ನವದೆಹಲಿ,ಡಿ.31- ಬಸ್ ಮತ್ತು ಎಸ್ಯುವಿ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಗುಜರಾತ್ನಲ್ಲಿ ನಡೆದಿದೆ. ಸೂರತ್ನಿಂದ ವಲ್ಸಾದ್ಗೆ ಸಂಚರಿಸುತ್ತಿದ್ದ ಐಷಾರಾಮಿ ಬಸ್ ಚಾಲಕನಿಗೆ ಹೃದಯಘಾತವಾದ ಪರಿಣಾಮ ಬಸ್ ಕಾರಿಗೆ ಅಪ್ಪಳಿಸಿದ್ದರಿಂದ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಜರಾತ್ನ ನವಸಾರಿ ಜಿಲ್ಲೆಯಲ್ಲಿ ಇಂದು ಈ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 28ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಸೂರತ್ನಲ್ಲಿ ನಡೆಯುತ್ತಿದ್ದ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮದಿಂದ ವಾಪಸಾಗುತ್ತಿದ್ದ ಜನರಿಂದ ತುಂಬಿದ್ದ ಬಸ್ ನವಸಾರಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 48 ರಲ್ಲಿ ಟೊಯೊಟಾ ಫಾರ್ಚುನರ್ ಕಾರಿಗೆ ಡಿಕ್ಕಿ ಹೊಡೆಯಿತು.
ಹೊಸ ವರ್ಷಕ್ಕೆ ಕಿಕ್ಕೇರಿಸಿಕೊಳ್ಳಲು ತಂದಿದ್ದ 6 ಕೋಟಿ ಮೌಲ್ಯದ ಡ್ರಗ್ಸ್ ವಶ..!
ಹೃದಯಘಾತಕ್ಕೆ ಒಳಗಾದ ಬಸ್ ಚಾಲಕ ಹಾಗೂ ಕಾರಿನಲ್ಲಿದ್ದ ಒಂಬತ್ತು ಮಂದಿ ಪೈಕಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ಸಿನಲ್ಲಿದ್ದ 28 ಮಂದಿ ಗಾಯಗೊಂಡಿದ್ದಾರೆ. 11 ಮಂದಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರುಶಿಕೇಶ್ ಉಪಾಧ್ಯಾಯ ತಿಳಿಸಿದ್ದಾರೆ.
ಕಾರಿನಲ್ಲಿದ್ದವರು ಗುಜರಾತ್ನ ಅಂಕಲೇಶ್ವರ ನಿವಾಸಿಗಳಾಗಿದ್ದು ಅವರು ವಲ್ಸಾದ್ನಿಂದ ತಮ್ಮ ಊರಿಗೆ ಹಿಂತಿರುಗುತ್ತಿದ್ದರು ಎಂದು ತಿಳಿದುಬಂದಿದೆ. 9 ಮಂದಿಯ ಸಾವಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಟ್ವಿಟ್ ಮಾಡಿದ್ದಾರೆ.
ಕಳಸಾ ಬಂಡೂರಿ ಯೋಜನೆ ಕ್ರೆಡಿಟ್ ಪಡೆಯಲು ಮೂರೂ ಪಕ್ಷಗಳ ವಾರ್
ಗುಜರಾತ್ ನ ನವಸಾರಿಯಲ್ಲಿ ನಡೆದ ರಸ್ತೆ ಅಪಘಾತ ಹೃದಯವಿದ್ರಾವಕವಾಗಿದೆ. ಈ ದುರಂತದಲ್ಲಿ ಕುಟುಂಬವನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ದೇವರು ಅವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ. ಸ್ಥಳೀಯ ಆಡಳಿತವು ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡುತ್ತಿದೆ, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತಿದ್ದಾರೆ. , ಎಂದು ಅವರು ಗುಜರಾತಿಯಲ್ಲಿ ಟ್ವೀಟ್ ಮಾಡಿದ್ದಾರೆ.
#NineDead, #SeveralInjured, #SUV #rams, #bus, #Gujarat, #Navsari,