BIG NEWS: ರಾಜ್ಯದಲ್ಲಿ ಮತ್ತೆ 10 ಮಂದಿಗೆ ಓಮಿಕ್ರಾನ್ ದೃಢ

Social Share

ಬೆಂಗಳೂರು,ಜ.3- ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 10 ಮಂದಿಗೆ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 76ಕ್ಕೆ ಏರಿಕೆಯಾಗಿದೆ.
ಈ ಕುರಿತು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಜನವರಿ 2ರಂದು ರಾಜ್ಯದಲ್ಲಿ 10 ಹೊಸ ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.
ಪತ್ತೆಯಾಗಿರುವ 10 ಮಂದಿ ಸೋಂಕಿತರ ಪೈಕಿ ಬೆಂಗಳೂರು ನಗರದಲ್ಲೇ 8 ಪ್ರಕರಣಗಳು ಪತ್ತೆಯಾಗಿದ್ದು, ಧಾರವಾಡದಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ತೆಯಾಗಿರುವ 8 ಮಂದಿ ಸೋಂಕಿತರ ಪೈಕಿ 5 ಮಂದಿ ಅಂತಾರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Articles You Might Like

Share This Article