ಹಾರೋಹಳ್ಳಿ,ಫೆ.5– ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಆತಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಹಾರೋಹಳ್ಳಿ ಬಳಿಯ ದಯಾನಂದ ಸಾಗರ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಕಣ್ಣೂರು ಗ್ರಾಮದ ಅನಾಮಿಕ (19) ಆತಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ನಿನ್ನೆ ರಾತ್ರಿ 8ಗಂಟೆ ಸುಮಾರಿಗೆ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿದ್ದು, ನಿಖರವಾದ ಕಾರಣ ಸದ್ಯಕ್ಕೆ ತಿಳಿದು ಬಂದಿಲ್ಲ.ರಾತ್ರಿ ಊಟಕ್ಕೆ ಬಾರದಿದ್ದಾಗ ಸ್ನೇಹಿತೆಯರು ಆಕೆಯ ಕೊಠಡಿ ಬಳಿ ಹೋಗಿ ಬಾಗಿಲು ತಟ್ಟಿ ಕೂಗಿದ್ದಾರೆ.
ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಗಾಬರಿಗೊಂಡು ಕಿಟಕಿಯಿಂದ ನೋಡಿದಾಗ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವುದು ಕಂಡು ತಕ್ಷಣ ಹಾಸ್ಟೆಲ್ ವಾರ್ಡ್ನ್ಗೆ ತಿಳಿಸಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಹಾರೋಹಳ್ಳಿ ಠಾಣೆ ಪೊಲೀಸರು ಬಂದು ಪರಿಶೀಲನೆ ನಡೆಸಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು,ಅದರಲ್ಲಿ ಅಮ ನನ್ನನ್ನು ಕ್ಷಮಿಸು ನನಗೆ ಟಾರ್ಚರ್ ಆಗುತ್ತಿದೆ,ನಾನು ಆತಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದು, ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.