವಾಗಿ ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ.

ಈ ಬಗ್ಗೆ ಜಂಟಿ ಪೊಲೀಸ್ ಆಯುಕ್ತರು ಸಂಚಾರಿ ವಿಭಾಗದ ಎಲ್ಲಾ ಇನ್ಸ್ ಫೆಕ್ಟರ್ಗಳಿಗೆ, ಉಪ ಪೊಲೀಸ್ ಆಯುಕ್ತರಿಗೆ ಮತ್ತು ಎಸಿಪಿಗಳಿಗೆ ಸೂಚನೆ ನೀಡಿದ್ದಾರೆ.

ಲೈಂಗಿಕ ದೌರ್ಜನ್ಯಗಳಂತಹ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವ ಸಲುವಾಗಿ ಸಂಚಾರಿ ವಿಭಾಗದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

RELATED ARTICLES

Latest News