Sunday, August 3, 2025
Homeರಾಜ್ಯ14 ಜಿಲ್ಲೆಗಳ 42 ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಮಾಡಿದ ನಿಖಿಲ್‌ ಕುಮಾರಸ್ವಾಮಿ

14 ಜಿಲ್ಲೆಗಳ 42 ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಮಾಡಿದ ನಿಖಿಲ್‌ ಕುಮಾರಸ್ವಾಮಿ

Nikhil Kumaraswamy toured 42 assembly constituencies in 14 districts

ಬೆಂಗಳೂರು, ಆ.2-ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಜನರೊಂದಿಗೆ ಜನತಾದಳ ಸದಸ್ಯತ್ವ ನೋಂದಣಿ ಅಭಿಯಾನದ ರಾಜ್ಯ ಪ್ರವಾಸ ಈಗಾಗಲೇ 14 ಜಿಲ್ಲೆಗಳಲ್ಲಿ ಪೂರ್ಣಗೊಂಡಿದೆ.

6 ಸಾವಿರ ಕಿ.ಮೀ. ಹೆಚ್ಚು ಪ್ರವಾಸ ಮಾಡಿರುವ ಅವರು 14 ಜಿಲ್ಲೆಗಳ ವ್ಯಾಪ್ತಿಯ 42 ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಕಾರ್ಯಕರ್ತರು ಜತೆ ಸಭೆ ನಡೆಸಿದ್ದಾರೆ. ಕಾರ್ಯಕರ್ತರು, ಮುಖಂಡರು ಹಾಗೂ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಳಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸುತ್ತಿದ್ದಾರೆ ಎಂದು ಜೆಡಿಎಸ್‌‍ ತಿಳಿಸಿದೆ.

ಪ್ರವಾಸ ಮಾಡಿರುವ ಎಲ್ಲಾ ಜಿಲ್ಲೆಗಳಲ್ಲಿಯೂ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸ ಹಾಗೂ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ನಿರೀಕ್ಷೆಗೂ ಮೀರಿದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದು, ಪ್ರವಾಸಕ್ಕೆ ಮತ್ತಷ್ಟು ಹುರುಪು ತಂದಿದೆ ಎಂದು ನಿಖಿಲ್‌ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಕನಿಷ್ಠ ಐವತ್ತು ಲಕ್ಷ ಜನರಿಗೆ ಪಕ್ಷದ ಸದಸ್ಯತ್ವ ನೀಡುವ ಗುರಿ ಇಟ್ಟುಕೊಂಡು ರಾಜ್ಯ ಪ್ರವಾಸ ಆರಂಭಿಸಿರುವ ಅವರು ನಾಳೆ ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಮೊದಲಿಗೆ ಹಿರಿಯೂರಿನ ಹರಿಯಬ್ಬೆ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಇಂತಹ ಪ್ರವಾಸ ಮಾಡುತ್ತಿರುವುದು ನನ್ನ ಭಾಗ್ಯ. ಕಾರ್ಯಕರ್ತರೊಂದಿಗೆ ಉತ್ತಮ ಸಂಬಂಧ, ಸ್ನೇಹ, ವಿಶ್ವಾಸ ಬೆಳೆಸಿಕೊಳ್ಳಬೇಕು. ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಬೇಕು. ಅವರ ಜತೆ ನಾನಿದ್ದೀನಿ ಎಂದು ಧೈರ್ಯ ತುಂಬಲು ಈ ರಾಜ್ಯ ಪ್ರವಾಸ ಕೈಗೊಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಕೊನೆಯ ಉಸಿರು ಇರುವವರೆಗೂ ಪಕ್ಷವನ್ನು ಕಟ್ಟಲು ನನ್ನ ಹೋರಾಟ ನಿರಂತರವಾಗಿರುತ್ತದೆ. ನಾವೆಲ್ಲರೂ ಜೊತೆಯಾಗಿ ಹೆಜ್ಜೆ ಹಾಕೋಣ. ಬಲಿಷ್ಠವಾಗಿ ಪಕ್ಷ ಕಟ್ಟೋಣ, 2028ಕ್ಕೆ ಮತ್ತೆ ಕುಮಾರಣ್ಣ ಅವರನ್ನು ಮುಖ್ಯಮಂತ್ರಿ ಮಾಡಲು ಈಗಿನಿಂದಲೇ ಹೋರಾಟ ಮಾಡೋಣ ಎಂದು ಅವರು ಕರೆ ನೀಡಿದ್ದಾರೆ.

RELATED ARTICLES

Latest News