ಬೆಂಗಳೂರು,ಅ.6- ಹಿಂದುಳಿದ ವರ್ಗಗಳಿಗೆ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ನಿರ್ಧಾರವನ್ನು ಸಚಿವ ಸಂಪುಟದಲ್ಲಿ ಅಂಗೀಕರಿಸಿರುವುದರಿಂದ ಚುನಾವಣೆಯ ಹಾದಿ ಸುಗಮವಾಗಿದೆ ಎಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.
ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನ್ಯಾಯಮೂರ್ತಿ ಭಕ್ತವತ್ಸಲ ಆಯೋಗ ನೀಡಿದ್ದ ವರದಿಯಲ್ಲಿ 5 ಶಿಫಾರಸ್ಸುಗಳ ಪೈಕಿ 3ನ್ನು ಅಂಗೀಕರಿಸಲಾಗಿದೆ. ಅದರ ಪ್ರಕಾರ ಮುಂದೆ ನಡೆಯುವ ಎಲ್ಲಾ ಚುನಾವಣೆಗಳಲ್ಲೂ ಗ್ರಾಮ, ತಾಲೂಕು, ಜಿಲ್ಲಾ ಪಂಚಾಯಿತಿಗಳು, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಪಾಲಿಕೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.33 ರಷ್ಟು ಸ್ಥಾನಗಳನ್ನು ಮೀಸಲಿರಿಸಲಾಗಿದೆ.
ಭಾರೀ ಚರ್ಚೆಗೆ ಕಾರಣವಾಯ್ತು ರಾವಣನಿಗೆ ರಾಹುಲ್ ಗಾಂಧಿ ಹೋಲಿಕೆ
ಸಂಪುಟದ ತೀರ್ಮಾನ ಕುರಿತು ವಿಧಾನಮಂಡಲದಲ್ಲಿ ಚರ್ಚೆಯಾಗಿ ಕಾಯಿದೆಯಾಗಬೇಕಿದೆ. ಅದಕ್ಕೆ ರಾಷ್ಟ್ರಪತಿಯವರ ಸಹಿ ಕೂಡ ಅಗತ್ಯವಾಗಿದೆ. ಮೀಸಲಾತಿ ವಿವಾದ ಸುಪ್ರೀಂಕೋರ್ಟಿನ ವಿಚಾರಣೆಯಲ್ಲಿದೆ. ಈಗಾಗಲೇ ನೀಡಿರುವ ಮಧ್ಯಂತರ ತೀರ್ಪಿನಲ್ಲಿ ಒಬಿಸಿ ಮೀಸಲಾತಿಯನ್ನು ನ್ಯಾಯಾಲಯ ತಳ್ಳಿಹಾಕಿದೆ. ಹಿಂದಿನ ಬಿಜೆಪಿ ಸರ್ಕಾರ ನ್ಯಾಯಮೂರ್ತಿ ಭಕ್ತವತ್ಸಲ ಅವರ ನೇತೃತ್ವದಲ್ಲಿ ಆಯೋಗ ರಚನೆ ಮಾಡಿತ್ತು.
ಆಯೋಗ ನೀಡಿದ್ದ 5 ಶಿಫಾರಸ್ಸುಗಳಲ್ಲಿ ಒಬಿಸಿಗಳಿಗೆ ಮೀಸಲಾತಿ ನೀಡಬೇಕು, ಬಿಬಿಎಂಪಿ ಮೇಯರ್, ಉಪಮೇಯರ್ ಹುದ್ದೆಗೂ ಮೀಸಲಾತಿ ಅನ್ವಯವಾಗಬೇಕು, ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣಾ ಘಟಕಗಳನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್) ಅೀಧಿನಕ್ಕೆ ಒಳಪಡಿಸಬೇಕು ಎಂಬ ಶಿಫಾರಸ್ಸುಗಳನ್ನು ಒಪ್ಪಿಕೊಳ್ಳಲಾಗಿದೆ.
ಬಿಬಿಎಂಪಿಯ ಮೇಯರ್ ಹಾಗೂ ಉಪಮೇಯರ್ ಹುದ್ದೆಯ ಅಧಿಕಾರವಯನ್ನು 30 ತಿಂಗಳಿಗೆ ವಿಂಗಡಿಸಿರುವಂತೆ ಇತರೆ ಪಾಲಿಕೆಗಳು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಮೇಯರ್, ಉಪಮೇಯರ್ ಹಾಗೂ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರವಯನ್ನು ವಿಂಗಡಿಸಬೇಕು ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಮೂರು ವರ್ಗಗಳನ್ನಾಗಿ ವಿಭಜಿಸಬೇಕು ಎಂಬ ಶಿಫಾರಸ್ಸನ್ನು ಸಂಪುಟ ತಿರಸ್ಕರಿಸಿದೆ.
ಮಾಸ್ಕೋ-ದೆಹಲಿ ನಡುವೆ ಬಿರುಕು ಮೂಡಿಸಲು ಯಾರಿಂದಲೂ ಸಾಧ್ಯವಿಲ್ಲ ; ಪುಟಿನ್
ರಾಜ್ಯಸರ್ಕಾರ ತೆಗೆದುಕೊಂಡ ನಿರ್ಧಾರಕ್ಕೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಕಾಂಗ್ರೆಸ್, ನ್ಯಾಯಮೂರ್ತಿ ಭಕ್ತವತ್ಸಲ ಆಯೋಗದ ಶಿಫಾರಸ್ಸುಗಳಿಗೆ ಒಪ್ಪಿಗೆ ಸೂಚಿಸುವ ಮೂಲಕ ರಾಜ್ಯಸರ್ಕಾರ ಮಹತ್ತರ ತೀರ್ಮಾನ ಕೈಗೊಂಡಿದೆ. ಈ ನಿರ್ಧಾರದ ಮೂಲಕ ಪಂಚಾಯತ್ ರಾಜ್ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾದಿ ಸುಗಮವಾಗಲಿದೆ. ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ದೊರೆಯಲಿದೆ ಎಂದು ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ.