Tuesday, July 22, 2025
Homeರಾಷ್ಟ್ರೀಯ | Nationalಒಡಿಶಾ : ಯುವತಿಯನ್ನು ಅಪಹರಿಸಿ ಅತ್ಯಾಚಾರ

ಒಡಿಶಾ : ಯುವತಿಯನ್ನು ಅಪಹರಿಸಿ ಅತ್ಯಾಚಾರ

Odisha: Young woman kidnapped and raped

ಪಾರಾದೀಪ್‌, ಜು. 22 (ಪಿಟಿಐ) ಸ್ನೇಹಿತೆಯೊಂದಿಗೆ ಮನೆಗೆ ಹಿಂತಿರುತ್ತಿದ್ದ 18 ವರ್ಷದ ಯುವತಿಯನ್ನು ಇಬ್ಬರು ಅಪಹರಿಸಿ ಅತ್ಯಾಚಾರ ನಡೆಸಿರುವ ಘಟನೆ ಒಡಿಶಾದ ಜಗತ್ಸಿಂಗ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ನಿನ್ನೆ ರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಸಂತ್ರಸ್ತೆಯನ್ನು ಗಂಭೀರ ಸ್ಥಿತಿಯಲ್ಲಿ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ.ಮತ್ತೊಂದು ಗ್ರಾಮದಲ್ಲಿ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿ ಮಹಿಳಾ ಸ್ನೇಹಿತೆಯೊಂದಿಗೆ ಮನೆಗೆ ಹಿಂತಿರುಗುತ್ತಿದ್ದಾಗ ಆಕೆಯನ್ನು ಅಪಹರಿಸಿ ಅತ್ಯಚಾರ ನಡೆಸಲಾಗಿದೆ ಎಂದು ಸಂತ್ರಸ್ಥೆ ತಂದೆ ಪೊಲೀಸ್‌‍ ದೂರಿನಲ್ಲಿ ಆರೋಪಿಸಿದ್ದಾರೆ.

ಆಕೆಯನ್ನು ಕೃಷಿಭೂಮಿಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಲಾಯಿತು, ಆದರೆ ಆಕೆಯ ಸ್ನೇಹಿತೆ ಓಡಿಹೋಗುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಅಪರಾಧಿಗಳನ್ನು ಬಂಧಿಸಲು ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ ಎಂದು ಜಗತ್ಸಿಂಗ್‌ಪುರದ ಬಿಜೆಪಿ ಶಾಸಕ ಅಮರೇಂದ್ರ ದಾಸ್‌‍ ಹೇಳಿದ್ದಾರೆ.

ನಾನು ಎಸ್‌‍ಪಿ ಜೊತೆ ಮಾತನಾಡಿದ್ದೇನೆ. ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.ಜಗತ್ಸಿಂಗ್‌ಪುರ ಸದರ್‌ ಪೊಲೀಸ್‌‍ ಠಾಣೆಯ ಉಸ್ತುವಾರಿ ಅಧಿಕಾರಿ ಪ್ರವಾಸ್‌‍ ಸಾಹೂ ಅವರು ಅಪರಾಧ ಸ್ಥಳಕ್ಕೆ ಭೇಟಿ ನೀಡಿ ಮೊಬೈಲ್‌ ಫೋನ್‌ ವಶಪಡಿಸಿಕೊಂಡಿದ್ದಾರೆ.

ಪೊಲೀಸರ ದೂರಿನ ಪ್ರಕಾರ, ಸಂತ್ರಸ್ಥೆ ರಕ್ತಸ್ರಾವದಿಂದ ಮನೆಗೆ ಮರಳಿದರು, ನಂತರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಮಹಿಳೆಯ ಸ್ನೇಹಿತೆ ಮತ್ತು ಆಕೆಯ ತಾಯಿಯನ್ನು ಪ್ರಶ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ರಾಜ್ಯದಿಂದ ಮಹಿಳೆಯರ ವಿರುದ್ಧದ ಅಪರಾಧಗಳ ಸರಣಿ ವರದಿಯಾಗುತ್ತಿದ್ದು, ಒಂದು ವರ್ಷದ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸುತ್ತಿರುವ ಪ್ರತಿಪಕ್ಷಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ.ಎಲ್ಲಾ ಅಪರಾಧಿಗಳನ್ನು ಬಂಧಿಸುವವರೆಗೆ ನಾವು ಎಸ್‌‍ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಬಿಜೆಡಿ ನಾಯಕ ಪ್ರಿಯಬ್ರತ್‌ ಮೊಹಾಪಾತ್ರ ಹೇಳಿದರು.

RELATED ARTICLES

Latest News