ಬೆಂಗಳೂರು, ಮಾ.6- ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಾಫೀ, ತಿಂಡಿ, ಬಿಸ್ಕೆಟ್‍ಗಳ ಹೆಸರಿನಲ್ಲೂ 200 ಕೋಟಿ ರೂ.ಗಳ ಅವ್ಯವಹಾರ ನಡೆಸಲಾಗಿದೆ ಎಂಬ ಗಂಭೀರ ಆರೋಪ ಮಾಡಿರುವ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಅವರು ಇಡಿ ಪ್ರಕರಣವನ್ನು ಸಿಬಿಐ ಇಲ್ಲವೇ ಸಿಐಡಿ ತನಿಖೆಗೆ ವಹಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಐದು ವರ್ಷಗಳ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಗೆ ಆಗಮಿಸುವ ಗಣ್ಯರ ಉಪಚಾರದ ಹೆಸರಿನಲ್ಲಿ 200,62,93,027 (ಇನ್ನೂರು ಕೋಟಿ ಅರವತ್ತೆರಡು ಲಕ್ಷದ ತೊಂಬತ್ತಮೂರು ಸಾವಿರದ ಇಪ್ಪತ್ತೇಳು) ರೂ.ಖರ್ಚು ಮಾಡಲಾಗಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ಬಿಡುಗಡೆ ಮಾಡಿದರು.
H3N2 ವೈರಸ್ ಬಗ್ಗೆ ಅನಗತ್ಯ ವದಂತಿ ಹಬ್ಬಿಸಬೇಡಿ : ಸಚಿವ ಸುಧಾಕರ್
ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಾಗೂ ರಾಜ್ಯ ಅತಿಥಿ ಗೃಹಗಳ ವಿಭಾಗದ ಅಕಾರಿಗಳು ನೀಡಿರುವ ಅಕೃತ ದಾಖಲೆಗಳು ಹೇಳುವಂತೆ ಸಿದ್ಧರಾಮಯ್ಯನವರ ಆಡಳಿತಾವಯಲ್ಲಿ ಅಂದಿನ ಮುಖ್ಯಮಂತ್ರಿಗಳ ಕಚೇರಿಯ ಸಭೆಗಳು ಮತ್ತು ಅತಿಥಿ – ಗಣ್ಯರ ಉಪಚಾರಗಳಿಗೆಂದು ವೆಚ್ಛ ಮಾಡಿರುವ ವರ್ಷಾವಾರು ವಿವರ ಈ ಕೆಳಕಂಡಂತಿದೆ.
2013-14: 36,03,03,078/-
2014-15: 38,26,68,575/-
2015-16: 36,66,19,743/-
2016-17: 44,73,92,077/-
2017-18: 44,93,09,554/-
ಒಟ್ಟು : 200,62,93,027/-
ಐದು ವರ್ಷದ 1,825 ದಿನಗಳಲ್ಲಿ ಭಾನುವಾರ, ಎರಡನೇ ಶನಿವಾರ ಮತ್ತು ಸರ್ಕಾರೀ ರಜಾ ದಿನಗಳು ಪ್ರತೀ ವರ್ಷಕ್ಕೆ 82 ದಿನಗಳಂತೆ, ಐದು ವರ್ಷಗಳಿಗೆ ಒಟ್ಟು 410 ದಿನಗಳು ಸರ್ಕಾರೀ ರಜಾ ದಿನಗಳಿರುತ್ತವೆ.
ಆದರೂ, ಸಿದ್ಧರಾಮಯ್ಯ ನವರ ಅವಧಿಯಲ್ಲಿ ಮುಖ್ಯ ಮಂತ್ರಿಗಳ ಕಚೇರಿಯು ಒಂದು ದಿನವೂ ರಜೆಯಿಲ್ಲದೆ ಎಲ್ಲಾ ಭಾನುವಾರಗಳು, ಎರಡನೇ ಶನಿವಾರಗಳು ಮತ್ತು ಎಲ್ಲಾ ಸರ್ಕಾರೀ ರಜಾ ದಿನಗಳಲ್ಲೂ ಕಾರ್ಯ ನಿರ್ವಹಿಸಿದೆಯೆಂದು ಭಾವಿಸಿದರೂ ಸಹ 05 ವರ್ಷಗಳ ಅವಧಿಯ ಒಟ್ಟು 1,825 ದಿನಗಳಲ್ಲಿ ಅಂದಿನ ಸಿದ್ಧರಾಮಯ್ಯನವರ ಅಧಿಕೃತ ಕಚೆರಿಯ ಸಭೆಗಳಲ್ಲಿ ಮತ್ತು ಅತಿಥಿ ಗಣ್ಯರ ಉಪಚಾರಗಳ ಹೆಸರಿನಲ್ಲಿ ಕಾಫೀ – ತಿಂಡಿ – ಸ್ನಾಕ್ಸ್ – ಉಪಹಾರಗಳಿಗೆಂದು ಪ್ರತೀ ದಿನವೊಂದಕ್ಕೆ ಹತ್ತು ಲಕ್ಷದ ತೊಂಬತ್ತೊಂಬತ್ತು ಸಾವಿರದ ಮುನ್ನೂರಾ ಮೂವತ್ತೊಂಬತ್ತು ರೂ.ಗಳನ್ನು ಖರ್ಚು ಮಾಡಲಾಗಿದೆ.
ಪಾಕ್‍ನಲ್ಲಿ ಆತ್ಮಹತ್ಯಾ ದಾಳಿ : 9 ಪೊಲೀಸ್ ಸಿಬ್ಬಂದಿ ಸಾವು
ಅಂದಿನ ಅಧಿಕಾರಿಗಳು ನಕಲಿ ಬಿಲ್ ಸೃಷ್ಟಿಸಿ ಸರ್ಕಾರದ ಬೊಕ್ಕಸದಿಂದ 200 ಕೋಟಿ ರೂ.ಗಳ ವಂಚನೆ ನಡೆಸಿದ್ದಾರೆ. ಇದಕ್ಕೆ ಲೆಕ್ಕ ಪರಿಶೋಧನಾ ವರದಿಯಲ್ಲೂ ಆಕ್ಷೇಪಣೆಗಳು ವ್ಯಕ್ತವಾಗಿತ್ತು. ಆದರೂ, ಭ್ರಷ್ಟಾಚಾರದ ಪಿತಾಮಹ ಸಿದ್ಧರಾಮಯ್ಯನವರು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುವ ಮೂಲಕ ತಾವೆಂಥ ಭಂಡ ರಾಜಕಾರಣಿ ಎಂಬುದನ್ನು ಜಗಜ್ಜಾಹೀರುಪಡಿಸಿದ್ದಾರೆ ಎಂದು ರಮೇಶ್ ಆರೋಪಿಸಿದ್ದಾರೆ.
ಕಳೆದ 75 ವರ್ಷಗಳಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸಿರುವ 25 ಮಂದಿ ಮುಖ್ಯಮಂತ್ರಿಗಳ ಪೈಕಿ, ಬೇರೆ ಇನ್ಯಾವ ಮುಖ್ಯಮಂತ್ರಿಗಳ ಅವಧಿಯಲ್ಲೂ ಸಹ ನಡೆಯದ ಅತಿಥಿ ಉಪಚಾರದ ಹೆಸರಿನ ಇಂತಹ ಭ್ರಷ್ಟಾಚಾರ ಸಿದ್ಧರಾಮಯ್ಯನವರ ಸರ್ಕಾರದಲ್ಲಿ ನಡೆದಿದೆ.
ಹಾಸಿಗೆ – ದಿಂಬು, ಇಂದಿರಾ ಕ್ಯಾಂಟೀನ್ ತಿಂಡಿ, ನೆಲದಡಿಯ ಕಸದ ಡಬ್ಬಗಳು ಮತ್ತು ಎಲ್‍ಇಡಿ ದೀಪಗಳ ಅಳವಡಿಕೆಯಂತಹ ಯೋಜನೆಗಳ ಹೆಸರಿನಲ್ಲೂ ಸಾವಿರಾರು ಕೋಟಿ ರೂಪಾಯಿಗಳನ್ನು ಲೂಟಿ ಮಾಡಿರುವ ಸಿದ್ಧರಾಮಯ್ಯನವರ ಆಡಳಿತಾವಧಿಯಲ್ಲಿ ಕೇವಲ ಮುಖ್ಯಮಂತ್ರಿಗಳ ಕಚೇರಿಯ ಕಾರ್ಯಗಳಿಗೆ ಕಾಫೀ – ತಿಂಡಿ – ಬಿಸ್ಕೇಟ್ ಪೂರೈಕೆ ಹೆಸರಿನಲ್ಲೂ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣವನ್ನು ಲೂಟಿ ಮಾಡಿರುವುದನ್ನು ನೋಡಿದರೆ, ಇಂತಹ ಬೃಹತ್ ಭ್ರಷ್ಟಾಚಾರಗಳ ಸರ್ಕಾರ ದೇಶದಲ್ಲಿ ಮತ್ತೊಂದಿಲ್ಲ ಎಂದು ಸ್ಪಷ್ಟವಾಗಿ ತಿಳಿಯುತ್ತದೆ.
KSDL ಹಗರಣದಿಂದ ಮುಜುಗರ : ಅಮಿತ್ ಶಾ ದಾವಣಗೆರೆ ಭೇಟಿ ರದ್ದು
ಹೀಗಾಗಿ ಇಡಿ ಪ್ರಕರಣದ ತನಿಖೆಯನ್ನು ಸಿಬಿಐ ಇಲ್ಲವೇ ಸಿಐಡಿಗೆ ವಹಿಸುವಂತೆ ಎನ್.ಆರ್.ರಮೇಶ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
NR Ramesh, demands, CID probe, siddaramaiah, government, Corruption,