ವ್ಯಾನ್‍ಗೆ ಡಿಕ್ಕಿ ಹೊಡೆದ ಟ್ರಕ್, ಒಂಬತ್ತು ಮಂದಿ ಸಾವು

Social Share

ಮುಂಬೈ, ಜ.19 -ರಾಯಗಢ ಜಿಲ್ಲೆಯ ಮುಂಬೈ-ಗೋವಾ ಹೆದ್ದಾರಿಯಲ್ಲಿ ಇಂದು ಮುಂಜಾನೆ ವೇಗವಾಗಿ ಬಂದ ಲಾರಿಯೊಂದು ಮುಂದೆ ಹೋಗುತ್ತಿದ್ದ ವ್ಯಾನ್‍ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಜನರು ಸಾವನ್ನಪ್ಪಿದ್ದಾರೆ.

ಮುಂಬೈನಿಂದ 130 ಕಿ.ಮೀ ದೂರದಲ್ಲಿರುವ ರೆಪೋಲಿ ಗ್ರಾಮದ ಬಳಿ ಮುಂಜಾನೆ 4.45ಕ್ಕೆ ಅಪಘಾತ ಸಂಭವಿಸಿದೆ. ಮೃತಪಟ್ಟ ಎಲ್ಲರೂ ಸಂಬಂಕರಾಗಿದ್ದು ವ್ಯಾನ್‍ನಲ್ಲಿ ರತ್ನಗಿರಿ ಜಿಲ್ಲೆಯ ಗುಹಾಗರ್‍ಗೆ ಹೋಗುತ್ತಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಸೋಮನಾಥ್ ಘಗೆರ್ ತಿಳಿಸಿದ್ದಾರೆ.

ಮೃತರಲ್ಲಿ ಒಂದು ಹೆಣ್ಣು ಮಗು, ಮೂವರು ಮಹಿಳೆಯರು ಮತ್ತು ಐದು ಪುರುಷರು ಸೇರಿದ್ದಾರೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಅವರು ಹೇಳಿದರು.

ಬೆಂಗಳೂರಲ್ಲಿ ಡ್ರಗ್ಸ್ ಮಾರುತ್ತಿದ್ದ ಅಲಿ, ಶೇಖ್, ಪಾಷಾ ಸೇರಿ ನಾಲ್ವರ ಬಂಧನ

ಅಪಘಾತದಲ್ಲಿ ಗಾಯಗೊಂಡ ನಾಲ್ಕು ವರ್ಷದ ಬಾಲಕಿಯನ್ನು ಮಂಗಾಂವ್‍ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ , ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಿದರು.

Nine, killed, truck, van, collision, Mumbai, Goa, highway,

Articles You Might Like

Share This Article