ಬೆಂಗಳೂರು, ಜೂ.29- ಪ್ರಸಿದ್ದ ಬ್ರಾಂಡೆಡ್ ಕಂಪನಿಗಳ ಹೆಸರಿನಲ್ಲಿ ನಕಲಿ ಜೀನ್ಸ್ ಉಡುಪುಗಳ ತಯಾರಿಕೆ ಮಾಡುತ್ತಿದ್ದ ಕಾರ್ಖಾನೆವೊಂದರ ಮೇಲೆ ಮಾದನಾಯಕನಹಳ್ಳಿ ಪೊಲೀಸರು ದಾಳಿ ನಡೆಸಿ, ಸುಮಾರು ರೂಪಾಯಿ 30 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ತಡರಾತ್ರಿ ನಕಲಿ ಬ್ರಾಂಡೆಡ್ ಜೀನ್ಸ್ ತಯಾರಿಕೆ ಅಡ್ಡೆಯ ಮೇಲೆ ದಾಳಿ ನಡೆಸಿ ಪೂಮ, ನೈಕಿ ಬ್ರಾಂಡ್ ನಕಲಿ ಲೇಬಲ್‌ಗಳನ್ನು ಅಂಟಿಸಿ ಸಂಗ್ರಹಿಸಿದ್ದ ನಕಲಿ ಜೀನ್ಸಸ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದೇ ವೇಳೆ ಪೊಲೀಸರು ಹಲವು ಜಾಗತಿಕ ಕಂಪನಿಗಳ ಲೇಬಲ್‌ಗಳನ್ನು ಬಳಸಿಕೊಂಡು ಜೀನ್ಸ್ ಪ್ಯಾಂಟ್, ಶರ್ಟ್ ಸೇರಿದಂತೆ ಹಲವು ಧಿರಿಸುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ಗೋಡೌನ್‌ನಲ್ಲಿ ಸಂಗ್ರಹಿಸಿದ್ದ ನಕಲಿ ಬ್ರಾಂಡ್‌ನ ಬಟ್ಟೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಒಟ್ಟಾರೆ ಮೊತ್ತ 30 ಲಕ್ಷ ರೂ. ಎಂದು ಅವರು ಹೇಳಿದ್ದಾರೆ. ಮಾದನಾಯಕನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-07-2025)
- ಬೆಂಗಳೂರಲ್ಲಿ ಇಂದು ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು
- ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಗೃಹಸಚಿವ ಪರಮೇಶ್ವರ
- ನೈರುತ್ಯ ಮುಂಗಾರು ಚೇತರಿಕೆ, ರಾಜ್ಯದ ಹಲವೆಡೆ ಮಳೆ
- 20 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಬೆಚ್ಚಿ ಬಿದ್ದ ದೆಹಲಿ