Friday, November 22, 2024
Homeರಾಜ್ಯಭಾರತಕ್ಕೆ ಪ್ರವೇಶಿಸಿದ ನಿಫಾ ವೈರಸ್, ರಾಜ್ಯದಲ್ಲಿ ಹೈ ಅಲರ್ಟ್

ಭಾರತಕ್ಕೆ ಪ್ರವೇಶಿಸಿದ ನಿಫಾ ವೈರಸ್, ರಾಜ್ಯದಲ್ಲಿ ಹೈ ಅಲರ್ಟ್

Nipah Virus confirmed kills 24-year-old man in Kerala

ಬೆಂಗಳೂರು,ಸೆ.16– ನಗರದಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾ ವೈರಸ್ಗೆ ಬಲಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.ನಗರದಲ್ಲಿರುವ ಹೊರ ರಾಜ್ಯದ ವಿದ್ಯಾರ್ಥಿಗಳ ಮೇಲೆ ಹದ್ದಿನಕಣ್ಣಿಟ್ಟಿದ್ದು ಹೊರ ಊರಿನಿಂದ ಬರುವ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಲು ತೀರ್ಮಾನಿಸಲಾಗಿದೆ.

ಅದರಲ್ಲೂ ವಿಮಾನ ನಿಲ್ದಾಣ, ಬಸ್ ಹಾಗೂ ರೈಲು ನಿಲ್ದಾಣಗಳಲ್ಲಿ ರಾಜ್ಯದಿಂದ ಹೊರ ಹೋಗುವ ಹಾಗೂ ಒಳಬರುವ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಕೇರಳದ ಮಲ್ಲಪ್ಪುರಂ ಜಿಲ್ಲೆಯ ನಿಲಂಬೂರು ಗ್ರಾಮದ 23 ವಿದ್ಯಾರ್ಥಿ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಆತನಿಗೆ ಕೆಲ ದಿನಗಳ ಹಿಂದೆ ಜಾಂಡೀಸ್ ರೀತಿಯ ಕಾಯಿಲೆ ಕಾಣಿಸಿಕೊಂಡಿತ್ತು. ಆರೋಗ್ಯ ಸರಿ ಹೋಗದ ಕಾರಣ ಆತ ತನ್ನ ಊರಿಗೆ ಮರಳಿದ್ದ ಅಲ್ಲಿಯೂ ಆತನಿಗೆ ಸೂಕ್ತ ಚಿಕಿತ್ಸೆ ದೊರೆಯದೆ ಸಾವನ್ನಪ್ಪದ್ದಾನೆ. ಮೃತ ವ್ಯಕ್ತಿಯನ್ನು ತಪಾಸಣೆಗೊಳಪಡಿಸಿದಾಗಾ ಆತನಿಗೆ ನಿಫಾ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಮೃತ ವಿದ್ಯಾರ್ಥಿ ಬೆಂಗಳೂರಿನಲ್ಲಿ ನೆಲೆಸಿದ್ದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಆತಂಕ ಮನೆ ಮಾಡಿರುವ ಹಿನ್ನೆಲೆಯಲ್ಲಿ ಕೇರಳ ಮಾದರಿಯಲ್ಲೇ ಕರ್ನಾಟಕದಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದರಲ್ಲೂ ವಿದ್ಯಾರ್ಥಿ ದಾಖಲಾಗಿದ್ದ ಬೆಂಗಳೂರಿನ ಕಾಲೇಜು ಹಾಗೂ ಆತ ವಾಸಿಸುತ್ತಿದ್ದ ಮನೆ ಮತ್ತಿತರ ಪ್ರದೇಶಗಳಲ್ಲಿ ವಾಸಿಸುತ್ತಿರುವವರನ್ನು ತಪಾಸಣೆಗೊಳಪಡಿಸಲು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಏನೀದು ನಿಫಾ ಸೋಂಕು; ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ನಿಫಾ ಸೋಂಕು ಮಾರಣಾಂತಿಕವಾಗಿದೆ. ಆರಂಭದಲ್ಲಿ ಸಾಮಾನ್ಯ ಜ್ವರ, ತಲೆನೋವು, ಮಾಂಸಖಂಡಗಳ ಸೆಳೆತದಂತೆ ಕಂಡು ಬಂದು ಕೊನೆಗೆ ಆತನ ಜೀವವನ್ನೇ ನಿಫಾ ವೈರಾಣುಗಳು ಬಲಿ ಪಡೆದುಕೊಳ್ಳುತ್ತದೆ.

ನಿಫಾ ಸೋಂಕಿಗೆ ಇದುವರೆಗೂ ಯಾವುದೇ ನಿರ್ದಿಷ್ಟ ಚಿಕಿತ್ಸೆ ಎಂಬುದಿಲ್ಲ. ಆದರೆ, ಸಾಮಾನ್ಯ ರೋಗಿಗೆ ನೀಡುವ ಚಿಕಿತ್ಸೆ ನೀಡಬೇಕಾಗುತ್ತದೆ. ಹೀಗಾಗಿ ನಿಫಾ ಸೋಂಕಿನ ಬಗ್ಗೆ ಎಚ್ಚರವಹಿಸುವ ಅಗತ್ಯವಿದೆ.

RELATED ARTICLES

Latest News