ಅಕ್ರಮ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಲು NR ರಮೇಶ್ ಆಗ್ರಹ

Social Share

ಬೆಂಗಳೂರು, ನ.21- ಬಿಬಿಎಂಪಿ ವ್ಯಾಪ್ತಿಯ ಮತ ದಾರರ ಪಟ್ಟಿಗೆ ಅಕ್ರಮವಾಗಿ ಸೇರ್ಪಡೆ ಮಾಡಿರುವ ಒಂದೂವರೆ ಲಕ್ಷಕ್ಕೂ ಹೆಚ್ಚು ಅಲ್ಪಸಂಖ್ಯಾತ ಮತದಾರರ ಹೆಸರುಗಳನ್ನು ಈ ಕೂಡಲೆ ತೆಗೆದು ಹಾಕಲು ಕ್ರಮ ಕೈಗೊಳ್ಳ ಬೇಕು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷ ಎನ್. ಆರ್.ರಮೇಶ್ ಅವರು ಒತ್ತಾಯಿಸಿದ್ದಾರೆ.

ಈ ಕುರಿತಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹಾಗೂ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರಿಗೆ ಪತ್ರ ಬರೆದಿರುವ ಅವರು ಬಿಬಿಎಂಪಿ ವ್ಯಾಪ್ತಿಯ 13 ವಿಧಾನಸಭಾ ಕ್ಷೇತ್ರಗಳ್ಲಿ ಹೊರ ರಾಜ್ಯಗಳ ಒಂದೂವರೆ ಲಕ್ಷಕ್ಕೂ ಹೆಚ್ಚು ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ರುವ ಕುರಿತಂತೆ ಈಗಾಗಲೇ ರಾಜ್ಯ ಚುನಾವಣಾ ಆಯೋಗ ಹಾಗೂ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿರುವುದನ್ನು ಉಲ್ಲೇಖಿಸಿದ್ದಾರೆ.

2021ರಲ್ಲಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 4,700 ಕ್ಕೂ ಹೆಚ್ಚು ಹೊರ ರಾಜ್ಯಗಳ ಅಲ್ಪ ಸಂಖ್ಯಾತ ಮತದಾರರನ್ನು ಚಿಕ್ಕಪೇಟೆ ವಿಭಾಗದ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿರುವ ವಿಷಯವನ್ನೂ ಸಹ ದಾಖಲೆಗಳ ಸಹಿತ ಪಾಲಿಕೆಯ ಆಯುಕ್ತರು, ವಿಶೇಷ ಆಯುಕ್ತರು ಮತ್ತು ಜಂಟಿ ಆಯುಕ್ತರ ಗಮನಕ್ಕೆ ತರಲಾಗಿತ್ತು.

ಭಯೋತ್ಪಾದನೆ ಕೃತ್ಯ ಎಸಗುವವರು ಯಾವುದೇ ಜಾತಿ, ಧರ್ಮರಾಗಿದ್ದರೂ ಎನ್‍ಕೌಂಟರ್ ಮಾಡಿ : ಈಶ್ವರಪ್ಪ

ಅದೇ ರೀತಿ ಕಳೆದ ಮಾರ್ಚ್‍ನಲ್ಲಿ ಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 170 ರಲ್ಲಿ ಕಂದಾಯ ಪರಿವೀಕ್ಷಕರು ಮತ್ತು ಕಂದಾಯ ವಸೂಲಿಗಾರರು ಕಾನೂನು ಬಾಹಿರವಾಗಿ ವೀರನ್ ಏಳುಮಲೈ ಎಂಬ ಸಹಾಯಕನೊಬ್ಬನನ್ನು ನಿಯೋಜಿಸಿಕೊಂಡು ಆತನ ಮುಖಾಂತರ ನೂರಾರು ಜನ ಹೊರ ಪ್ರದೇಶಗಳ ಜನರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಸಿದ್ದ ವಿಷಯವನ್ನೂ ಸಹ ದಾಖಲೆಗಳ ಸಹಿತ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರುಗಳನ್ನು ನೀಡಲಾಗಿತ್ತು.

ಇಂಡೋನೇಷ್ಯಾದಲ್ಲಿ ಭೂಕಂಪ, 20 ಸಾವು, 300ಕ್ಕೂ ಹೆಚ್ಚು ಮಂದಿಗೆ ಗಾಯ

ಆದರೆ, ಈ ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ನಿಯಮಬಾಹಿರವಾಗಿ ಕಾನೂನಿನ ಎಲ್ಲಾ ನಿಯಮಗಳನ್ನೂ ಗಾಳಿಗೆ ತೂರಿ ಬಿಬಿಎಂಪಿ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ನಮ್ಮ ನೆರೆಯ ರಾಜ್ಯಗಳಾದ ತಮಿಳುನಾಡಿನ ಕೃಷ್ಣಗಿರಿ, ಧರ್ಮಪುರಿ, ಹೊಸೂರು, ಕೇರಳ ರಾಜ್ಯದ ಕಾಸರಗೂಡು, ಕಣ್ಣೂರು ಜಿಲ್ಲೆಗಳ ಮತ್ತು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು ಮತ್ತು ಬಂಗಾರುಪಾಳ್ಯ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ಜನರನ್ನು ಇಲ್ಲಿನ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿರುವ ಅಧಿಕಾರಿಗಳ ವಿರುದ್ಧ ಇದುವರೆಗೂ ಯಾವುದೆ ಕ್ರಮಗಳನ್ನು ಕೈಗೊಂಡಿಲ್ಲ.

2023ನೇ ಸಾಲಿನ ಸಾರ್ವತ್ರಿಕ ರಜಾದಿನಗಳ ಪಟ್ಟಿ ಪ್ರಕಟ

ಹೀಗಾಗಿ ಕೂಡಲೇ ಈ ರೀತಿ ಸೇರ್ಪಡೆ ಮಾಡಿರುವ ಹೊರ ರಾಜ್ಯಗಳ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆಯುವ ಬಗ್ಗೆ ಮತ್ತು ಈ ರೀತಿ ಕಾನೂನು ಬಾಹಿರ ಕಾರ್ಯಗಳನ್ನು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ರಮೇಶ್ ಅವರು ಮತ್ತೊಮ್ಮೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ.

NR Ramesh, demands, remove, illegal, voters, BBMP,

Articles You Might Like

Share This Article