ನವದೆಹಲಿ,ಮೇ 7- ಆಪರೇಷನ್ ಸಿಂಧೂರ್ ದಾಳಿ ನಡೆಸಿದ ಎಲ್ಲಾ ಪೈಲಟ್‌ಗಳು ಸುರಕ್ಷಿತವಾಗಿದ್ದಾರೆ. ಭಾರತ ತನ್ನ ದಾಳಿಯಲ್ಲಿ ಆರು ಸ್ಥಳಗಳನ್ನು ಹೊಡೆದುರುಳಿಸಿದೆ. ಇದರಲ್ಲಿ ಹಲವಾರು ಮಂದಿ ಸಾವನಪ್ಪಿದ್ದಾರೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ.
ಆದರೂ ಭಾರತೀಯ ಸೇನೆಗೆ ಯಾವುದೇ ಹಾನಿಯಾಗಿಲ್ಲ ಎಂಬುದು ಸಮಾಧಾನಕರವಾಗಿದೆ. ಆಪರೇಷನ್ ಸಿಂಧೂರ್‌ನಲ್ಲಿ ಭಾಗಿಯಾಗಿರುವ ಎಲ್ಲಾ ವಾಯುಪಡೆ ಪೈಲಟ್‌ಗಳು ಸೇಫ್ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.