ನನಗೆ ರಾಜ್ಯಸಭೆ ಟಿಕೆಟ್ ಬೇಡ ಎಂದು ಪತ್ರ ಬರೆದ ನಿರ್ಮಲ ಕುಮಾರ್

ಬೆಂಗಳೂರು,ಮೇ28- ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಎರಡು ದಿನ ಬಾಕಿ ಇರುವಾಗ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲಕುಮಾರ್ ಸುರಾನಾ ಅವರು ತಮಗೆ ರಾಜ್ಯಸಭೆ ಟಿಕೆಟ್ ಬೇಡ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಜೂನ್ 10 ರಂದು ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿಯಲ್ಲಿ ನಿರ್ಮಲಕುಮಾರ್ ಸುರಾನ ಅವರನ್ನು ರಾಜ್ಯಸಭೆಯ ಅಭ್ಯರ್ಥಿಯನ್ನಾಗಿ ಪರಿಗಣಿಸುವಂತೆ ಶಿಫಾರಸ್ಸು ಮಾಡಿ ಕಳುಹಿಸಲಾಗಿತ್ತು.

ಆದರೆ ಪಕ್ಷದಲ್ಲಿ ತಮಗೆ ಹೆಚ್ಚಿನ ಜವಾಬ್ದಾರಿ ಇರುವುದರಿಂದ ಕೆಲಸದ ಒತ್ತಡ ಹೆಚ್ಚಾಗುತ್ತದೆ ಎಂಬ ಕಾರಣಕ್ಕೆ ತಮಗೆ ರಾಜ್ಯಸಭೆಯ ಟಿಕೆಟ್ ಬೇಡ ಎಂದು ನಿರ್ಮಲ್‍ಕುಮಾರ್ ಸುರಾನ ತಿಳಿಸಿದ್ದಾರೆ.