Thursday, September 19, 2024
Homeಕ್ರೀಡಾ ಸುದ್ದಿ | Sportsಪ್ಯಾರಿಸ್‌‍ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ 2ನೇ ಪದಕ : ಏರ್‌ ಪಿಸ್ತೂಲ್‌ ಮಿಶ್ರ ಸ್ಫರ್ಧೆದಲ್ಲಿ ಕಂಚು

ಪ್ಯಾರಿಸ್‌‍ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ 2ನೇ ಪದಕ : ಏರ್‌ ಪಿಸ್ತೂಲ್‌ ಮಿಶ್ರ ಸ್ಫರ್ಧೆದಲ್ಲಿ ಕಂಚು

ಪ್ರಾನ್ಸ್ ,ಜು.30-ಪ್ಯಾರಿಸ್‌‍ ಒಲಿಂಪಿಕ್ಸ್ ನ 10 ಮೀಟರ್‌ ಏರ್‌ ಪಿಸ್ತೂಲ್‌ ಮಿಶ್ರ ಸ್ಫರ್ಧೆದಲ್ಲಿ ಭಾರತವು ಕಂಚಿನ ಪದಕ ಗೆದ್ದುಕೊಂಡಿದೆ. ಮೂರನೇ ಸ್ಥಾನಕ್ಕಾಗಿ ನಡೆದ ಈ ಸ್ಪರ್ಧೆಯಲ್ಲಿ ರಿಪಬ್ಲಿಕ್‌ ಆಫ್‌ ಕೊರಿಯಾದ ಓಹ್‌ ಯೆ ಜಿನ್‌ ಮತ್ತು ಲೀ ವೊನ್ಹೋ ಅವರನ್ನು ಸೋಲಿಸಿ ಭಾರತದ ಮನುಭಾಕರ್‌ ಮತ್ತು ಸರಬ್ಜೋತ್‌ ಸಿಂಗ್‌ ಜೋಡಿ ಭಾರತಕ್ಕೆ 2ನೇ ಪದಕ ಗೆದ್ದುಕೊಟ್ಟಿದ್ದಾರೆ.

ಸೋಮವಾರ ಫ್ರಾನ್‌್ಸನ ಚಟೌರೌಕ್ಸ್ ನಲ್ಲಿ ನಡೆದ ಅರ್ಹತಾ ಸುತ್ತಿನಲ್ಲಿ ಮನು ಭಾಕರ್‌ ಮತ್ತು ಸರಬ್ಜೋತ್‌ ಸಿಂಗ್‌ ಮೂರನೇ ಸ್ಥಾನಗಳಿಸಿ ಕಂಚಿನ ಪದಕದ ಸ್ಪರ್ಧೆಗೆ ಅರ್ಹತೆಗಿಟ್ಟಿಸಿಕೊಂಡಿದ್ದರು. 10 ಮೀಟರ್‌ ಏರ್‌ ಪಿಸ್ತೂಲ್‌ ಮಿಶ್ರ ತಂಡ ಸ್ಪರ್ಧೆಯಲ್ಲಿ ಭಾರತೀಯ ಜೋಡಿ ಒಟ್ಟು 580 ಅಂಕಗಳನ್ನು ಕಲೆಹಾಕಿದ್ದರು.

ಮನು ಭಾಕರ್‌ 2ನೇ ಪದಕ:ವಿಶೇಷ ಎಂದರೆ ಈ ಬಾರಿ ಪ್ಯಾರಿಸ್‌‍ ಒಲಿಂಪಿಕ್ಸ್‌‍ನಲ್ಲಿ ಮನು ಭಾಕರ್ಗೆ ಇದು ಎರಡನೇ ಪದಕ. ಇದಕ್ಕೂ ಮುನ್ನ ಮಹಿಳಾ 10 ಮೀಟರ್‌ ಏರ್‌ ಪಿಸ್ತೂಲ್‌ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಅಲಂಕರಿಸುವ ಮೂಲಕ ಕಂಚಿನ ಪದಕ ಗೆದ್ದಿದ್ದರು. ಈ ಮೂಲಕ ಭಾರತದ ಪದಕದ ಖಾತೆ ತೆರೆದಿದ್ದರು.

ಇದೀಗ ಸರಬ್ಜೋತ್‌ ಸಿಂಗ್‌ ಜೊತೆಗೂಡಿ 10 ಮೀಟರ್‌ ಏರ್‌ ಪಿಸ್ತೂಲ್‌ ಮಿಶ್ರ ಸ್ಫರ್ಧೆದಲ್ಲಿ ಕಂಚಿನ ಪದಕ ಗೆಲ್ಲುವಲ್ಲಿ ಮನು ಭಾಕರ್‌ ಯಶಸ್ವಿಯಾಗಿದ್ದಾರೆ. ಈ ಮೂಲಕ ಭಾರತಕ್ಕೆ 2ನೇ ಪದಕ ಗೆದ್ದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.ಮತ್ತು ಈಸಾಧನೆ ಮಾಡಿದ ಮೊದಲ ಭಾರತೀಯ ಮಹಿಳೆ ಎಂಬ ಕೀರ್ತಿ ಸಾಧಿಸಿದಾರೆ.

RELATED ARTICLES

Latest News