ಜನ ತಲೆ ತಗ್ಗಿಸುವ ಯಾವ ಕೆಲಸವನ್ನು ನಾನು ಮಾಡಿಲ್ಲ : ಮೋದಿ

Spread the love

ರಾಜ್‍ಕೋಟ್, ಮೇ 28- ಕಳೆದ ಎಂಟು ವರ್ಷಗಳಲ್ಲಿ ದೇಶದ ಒಬ್ಬನೇ ಒಬ್ಬ ನಾಗರೀಕ ನಾಚಿಕೆಯಿಂದ ತಲೆ ತಗ್ಗಿಸುವ ಯಾವುದೇ ತಪ್ಪನ್ನು ತಾವು ಮಾಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್‍ನ ರಾಜ್‍ಕೋಟ್ ಜಿಲ್ಲೆಯ ಅತ್ಕೋಟ್ ಪಟ್ಟಣದಲ್ಲಿ 200 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿದ ನಂತರ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ ಅವರು, ದೇಶ ಸೇವೆಗಾಗಿ ನಾನು ಯಾವುದೇ ಪ್ರತ್ಯೇಕ ಪ್ರಯತ್ನ ಮಾಡಿಲ್ಲ. ಗುಜರಾತ್‍ನ ಜನ ಸೇರಿದಂತೆ, ಭಾರತದ ಒಬ್ಬ ವ್ಯಕ್ತಿಯೂ ನಾಚಿಕೆಯಿಂದ ತಲೆ ತಗ್ಗಿಸುವಂತಹ ಯಾವುದೇ ಕೆಲಸವನ್ನು ನಾನು ಅನುಮತಿಸಿಲ್ಲ ಅಥವಾ ವೈಯಕ್ತಿಕವಾಗಿ ಮಾಡಿಲ್ಲ ಎಂದು ಅವರು ಹೇಳಿದರು.

ಕಳೆದ ಎಂಟು ವರ್ಷಗಳಲ್ಲಿ, ಮಹಾತ್ಮ ಗಾಂಧಿ ಮತ್ತು ಸರ್ದಾರ್ ಪಟೇಲ್ ಕನಸು ಕಂಡಂತಹ ಭಾರತವನ್ನು ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಈ ಅವಧಿಯಲ್ಲಿ ಸರ್ಕಾರ ಬಡವರ ಉನ್ನತಿಗಾಗಿ ಶ್ರಮಿಸಿದೆ ಎಂದು ಪ್ರಧಾನಿ ಹೇಳಿದರು.

ನಾವು ಬಡವರ ಪರವಾದ ವಿವಿಧ ಯೋಜನೆಗಳ ಮೂಲಕ ದೇಶದ ಬಡವರಿಗೆ ಸೇವೆ ಸಲ್ಲಿಸಿದ್ದೇವೆ ಮತ್ತು ಅವರ ಜೀವನವನ್ನು ಉತ್ತಮಗೊಳಿಸಲು ಪ್ರಯತ್ನಿಸಿದ್ದೇವೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಬಡವರಿಗೆ ಆಹಾರ ಧಾನ್ಯ ಉಚಿತವಾಗಿ ಹಂಚಲಾಗಿದೆ, ಪ್ರತಿಯೊಬ್ಬ ನಾಗರಿಕರಿಗೂ ಲಸಿಕೆ ಹಾಕಲಾಗಿದೆ ಎಂದು ಹೇಳಿದರು.

Facebook Comments