ಬೆಂಗಳೂರು,ಜು.15- ವಿಧಾನಪರಿಷತ್‌ನ ಸಭಾನಾಯಕರಾಗಿ ಹಾಲಿ ಸಚಿವ ಎನ್.ಎಸ್.ಭೋಸರಾಜ್ ಅವರು ನೇಮಕವಾಗಿದ್ದಾರೆ. ಮುಂಗಾರು ಅಧಿವೇಶನದ ಮೊದಲ ದಿನದ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಭಾ ನಾಯಕರಾಗಿ ಭೋಸರಾಜ್ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆಯಂತೆ ಭೋಸರಾಜ್ ಅವರನ್ನು ನೇಮಿಸಲಾಗಿದೆ ಎಂದು ಪ್ರಕಟಿಸುತ್ತಿದ್ದಂತೆ ಸದನದ ಸದಸ್ಯರು ಮೇಜುಕುಟ್ಟಿ ಸ್ವಾಗತಿಸಿದರು.
ಸಣ್ಣ ನೀರಾವರಿ ಸಚಿವರಾಗಿರುವ ಭೋಸ್ ರಾಜ್ ಅವರು ಇತ್ತೀಚೆಗೆ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದರು.
ಹಿರಿತನದ ಆಧಾರದ ಮೇಲೆ ಭೋಸ್‌ರಾಜ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆಯೂ ಅವರು ಸಭಾ ನಾಯಕರಾಗಿ ಕಾರ್ಯ ನಿರ್ವಹಿಸಿದ್ದರು.