ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಇಲ್ಲ : ಸುನೀಲ್ ಕುಮಾರ್

Social Share

ಉಡುಪಿ,ಅ.22-ರಾಜ್ಯದಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿ ಮಳೆಯಾದ ಪರಿಣಾಮ ಜಲಾಶಯಗಳು ಭರ್ತಿಯಾಗಿರುವ ಕಾರಣ ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಮಾಡುವ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದೆ ಇಲ್ಲ ಎಂದು ಇಂಧನ ಸಚಿವ ಸುನೀಲ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವ್ಯಾಪಕ ಮಳೆಯಾಗಿ ಜಲಾಶಯಗಳು ಅಧಿವಗೂ ಮುನ್ನವೇ ಭರ್ತಿಯಾಗಿವೆ. ಹೀಗಾಗಿ ಲೋಡ್ ಶೆಡ್ಡಿಂಗ್ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ದೀಪಾವಳಿ ಹಬ್ಬದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಅನುಮಾನ ಬೇಡ. ಬೆಳಕಿನ ಹಬ್ಬವನ್ನು ಎಲ್ಲರೂ ಸಂಭ್ರಮದಿಂದಲೇ ಆಚರಿಸಿ ಎಂದು ಕಿವಿಮಾತು ಹೇಳಿದರು.

ಸಾಮಾನ್ಯವಾಗಿ ಮಳೆಯ ಪ್ರಮಾಣ ನಮ್ಮ ನಿರೀಕ್ಷೆಗೆ ತಕ್ಕಂತೆ ಬಾರದಿದ್ದಾಗ ಲೋಡ್ ಶೆಡ್ಡಿಂಗ್ ಸಮಸ್ಯೆ ಬರುತ್ತದೆ. ಕಳೆದ ಎರಡುಮೂರು ವರ್ಷಗಳಿಂದ ಉತ್ತಮ ಮಳೆಯಾಗಿದೆ. ಬೇಡಿಕೆಗೆ ತಕ್ಕಂತೆ ವಿದ್ಯುತ್ ಉತ್ಪಾದನೆ ಮಾಡುವ ಸಾಮಥ್ರ್ಯ ನಮಗಿದೆ ಎಂದರು.

ಬೆಂಗಳೂರು : ಮನೆಯ ಟೆರೆಸ್‍ನಲ್ಲಿ ವ್ಯಕ್ತಿಯ ಭೀಕರ ಹತ್ಯೆ

ಪ್ರಸಕ್ತ ವರ್ಷ 14,800 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ದಾಖಲೆ ಬರೆದಿದ್ದೇವೆ. ರೈತರಿಗೆ ದಿನದ 6 ಗಂಟೆ 3 ಫೇಸ್ ವಿದ್ಯುತ್ ಪೂರೈಕೆ ಮಾಡಲು ಬದ್ದರಾಗಿದ್ದೇವೆ. ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು ಎಂದು ಸುನೀಲ್‍ಕುಮಾರ್ ಮನವಿ ಮಾಡಿದರು.

ಪ್ರತಿ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಏರಿಕೆ ಮಾಡದಂತೆ ಕರ್ನಾಟಕ ವಿದ್ಯುತ್ ಸುಧಾರಣಾ ಆಯೋಗಕ್ಕೂ ಮನವಿ ಮಾಡ ಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಲಾಗುವುದು ಎಂದು ಹೇಳಿದರು.

ವರ್ಷದಲ್ಲಿ ಒಂದು ಬಾರಿ ವಿದ್ಯುತ್ ದರ ಏರಿಕೆ ಮಾಡಬೇಕೆಂಬ ಪ್ರಸ್ತಾವನೆಯಿದೆ. ಇದರಿಂದ ಗ್ರಾಹಕರಿಗೂ ವಿದ್ಯುತ್ ದರ ಏರಿಕೆ ಬಿಸಿ ತಟ್ಟುವುದಿಲ್ಲ. ಮುಖ್ಯಮಂತ್ರಿಗಳು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.

ಅರ್ಹರಿಗೆ ಪ್ರಶಸ್ತಿ: ನಾಡು-ನುಡಿ, ಸಾಹಿತ್ಯ, ಭಾಷೆ, ವಿಜ್ಞಾನ, ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವದ ದಿನದಂದು ಅರ್ಹರಿಗೆ ಮಾತ್ರ ಪ್ರಶಸ್ತಿಯನ್ನು ನೀಡುತ್ತೇವೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವರೂ ಆಗಿರುವ ಸುನೀಲ್‍ಕುಮಾರ್ ಸ್ಪಷ್ಟಪಡಿಸಿದರು.

ಈಗಾಗಲೇ ಇಲಾಖೆಗೆ 28 ಸಾವಿರ ಅರ್ಜಿಗಳು ಬಂದಿವೆ. ಆನ್‍ಲೈನ್ ಮೂಲಕವೂ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಈಗಾಗಲೇ ನಿಯಮ ಇರುವಂತೆ ಆಯಾ ವರ್ಷದ ಎಷ್ಟನೇ ವರ್ಷದ ಆಚರಣೆ ಮಾಡುತ್ತೇವೋ ಅಷ್ಟೇ ಪ್ರಶಸ್ತಿಗಳನ್ನು ನೀಡುತ್ತೇವೆ ಎಂದರು.

ಏಷ್ಯಾ ಕಪ್ ಪಂದ್ಯದ ಭವಿಷ್ಯ ಬಿಸಿಸಿಐ ನಿರ್ಧರಿಸಲಿದೆ ; ರೋಹಿತ್

ನನ್ನ ಮೇಲೆ ಯಾರೂ ಕೂಡ ಪ್ರಭಾವ ಬೀರಿ ಪ್ರಶಸ್ತಿ ಪಡೆಯಲು ಸಾಧ್ಯವೇ ಇಲ್ಲ. ಎಲ್ಲವೂ ಕೂಡ ಪಾರದರ್ಶಕವಾಗಿಯೇ ನಡೆಯುತ್ತದೆ. 60 ವರ್ಷ ಮೇಲ್ಪಟ್ಟ ಅರ್ಹರು ಯಾರಿರುತ್ತಾರೋ ಅವರನ್ನು ಹುಡುಕಿ ರಾಜ್ಯೋತ್ಸವ ಪ್ರಶಸ್ತಿಯನ್ನು ಕೊಡುತ್ತೇವೆ. ಲಾಬಿ ನಡೆಸುವವರಿಗೆ ಯಾವುದೇ ಕಾರಣಕ್ಕೂ ಪ್ರಶಸ್ತಿಯನ್ನು ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನಮ್ಮ ಇಲಾಖೆ ವ್ಯಾಪ್ತಿಗೆ ಬರುವ ಅಕಾಡೆಮಿಗಳಿಗೆ ಅನುದಾನದ ಕೊರತೆ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 20 ಕೋಟಿ ಅನುದಾನ ನೀಡಿದ್ದಾರೆ. ಇದನ್ನು ಸದ್ಬಳಕೆ ಮಾಡಿಕೊಂಡು ಅಕಾಡೆಮಿಗಳ ಪುನಶ್ಚೇತನಕ್ಕೆ ಒತ್ತು ನೀಡುವುದಾಗಿ ಮಾಹಿತಿ ನೀಡಿದರು.

ದೀಪಾವಳಿ ಹಬ್ಬದ ನಂತರ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ರಾಜ್ಯೋತ್ಸವ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ. ಎಲ್ಲವೂ ಕೂಡ ಪಾರದರ್ಶಕವಾಗಿ ನಡೆಯುತ್ತಿ ರುವುದರಿಂದ ಯಾರಿಗೂ ಯಾವುದೇ ರೀತಿಯ ಗೊಂದಲ ಬೇಡ ಎಂದು ಸುನೀಲ್‍ಕುಮಾರ್ ಮನವಿ ಮಾಡಿದರು.

Articles You Might Like

Share This Article