ವರುಣಾರ್ಭಟಕ್ಕೆ ನಲುಗಿದ ಕರಾವಳಿ ಜಿಲ್ಲೆಗಳು, ಜನರ ಬದುಕು ದುಸ್ತರ

ಉಡುಪಿ/ಉತ್ತರಕನ್ನಡ/ಬೆಳಗಾವಿ,ಜು.9- ಮಂಗಳೂರು, ಉಡುಪಿ, ಬೆಳಗಾವಿ, ಉತ್ತರಕನ್ನಡ, ಕರಾವಳಿ ಭಾಗದಲ್ಲಿ ಮಳೆಯ ಅಬ್ಬರಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ವರುಣನ ಆರ್ಭಟಕ್ಕೆ ನದಿ, ಜಲಾಶಯಗಳು, ಹಳ್ಳಕೊಳ್ಳ ಭರ್ತಿಯಾಗಿ ಹೊಲಗದ್ದೆಗಳು ಜಲಾವೃತಗೊಂಡಿವೆ. ರಸ್ತೆಗಳು ನೀರು ತುಂಬಿ ಸಂಚಾರಕ್ಕೆ ಅಡಚಣೆಯಾಗಿದೆ. ಮನೆಗಳಿಗೆ ನೀರು ನುಗ್ಗಿ ಜನ ಜಾಗರಣೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಉತ್ತರ ಕನ್ನಡ, ಉಡುಪಿ ಸೇರಿದಂತೆ ಜಿಲ್ಲೆಗಳ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ತಗ್ಗುಪ್ರದೇಶಗಳಿಗೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದ ಪರಿಣಾಮ … Continue reading ವರುಣಾರ್ಭಟಕ್ಕೆ ನಲುಗಿದ ಕರಾವಳಿ ಜಿಲ್ಲೆಗಳು, ಜನರ ಬದುಕು ದುಸ್ತರ