Friday, February 7, 2025
Homeರಾಷ್ಟ್ರೀಯ | Nationalಮೇಘಾಲಯದಲ್ಲಿ 9 ಅಕ್ರಮ ಬಾಂಗ್ಲಾ ಪ್ರಜೆಗಳ ಬಂಧನ

ಮೇಘಾಲಯದಲ್ಲಿ 9 ಅಕ್ರಮ ಬಾಂಗ್ಲಾ ಪ್ರಜೆಗಳ ಬಂಧನ

Nine Bangladeshi Nationals Arrested for Illegal Entry in Meghalaya

ನವದೆಹಲಿ, ಫೆ.6– ಅಕ್ರಮವಾಗಿ ದೇಶ ಪ್ರವೇಶಿಸಿದ್ದ 9 ಬಾಂಗ್ಲಾದೇಶಿ ಪ್ರಜೆಗಳನ್ನು ಮೇಘಾಲಯದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ದಲಾಮ್ಗೆ ಗ್ರಾಮದಲ್ಲಿ ತಪಾಸಣೆ ನಡೆಸುವಾಗ ನೆರೆಯ ದೇಶದ ಗಡಿಯಲ್ಲಿಓುವ ಮೇಘಾಲಯದ ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಬಾಂಗ್ಲಾದೇಶಿಗಳು ವ್ಯಾನ್ನಲ್ಲಿ ಪ್ರಯಾಣಿಸುತ್ತಿದ್ದರು.

ಆಗ ಅವರನ್ನು ತಡೆದು ಪರಿಶೀಲಿಸಿದಾಗ ಅವರು ಅಕ್ರಮವಾಗಿ ದೇಶ ಪ್ರವೇಶಿಸಿರುವುದು ಪತ್ತೆಯಾಗಿತ್ತು ಎನ್ನಲಾಗಿದೆ. ಬಾಂಗ್ಲಾದೇಶಿ ಪ್ರಜೆಗಳಿಂದ ವಿವಿಧ ಸಿಮ್ ಕಾರ್ಡ್ಗಳು, ಭಾರತೀಯ ಕರೆನ್ಸಿ, ಆಧಾರ್ ಕಾರ್ಡ್ಗಳು ಮತ್ತು ದೋಷಾರೋಪಣೆಯ ದಾಖಲೆಗಳನ್ನು ಹೊಂದಿರುವ 12 ಮೊಬೈಲ್ ಹ್ಯಾಂಡ್ಸೆಟ್ಗಳು ಹಾಗು ಎರಡು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಒಂಬತ್ತು ಬಾಂಗ್ಲಾದೇಶೀಯರ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅವರ ಜೊತೆಗೆ ಮೂವರು ಭಾರತೀಯ ಸಂಚಾಲಕರನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ವಾರ ಮುಂಬೈನ ಘಾಟ್ಕೋಪರ್ನಲ್ಲಿ ಅಕ್ರಮವಾಗಿ ನೆಲೆಸಿದ್ದಕ್ಕಾಗಿ ಒಂಬತ್ತು ಬಾಂಗ್ಲಾದೇಶಿ ವಲಸಿಗರನ್ನು ಬಂಧಿಸಲಾಗಿತ್ತು. ಬಾಂಗ್ಲಾದೇಶಿಗಳ ಗುಂಪಿನಲ್ಲಿ ಮೂವರು ಮಕ್ಕಳು ಇರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅವರ ಬಳಿಯಿದ್ದ ನಕಲಿ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

RELATED ARTICLES

Latest News