ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆಗೆ 2 ದಿನ ಮೀಸಲು

Social Share

ಬೆಳಗಾವಿ. ಡಿ.21- ಉತ್ತರ ಕರ್ನಾಟಕ ಜನರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕುಂದಾನಗರಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಎರಡು ದಿನಗಳನ್ನು ಮೀಸಲಿಡಲಾಗುತ್ತದೆ.

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಇರುವ ಈ ಸಂದರ್ಭದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಮೂಲಕ ಉತ್ತರ ಕರ್ನಾಟಕ ಭಾಗದ ಜನರ ಒಲವು ಗಳಿಸುವ ಕಾರ್ಯತಂತ್ರಗಳಲ್ಲಿ ಇದು ಕೂಡ ಒಂದಾಗಿದೆ.
ಮೂರು ರಾಜಕೀಯ ಪಕ್ಷಗಳು ಜನರ ಒಲವು ಗಳಿಸುವ ಪ್ರಯತ್ನದಲ್ಲಿ ನಿರತರಾಗಿದ್ದು, ಈ ವಿಚಾರದಲ್ಲಿ ಪೈಫೋಟಿಗೆ ಮುಂದಾಗಿವೆ.

ಶಾಸಕರಿಗೆ ಏಕವಚನದಲ್ಲಿ ನಿಂದನೆ : ಸದನದಲ್ಲಿ ಗದ್ದಲ- ಕೋಲಾಹಲ

ಆಡಳಿತಾರೂಢ ಬಜೆಪಿ ಉತ್ತರ ಕರ್ನಾಟಕದ ಜನರು ಸದಾ ಬೆಂಬಲವಾಗಿ ನಿಂತಿದ್ದು, ಇದನ್ನು ಮತ್ತಷ್ಟು ಗಟ್ಟಿ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಇದರ ಭಾಗವಾಗಿ ಸರ್ಕಾರ ಅಧಿವೇಶನದ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ನೀರಾವರಿ ಯೋಜನೆಗಳ ಅನುಷ್ಠಾನದ ಸ್ಥಿತಿಗತಿ, ಕಬ್ಬು ಬೆಳೆಗಾರರ ಸಮಸ್ಯೆಗಳು, ಮುಳುಗಡೆ ಸಂತ್ರಸ್ತರ ಪುನರ್ ವಸತಿ, ಪುನರ್ ನಿರ್ಮಾಣ, ಪ್ರವಾಹದ ಸಂದರ್ಭದಲ್ಲಿ ಮುಳುಗಡೆಯಾಗುವ ಗ್ರಾಮಗಳ ಸ್ಥಳಾಂತರ, ಶಾಶ್ವತ ಪರಿಹಾರ, ರಾಜ್ಯ ಹಂಚಿಕೆಯಾಗಿರುವ ನೀರಿನ ಸದ್ಬಳಕೆ ಸೇರಿದಂತೆ ಹತ್ತು ಹಲವು ವಿಚಾರಗಳ ಬಗ್ಗೆ ಅವೇಶನದಲ್ಲಿ ಬೆಳಕು ಚೆಲ್ಲಿ ಪರಿಹಾರದ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಉದ್ದೇಶಿಸಲಾಗಿದೆ.

ಪ್ರತಿ ವರ್ಷದ ಅಧಿವೇಶನದಲ್ಲೂ ಎರಡು ದಿನ ಉತ್ತರ ಕರ್ನಾಟಕ ಸಮಸ್ಯೆ, ಬೇಡಿಕಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಲಾಗುತ್ತದೆ. ಅದೇ ರೀತಿ ಪ್ರಸಕ್ತ ಚಳಿಗಾಲದ ಅಧಿವೇಶನಲ್ಲೂ ಅವಕಾಶ ಕಲ್ಪಿಸಲಾಗುತ್ತಿದೆ. ಅವಕಾಶ ದೊರೆಯಲಿದ್ದು, ಪಕ್ಷಬೇಧ ಮರೆತು ಬಹುತೇಕ ಶಾಸಕರು ಚರ್ಚೆಯಲ್ಲಿ ಪಾಲ್ಗೊಂಡು ಉಪಯುಕ್ತ ಸಲಹೆ , ಸೂಚನೆ ನೀಡುವ ಸಾಧ್ಯತೆ ಇದೆ.

ಉತ್ತರ ಕರ್ನಾಟಕ ಭಾಗವನ್ನು ಇದುವರೆಗೆ ಆಡಳಿತ ನಡೆಸಿದ ಸರ್ಕಾರಗಳು ನಿರ್ಲಕ್ಷಿಸಿವೆ ಎಂಬ ಆರೋಪ ದೂರ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ. ಪ್ರಾದೇಶಿಕ ಅಸಮತೋಲನ ನಿವಾರಣೆ ಸಂಬಂಧ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಆರ್ಥಿಕ ತಜ್ಞ ಡಿ.ಎಂ.ಜಂಜುಂಡಪ್ಪ ವರದಿಯ ಶಿಫಾರಸುಗಳ ಅನುಷ್ಠಾನದ ಪ್ರಗತಿಯ ಬಗ್ಗೆ ಬೆಳಕು ಚೆಲ್ಲಲ್ಲಾಗುತ್ತದೆ.

ಶೀಘ್ರದಲ್ಲೇ ರಾಜ್ಯದಲ್ಲೂ ಕೊರೋನಾ ಮಾರ್ಗಸೂಚಿ ಬಿಡುಗಡೆ : ಸಚಿವ ಸುಧಾಕರ್‌

ಕಲ್ಯಾಣ ಕರ್ನಾಟಕದ ಭಾಗದಲ್ಲಿ ಜಾರಿಗೊಳಿಸಿರುವ ಸಂವಿಧಾನದ 371 ಜೆ ಪ್ರಕಾರ ಅನುಷ್ಠಾನಗೊಳಿಸಬೇಕಾದ ಕಾರ್ಯಗಳ ಪರಾಮರ್ಶೆ ನಡೆಯಲಿದೆ. ಜತೆಗೆ ಸುವರ್ಣ ವಿಧಾನಸೌಧಕ್ಕೆ ಕೆಲವು ಇಲಾಖೆಗಳನ್ನು ಸ್ಥಳಾಂತರ ಮಾಡುವ ವಿಚಾರದಲ್ಲಿ ಸರ್ಕಾರ ಮೀನಾಮೇಷ ಎಣಿಸುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತವಾಗುವ ಸಂಭವ ಹೆಚ್ಚು.
ಉದ್ಯೋಗ ಅರಸಿ ನಗರ ಪ್ರದೇಶಗಳತ್ತ ವಲಸೆ ಹೋಗುವುದನ್ನು ತಡೆಯಲು ಈ ಭಾಗದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆಗೆ ಒತ್ತು ನೀಡಬೇಕಾದ ಅಗತ್ಯತೆ ಕುರಿತು ಶಾಸಕರ ಗಂಭೀರ ಚರ್ಚೆ ನಡೆಸಲಾಗುತ್ತದೆ.

ಜತೆಗೆ ಶಿಕ್ಷಣ, ರೈತರ ಸಮಸ್ಯೆಗಳು, ರಸ್ತೆ, ಸೇತುವೆ ಸೇರಿದಂತೆ ಮೂಲಸೌಕರ್ಯಗಳು ಜನರ ನಿರೀಕ್ಷೆಗೆ ಅನುಗುಣವಾಗಿ ಕಲ್ಪಿಸಿಲ್ಲ ಎಂಬ ಕೊರಗು ನಿವಾರಿಸುವ ನಿಟ್ಟಿನಲ್ಲಿ ಚರ್ಚೆ ಸಾಗುವ ಸಾಧ್ಯತೆ ಹೆಚ್ಚಾಗಿದೆ.

ಚುನಾವಣಾ ವರ್ಷವಾಗಿರುವುದರಿಂದ ಸರ್ಕಾರವೂ ಈ ಭಾಗದ ಅಭಿವೃದ್ಧಿ ಪೂರಕವಾಗಿ ಇದುವರೆಗೆ ಕೈಗೊಂಡಿರುವ ಕ್ರಮಗಳ ಪಟ್ಟಿ ನೀಡುವುದರ ಜತೆಗೆ ಹೊಸ ಯೋಜನೆ, ಕಾರ್ಯಕ್ರಮಗಳನ್ನು ಘೋಷಣೆ ಮಾಡುವ ಸಾಧ್ಯತೆಗಳಿವೆ.

ಈಗಾಗಲೇ ಗಡಿ ಸಮಸ್ಯೆ, ಕಬ್ಬು ಬೆಳೆಗಾರರ ಸಮಸ್ಯೆಗಳು ಉಭಯ ಸದನದಲ್ಲಿ ಪ್ರತಿಧ್ವನಿಸಿ ಚರ್ಚೆಗೆ ಅವಕಾಶ ಮಾಡಿಕೊಟ್ಟಿವೆ. ಚರ್ಚೆಯ ಸಂದರ್ಭದಲ್ಲಿ ಆರೋಪ ಪ್ರತ್ಯಾರೋಪಗಳು ನಡೆದು ಪರಸ್ಪರ ಸಾಧನೆಗಳನ್ನು ಪ್ರಸ್ತಾಪಿಸುವ ಸಾಧ್ಯತೆ ಹೆಚ್ಚಾಗಿದೆ.

North Karnataka, issue, discussion, Winter Session, Belgaum,

Articles You Might Like

Share This Article