ಬೆಂಗಳೂರು-ಮೈಸೂರು ದಶಪಥದ ಹೆದ್ದಾರಿ ಅಸುರಕ್ಷ : ಜೆಡಿಎಸ್

Social Share

ಬೆಂಗಳೂರು, ಜ.5-ಬೆಂಗಳೂರು-ಮೈಸೂರು ನಡುವಿನ ದಶಪಥದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಸುರಕ್ಷತೆ ಹೆಚ್ಚಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿ ಆರೋಪಗಳ ಸುರಿಮಳೆಗೈದಿರುವ ಜೆಡಿಎಸ್, ಬೆಂಗಳೂರು-ಮೈಸೂರು ಮುಖ್ಯ ಹೆದ್ದಾÁರಿಯು ಮಳೆಯ ಕಾರಣದಿಂದ ಜಲಾವೃತಗೊಂಡಾಗ ಜನರ ಸಂಕಷ್ಟ ಆಲಿಸಲು ಬಾರದ ಕೇಂದ್ರ ಸಚಿವರು ಅದ್ಯಾವ ಮುಖ ಇಟ್ಟುಕೊಂಡು ಬೆಂಗಳೂರಿಗೆ ಬರುತ್ತಿದ್ದೀರಿ? ಈಗ ಅದೇ ರಸ್ತೆ ಕಾಮಗಾರಿಯ ವೈಮಾನಿಕ ಸಮೀಕ್ಷೆ ಮಾಡಲು ಬಂದಿರುವ ತಮಗೆ ಅಲ್ಲಿನ ಅಸಮರ್ಪಕತೆ ವಿಷಯಗಳು ತಿಳಿದಿಲ್ಲವೆ ಎಂದು ಹೇಳಿದೆ.

ಸುರಕ್ಷತೆಗಿಂತ ಅಸುರಕ್ಷತೆಯೇ ಹೆಚ್ಚಾಗಿರುವ ಈ ರಸ್ತೆಯಲ್ಲಿ ಸಿಸಿಟಿವಿಗಳು ಯಾಕೆ ಅಳವಡಿಕೆಯಾಗಿಲ್ಲ? ಇವೇ ಕಾರಣಗಳಿಂದ ಸಂಭವಿಸಿರುವ ಹತ್ತಾರು ಅಪಘಾತಗಳಿಗೆ ಯಾರು ಜವಾಬ್ದಾರರು? ಅಪಘಾತ ತಡೆ ಸಂಬಂಧ ಪೆಟ್ರೋಲಿಂಗ್ ಯಾಕೆ ಇನ್ನೂ ಆರಂಭವಾಗಿಲ್ಲ? ಸರ್ವೀಸ್ ರಸ್ತೆಯಲ್ಲಿ ವೇಗ ಮಿತಿಗಾಗಿ ವೈಜ್ಞಾನಿಕವಾಗಿ ಹಂಪ್ ಗಳನ್ನು ನಿರ್ಮಿಸಿಲ್ಲ ಎಂದು ಜೆಡಿಎಸ್ ಆರೋಪಗಳ ಸುರಿಮಳೆಗೈದಿದೆ.

XBB.1.5 ವೈರಸ್ ಭಯ ಬೇಡ, ಆದರೆ, ಅನಗತ್ಯವಾಗಿ ಮನೆಯಿಂದ ಹೊರಹೋಗಬೇಡಿ

ಶೇ. 40ರಷ್ಟು ಕಮಿಷನ್ ಸರ್ಕಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬರುತ್ತಿರುವ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಸ್ವಾಗತ ಎಂದು ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಬಂದಾಗ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಅಭಿವೃದ್ಧಿ ಪಡಿಸಿದ್ದ ರಸ್ತೆ ಕಿತ್ತು ಹೋದ ಸಂಗತಿ ರಾಜ್ಯದ ಜನತೆಗೆ ಗೊತ್ತಿದೆ. ಇಂತಹ ಲಜ್ಜೆಗೆಟ್ಟ ಸರ್ಕಾರಕ್ಕೆ, ಅದೇ ಪಕ್ಷದ ರಸ್ತೆ ಸಾರಿಗೆ ಹಾಗೂ ಹೆದ್ದಾರಿಯ ಕೇಂದ್ರ ಸಚಿವರಾಗಿರುವ ತಾವು ಯಾವ ಸಲಹೆ ಕೊಡಲು ಬಯಸುತ್ತೀರಿ ಎಂದು ಪ್ರಶ್ನಿಸಿದೆ.

ಇದೇ ದಶಪಥ ರಸ್ತೆಯ ಭೂಸ್ವಾೀಧಿನ ಪ್ರಕ್ರಿಯೆಗೆ ಅಂದಿನ ಮುಖ್ಯಮಂತ್ರಿಗಳಾಗಿದ್ದ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಡಿದ ಸಭೆಗಳು, ನೀಡಿದ ನೆರವು ಮರೆತು ಬಿಟ್ಟರಾ? ಇದೆಲ್ಲ ಹೋಗಲಿ, ನೀವು ಮಾಡಿರುವ ಕೆಲಸವಾದರೂ ನೆಟ್ಟಗಿದೆಯೇ ಎಂದು ಟೀಕಿಸಿದೆ.

ಬಿಜೆಪಿ ಆಡಳಿತ ಬಂದ ನಂತರ ಈ ಯೋಜನೆಗೆ ಅವೈಜ್ಞಾನಿಕವಾಗಿ ಭೂಸ್ವಾೀಧಿನಪಡಿಸಿಕೊಂಡು ಲೂಟಿ ಹೊಡೆದ ವಿಷಯಗಳು ತಮಗೆ ತಿಳಿದಿಲ್ಲವೇ ಗಡ್ಕರಿ ಅವರೆ? ಅಥವಾ ಶೇ. 40 ರಷ್ಟು ಕಮಿಷನ್ ಹೊಡೆಯುವ ದಂಧೆಯಲ್ಲಿ ನಿರತರಾಗಿರುವ ನಿಮ್ಮದೇ ರಾಜ್ಯ ಸರ್ಕಾರದಿಂದ ತಮಗೂ ಏನಾದರೂ ಪಾಲು ಸಿಕ್ಕಿದೆಯೇ ಎಂದು ಪ್ರಶ್ನಿಸಿದೆ.

ಚೀನಾ ಪ್ರಯಾಣಿರ ನಿರ್ಭಂಧಕ್ಕೆ ಅಪಸ್ವರ

ಈ ರಸ್ತೆಯ ಕಾಮಗಾರಿಗೆ ಸಂಬಂಧಿಸಿದ ಮಹತ್ವದ ಕಾರ್ಯಗಳಿಗೆ ಅನುಕೂಲವಾಗುವ ಹಲವು ನಿರ್ಧಾಗಳನ್ನು ತೆಗೆದುಕೊಂಡಿದ್ದು ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು. ವೈಮಾನಿಕ ಸಮೀಕ್ಷೆಗೆ ಬಂದಿರುವ ಗಡ್ಕರಿ ಅವರೆ, ಈ ರಸ್ತೆ ಕಾಮಗಾರಿಯಲ್ಲಿ ನಡೆದ ಅಕ್ರಮದ ಬಗ್ಗೆ ತುಟಿ ಬಿಚ್ಚುವಿರಾ ಎಂದು ಟೀಕಾ ಪ್ರಹಾರ ನಡೆಸಿದೆ.

Nitin Gadkari, bangalore, mysore, expressway, JDS,

Articles You Might Like

Share This Article