Thursday, December 12, 2024
Homeರಾಜ್ಯಸದ್ಯಕ್ಕೆ ಸಚಿವ ಸಂಪುಟ ಪುನಾರಚನೆಯ ಪ್ರಸ್ತಾಪ ಇಲ್ಲ : ಡಿಕೆಶಿ

ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆಯ ಪ್ರಸ್ತಾಪ ಇಲ್ಲ : ಡಿಕೆಶಿ

No proposal for cabinet reshuffle at present: DK Shivakumar

ಬೆಂಗಳೂರು,ನ.29– ಸಚಿವ ಸಂಪುಟ ಪುನಾರಚನೆಯ ಪ್ರಸ್ತಾಪ ಸದ್ಯಕ್ಕಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆಯ ಸಂದರ್ಭವೇ ಉದ್ಭವಿಸಿಲ್ಲ. ಒಂದೇ ಒಂದು ಸ್ಥಾನ ಮಾತ್ರ ಖಾಲಿ ಇದೆ. ಅದನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ಸಾಧ್ಯಾಸಾಧ್ಯತೆಗಳನ್ನು ಅಲ್ಲಗಳೆದರು.

ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ತಾವು ಭೇಟಿ ಮಾಡಿ ರಾಜ್ಯದ ಮಹತ್ವದ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆಸುತ್ತೇನೆ. ಮಹದಾಯಿ, ಮೇಕೆದಾಟು ಯೋಜನೆಗಳಿಗೆ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ಪೂರ್ವಾನುಮತಿ ಅಗತ್ಯವಿದೆ. ನಿನ್ನೆ ವನ್ಯಜೀವಿ ಅಭಿವೃದ್ಧಿ ಮಂಡಳಿಗೆ ಪ್ರಧಾನಮಂತ್ರಿ ನರೇಂದ್ರಮೋದಿಯವರೇ ಅಧ್ಯಕ್ಷರಾಗಿದ್ದಾರೆ. ಅವರನ್ನು ಭೇಟಿ ಮಾಡಿ ನೀರಾವರಿ ಯೋಜನೆಗಳಿಗೆ ಅಗತ್ಯ ಅನುಮತಿ ನೀಡುವಂತೆ ಮನವಿ ಮಾಡುತ್ತೇನೆ ಎಂದರು.

ನಿನ್ನೆ ತಾವು ಅರಣ್ಯ ಸಚಿವರು ಹಾಗೂ ರಾಜ್ಯದವರಾದಂತಹ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿರುವ ರಾಜ್ಯದ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ. ಸಚಿವರು ನಮಗೆ ಗೌರವ ಕೊಟ್ಟು ಶೀಘ್ರ ಅನುಮತಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಪ್ರಹ್ಲಾದ್ ಜೋಶಿ ಕೂಡ ಈ ವಿಚಾರವಾಗಿ ಚರ್ಚೆ ಮಾಡಿದ್ದಾರೆ ಎಂದು ತಿಳಿಸಿದರು.

ಹಾಸನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಿಮಾನಿಗಳು ಸಮಾವೇಶ ನಡೆಸಲು ಮುಂದಾಗಿರುವುದರ ಬಗ್ಗೆ ಸಿದ್ದರಾಮಯ್ಯನವರೇ ನನ್ನ ಬಳಿ ವಿಚಾರ ತಿಳಿಸಿದರು. ಖಾಸಗಿ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು, ಪಕ್ಷದ ವೇದಿಕೆಯಲ್ಲಿ ಕಾರ್ಯಕ್ರಮ ಮಾಡಬೇಕು ಎಂದು ಪಕ್ಷದ ಕೆಲವರು ಪತ್ರ ಬರೆದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಇಂತಹ ವಿಚಾರಗಳಲ್ಲಿ ಪಕ್ಷ ಸಹಜವಾಗಿ ಕಕ್ಕಲಾತಿ(ಪೊಸೆಸಿವ್)ಯಿಂದ ಕೂಡಿರುತ್ತದೆ. ತಾವು ದೆಹಲಿಗೆ ಬಂದು ಮೂರ್ನಾಲ್ಕು ದಿನಗಳಾಯಿತು. ಅನಂತರದ ಬೆಳವಣಿಗೆಗಳು ನನಗೆ ಮಾಹಿತಿ ಇಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿದ್ದು, ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಕಾರ್ಯಕ್ರಮ ಕುರಿತು ಚರ್ಚೆ ನಡೆಸುವ ಸಲುವಾಗಿ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ನ ಸಂಸ್ಥಾಪನಾ ದಿನಾಚರಣೆ ಮತ್ತು ಬೆಳಗಾವಿಯ ಕಾಂಗ್ರೆಸ್ ಮಹಾಧಿವೇಶನಕ್ಕೆ ಮಹಾತ ಗಾಂಧಿಯವರು ಅಧ್ಯಕ್ಷತೆ ವಹಿಸಿ 100 ವರ್ಷ ಕಳೆದಿದ್ದು, ಶತಮಾನೋತ್ಸವ ಆಚರಣೆ ಕುರಿತು ಚರ್ಚೆ ನಡೆಸಿದ್ದೇನೆ. ವಿಸ್ತೃತ ಎಐಸಿಸಿ ಕಾರ್ಯಕಾರಿ ಸಮಿತಿಯನ್ನು ಬೆಳಗಾವಿಯಲ್ಲಿ ಮಾಡಬೇಕು. ಶತಮಾನೋತ್ಸವ ಕೂಡ ಅಲ್ಲಿಯೇ ಆಚರಣೆಯಾಗಬೇಕು.

300ಕ್ಕೂ ಹೆಚ್ಚು ಕಾಂಗ್ರೆಸ್ನ ಪ್ರಮುಖ ನಾಯಕರು ಭಾಗವಹಿಸಬೇಕು ಎಂಬ ವಿಚಾರವಿದೆ. ಇದರ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿಯವರ ಜೊತೆ ಸಮಾಲೋಚನೆ ನಡೆಸಿದ್ದು, ಎಐಸಿಸಿ ಅಧ್ಯಕ್ಷರಿಗೂ ವಿವರಿಸಿದ್ದೇನೆ. ಇಂದು ನಡೆಯುವ ಕಾರ್ಯಕಾರಿ ಸಮಿತಿಯಲ್ಲಿ ಈ ಬಗ್ಗೆ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಲಾಗುವುದು. ಮುಖ್ಯಮಂತ್ರಿಯವರ ಜೊತೆಯೂ ಕೂಡ ಈ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಸಾಕಷ್ಟು ಚರ್ಚೆಗಳಾಗುತ್ತಿರುವುದು ಹಾಗೂ ಕೆಲವರು ತಾವು ಅಧ್ಯಕ್ಷರಾಗಲು ಸಿದ್ಧ ಎಂದು ಹೇಳಿಕೆ ನೀಡುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಡಿ.ಕೆ.ಶಿವಕುಮಾರ್, ಮಾಧ್ಯಮಗಳಲ್ಲಿ ರಾಜಕೀಯ ನಡೆಯುವುದಿಲ್ಲ. ಇಂತಹ ವಿಚಾರಗಳನ್ನು ಮಾಧ್ಯಮಗಳಲ್ಲಿ ಚರ್ಚೆ ನಡೆಸುವುದು ಯಾವ ಪಕ್ಷಕ್ಕೂ ಮತ್ತು ಯಾರಿಗೂ ಸೂಕ್ತ ಅಲ್ಲ ಎಂದು ಹೇಳಿದರು.

ನಿನ್ನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ಗಾಂಧಿ, ನಾನೂ ಸೇರಿದಂತೆ ಹಲವು ನಾಯಕರು ಜಾರ್ಖಂಡ್ ರಾಜ್ಯದ ರಾಂಚಿಗೆ ತೆರಳಿ ಅಲ್ಲಿ ಮುಖ್ಯಮಂತ್ರಿ ಹೇಮಂತ್ ಸುರೇನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದೆವು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೈರು ಹಾಜರಾಗಿದ್ದರು ಎಂದರು.

RELATED ARTICLES

Latest News