ಪೊಂಗ್ಯಾಂಗ್,ಡಿ.7- ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಉತ್ತರ ಕೊರಿಯಾ ಸರ್ವಾಧಿಕಾರಿ ಆಡಳಿತ ಮರಣದಂಡನೆ ಶಿಕ್ಷೆ ವಿಧಿಸಿದ ಘೋರ ಘಟನೆ ನಡೆದಿದೆ.
ಉತ್ತರ ಕೊರಿಯಾದಲ್ಲಿ ಇಬ್ಬರು ವಿದ್ಯಾರ್ಥಿಗಳು ದಕ್ಷಿಣ ಕೊರಿಯಾದ ಡ್ರಾಮಾವನ್ನು ವೀಕ್ಷಿಸಿದ ಹಿನ್ನೆಲೆಯಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಉತ್ತರ ಕೊರಿಯಾದ ರಿಯಾಂಗ್ಗಾಂಗ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ ಇದು ಚೀನಾದ ಗಡಿ ಭಾಗದ ಸಮೀಪದಲ್ಲಿದೆ ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಸುಲಭವಾಗಿ ದಕ್ಷಿಣ ಕೊರಿಯಾ ಹಾಗೂ ಅಮೆರಿಕದ ಸಿನಿಮಾಗಳು ಜಾಲತಾಣದಲ್ಲಿ ಸುಲಭವಾಗಿ ಸಿಗುತ್ತವೆ.
ಮೊದಲ ಹಂತದ ಜೆಡಿಎಸ್ ಪಂಚರತ್ನ ರಥಯಾತ್ರೆಗೆ ತೆರೆ
ದಕ್ಷಿಣ ಕೊರಿಯಾ ಸಿನಿಮಾ ವೀಕ್ಷಿಸುವುದನ್ನು ಉತ್ತರ ಕೊರಿಯಾ ನಿಷೇಧಿಸಿ 17 ವರ್ಷದ ಇಬ್ಬರು ವಿದ್ಯಾರ್ಥಿಗಳು ಶಾಲೆಯ ಕೋಣೆಯೊಂದರಲ್ಲಿ ಗುಟ್ಟ್ಗಿ ಡ್ರಾಮಾ ವೀಕ್ಷಿಸಿದ್ದರಿಂದ ಅವರನ್ನು ಬಂಧಿಸಿ ವಾಯುನೆಲೆಯ ಮೈದಾನದಲ್ಲಿ ಸ್ಥಳೀಯರ ಎದುರುಗುಂಡಿಟ್ಟು ಕೊಲ್ಲಲಾಗಿದೆ ಎಂಬ ಮಾಹಿತಿ ಬಹಿರಂಗಗೊಂಡಿದೆ.
ಒಲಂಪಿಕ್-ಪ್ಯಾರಾ ಒಲಂಪಿಕ್ ಪದಕ ವಿಜೇತರಿಗೆ ಸರ್ಕಾರಿ ಉದ್ಯೋಗ : ಸಿಎಂ
#NorthKorea, #Publicly,#Executes, #Two, #Minors, #Watching, #Drama,