ಬೆಂಗಳೂರು, ಅ.11– ಡಿಸೆಂಬರ್‌ನಲ್ಲಿ ರಾಜಕೀಯ ಕ್ರಾಂತಿಯಾಗಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬದಲಾಗುತ್ತಾರೆ, ನಿತಿನ್ ಗಡ್ಕರಿ ಹೊಸದಾಗಿ ಪ್ರಧಾನಿಯಾಗುತ್ತಾರೆ ಎಂದು ಕಾರ್ಮಿಕ ಸಚಿವ ಸಂತೋಷ್‌ಲಾಡ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಕ್ರೈಸ್ಟ್ ವಿಶ್ವವಿದ್ಯಾಲಯ ಅಸೋಷಿಯೇಟ್ ಡಿನ್ ಸಹಾಯಕ ಡಾ. ಸ್ವಪ್ನ ಎಸ್. ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಋತುಚಕ್ರ ನೀತಿ ಕುರಿತು ಸಮಿತಿಯ ಸದಸ್ಯರ ಜೊತೆ ಚರ್ಚೆ ನಡೆಸಿ, ಅವರನ್ನು ಅಭಿನಂದಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿಯವರು ಸಚಿವರನ್ನು ಔತಣಕೂಟಕ್ಕೆ ಕರೆದಿರುವುದು ವಿಶೇಷವೇನಿಲ್ಲ. ನಮಲ್ಲಿ ನವೆಂಬರ್ ಕ್ರಾಂತಿ ಎಂಬುದೇನಿಲ್ಲ. ಆದರೆ ಕೇಂದ್ರದಲ್ಲಿ ನಿತಿನ್ ಗಡ್ಕರಿ ಪ್ರಧಾನಿಯಾಗುತ್ತಾರೆ ಎಂದರು.
ಬಿಜೆಪಿಯಲ್ಲಿನ ಆಂತರಿಕ ಚರ್ಚೆಗಳ್ನು ನಾನು ಹೇಳುತ್ತಿದ್ದೇನೆ. ಮೋದಿ ಅವರ ವಿರುದ್ಧ ಬಿಜೆಪಿಯ ನಾಯಕರಾಗಲಿ, ಮಾಧ್ಯಮದವರಾಗಲಿ ಮಾತನಾಡಲು ಅವಕಾಶ ಇಲ್ಲದಂತಹ ವಾತಾವರಣವಿದೆ. ಹೀಗಾಗಿ ಡಿಸೆಂಬರ್ ಒಳಗಾಗಿ ಬದಲಾವಣೆಯಾಗುತ್ತದೆ ಎಂದರು. ಪ್ರಧಾನಿಯವರು ತಮ ಹುದ್ದೆಯ ಜವಾಬ್ದಾರಿ ಮರೆತು ನಡೆದುಕೊಳ್ಳುತ್ತಿದ್ದಾರೆ. ವಿದೇಶಗಳಿಗೆ ಹೋದರೆ ಏನೋ ಒಂದು ಮಾತನಾಡುತ್ತಾರೆ. ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಹೋದಾಗ ಪ್ರಾಸ ಬದ್ದವನ್ನಾಗಿ ಮಾತನಾಡುತ್ತಾರೆ. ಇದು ಪ್ರಧಾನಿ ಅವರ ಕೆಲಸವೇ? ಎಂದು ಆಕ್ಷೇಪಿಸಿದರು.
ರಾಜ್ಯ ಸರ್ಕಾರ ರೂಪಿಸಿರುವ ಋತುಚಕ್ರ ರಜೆ ನೀತಿಯ ಕಾರಣಕ್ಕಾಗಿ ಖಾಸಗಿ ಸಂಸ್ಥೆಯವರು ಮಹಿಳಾ ಉದ್ಯೋಗಿಗಳಿಗೆ ಅವಕಾಶ ನಿರಾಕರಿಸಿದರೆ, ಸರ್ಕಾರ ಮಧ್ಯಪ್ರವೇಶ ಮಾಡಲಿದೆ ಎಂದು ಎಚ್ಚರಿಕೆ ನೀಡಿದರು.ಇದೊಂದು ಪ್ರಗತಿಪರ ಮಸೂದೆ. ಎಲ್ಲರೂ ಇದನ್ನು ಸ್ವಾಗತಿಸಿದ್ದಾರೆ. ಈವರೆಗೂ ಯಾರೂ ವಿರೋಧ ಮಾಡಿರುವುದು ಕಂಡು ಬಂದಿಲ್ಲ. ಅಂತಹ ಸಂದರ್ಭ ಬಂದಾಗ ಪರಿಶೀಲಿಸುತ್ತೇವೆ ಎಂದರು.