Friday, November 22, 2024
Homeರಾಜ್ಯಉತ್ತರ ಕರ್ನಾಟಕಕ್ಕೀಗ ಜಲ ಕಂಟಕ

ಉತ್ತರ ಕರ್ನಾಟಕಕ್ಕೀಗ ಜಲ ಕಂಟಕ

ಬೆಳಗಾವಿ,ಜು.22- ಪಶ್ಚಿಮ ಘಟ್ಟ ತೀರವಾದ ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕದ ಬೆಳಗಾವಿ ಇತರೆ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ನದಿ, ಹಳ್ಳ-ಕೊಳ್ಳ, ಜಲಾಶಯಗಳು ತುಂಬಿ ಹರಿಯುತ್ತಿರುವ ಪರಿಣಾಮ ಪ್ರವಾಹದ ಭೀತಿ ಎದುರಾಗಿದೆ. ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದ್ದು, ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಗ್ರಾಮಗಳ ಹೊಲ ಗದ್ದೆಗಳು ಜಲಾವೃತವಾಗಿವೆ. ನದಿಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಹಲವರನ್ನು ಸ್ಥಳಾಂತರ ಮಾಡಲಾಗುತ್ತಿದೆ.

ಘಟಪ್ರಭಾ ನದಿಗೆ ಜಲಾಶಯದಿಂದ 30,000 ಕ್ಯೂಸೆಕ್ ನೀರು ಬಿಡಲಾಗಿದೆ. ಮಲಪ್ರಭಾ ನದಿಗೆ 15,000 ಕ್ಯೂಸೆಕ್ ನೀರು ಬಿಡಲಾಗಿದೆ. ಇದರಿಂದಾಗಿ ಬೆಳಗಾವಿ ಸಹಿತ ಬಾಗಲಕೋಟೆ, ಬಿಜಾಪುರ, ಧಾರವಾಡ ಜಿಲ್ಲೆಗಳ ನದಿ ತೀರದ ಗ್ರಾಮಗಳು ಮುಳುಗಡೆಯಾಗುವ ಆತಂಕ ಎದುರಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 17 ಸೇತುವೆಗಳು ಸಂಪೂರ್ಣ ಮುಳುಗಡೆಯಾಗಿದ್ದು, 34 ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ.
ಜಿಲ್ಲೆಯ ಚಿಕ್ಕೋಡಿ, ಖಾನಾಪುರ, ಮೂಡಲಗಿ, ಗೋಕಾಕ್, ನಿಪ್ಪಾಣಿ ತಾಲೂಕಿನ ಸೇತುವೆಗಳು ಸಂಪೂರ್ಣ ಜಲಾವೃತಗೊಂಡಿವೆ. ಇದರಿಂದಾಗಿ ಗ್ರಾಮಗಳಿಗೆ ನೀರು ನುಗ್ಗುತ್ತಿದ್ದು, ಪ್ರವಾಹ ಭೀತಿ ಆರಂಭವಾಗಿದೆ.

ಜಿಲ್ಲೆಯಲ್ಲಿ ಇನ್ನೂ ಎರಡು-ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಸಂಭಾವ್ಯ ಅನಾಹುತಗಳನ್ನು ತಪ್ಪಿಸಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಎಸ್ಪಿ ಡಾ. ಭೀಮಾಶಂಕರ ಗುಳೇದ ಜಿಲ್ಲಾಯಲ್ಲಿ ಮಿಂಚಿನ ಸಂಚಾರ ಕೈಗೊಂಡಿದ್ದು, ಮಳೆ ಬಾಧಿತ ಖಾನಾಪುರ, ಚಿಕ್ಕೋಡಿ, ಅಥಣಿ, ರಾಯಭಾಗ ತಾಲೂಕಿನ ನದಿ ತೀರದ ಪ್ರದೇಶಗಳಿಗೆ ಭೇಟಿ ನೀಡಿದರು.

ನೀರಿನಿಂದಾವೃತ ಕಾಡುವಾಸಿಗಳ ಅನುಕೂಲಕ್ಕೆ ತತ್‍ಕ್ಷಣ ಅಗತ್ಯ ಸೇವೆಗಳಾದ ಮೆಡಿಕಲ್ ಕಿಟï, ಹಾಲಿನ ಪುಡಿ, ಕ್ಯಾಂಡಲï, ಮ್ಯಾಚ್‍ಬಾಕ್ಸ್ ಸಹಿತ ಅಗತ್ಯ ಸಹಾಯ ಒದಗಿಸಲು ಜಿಲ್ಲಾಡಳಿತ ಕ್ರಮ ವಹಿಸಿದೆ. ಮಳೆ ಪ್ರಮಾಣ ಮುಂದುವರೆದಿದ್ದು ಜನಜೀವನ, ಉದ್ಯೋಗ ವ್ಯಾಪಾರ ತೀವ್ರ ಕ್ಷೀಣಿಸಿದೆ. ಕಾರವಾರ, ಕರಾವಳಿ, ಮಲೆನಾಡು, ಕೊಡಗು, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದೆ.

ಕಾರವಾರ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶಿರೂರಿನ ಬಳಿ ಗುಡ್ಡ ಕುಸಿದು 10 ಜನ ಮಣ್ಣಿನಡಿ ಸಿಲುಕಿಕೊಂಡಿದ್ದು, 7 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಎನ್‍ಡಿಆರ್‍ಎ-ï, ಎಸ್‍ಪಿಆರ್‍ಎ-ï ತಂಡದೊಂದಿಗೆ ಸೇನಾ ಸಿಬ್ಬಂದಿ ಕೂಡ ಕಾರ್ಯಾಚರಣೆಗೆ ಕೈಜೋಡಿಸಿದ್ದಾರೆ. ನಿರಂತರ ಮಳೆಯ ನಡುವೆಯೂ ಕಾರ್ಯಾಚರಣೆ ಮುಂದುವರೆದಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಅಬ್ಬರದ ಮಳೆಗೆ ಜಲಾನಯನ ಪ್ರದೇಶದ ಜಲಾಶಯಗಳು ಭರ್ತಿಯಾಗಿವೆ. ಭದ್ರಾ, ತುಂಗಾ, ತುಂಗಾಭದ್ರಾ ಜಲಾಶಯಗಳು ಕೂಡ ಭರ್ತಿ ಹಂತದಲ್ಲಿವೆ. ಜಲಾಶಯಗಳಿಂದ ಅಪಾರ ಪ್ರಮಾಣದಲ್ಲಿ ನದಿಗೆ ನೀರನ್ನು ಹೊರಬಿಡಲಾಗುತ್ತಿದೆ. ಹಲವೆಡೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.
ಕೆಲವೆಡೆ ಮಳೆ ತಗ್ಗಿದ್ದರೂ ಜಲಾಶಯಗಳಿಂದ ಭಾರಿ ಪ್ರಮಾಣದಲ್ಲಿ ನೀರನ್ನು ಹೊರಬಿಡುತ್ತಿರುವುದರಿಂದ ಪ್ರವಾಹದ ಭೀತಿ ಎದುರಾಗಿದೆ. ಜಲಾಶಯಗಳು, ಜಲಪಾತಗಳನ್ನು ನೋಡಲು ಪ್ರವಾಸಿಗರ ದಂಡು ಹರಿದುಬರುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹಲವೆಡೆ ಪ್ರವಾಸಿಗರ ವೀಕ್ಷಣೆಗೆ ನಿಬರ್ಂಧ ವಿ„ಸಲಾಗಿದೆ.

RELATED ARTICLES

Latest News