ರಾಜ್ಯದಲ್ಲಿ ಓಮಿಕ್ರಾನ್ ಆತಂಕ ಬೇಡ : ಸಚಿವ ಸುಧಾಕರ್

Social Share

ಮೈಸೂರು, ಅ.27- ದೇಶದಲ್ಲಿ ಮತ್ತೆ ಕೊರೊನಾ ರೂಪಾಂತರಿ ವೈರಸ್ ಭೀತಿ ಎದುರಾಗಿದ್ದು, ರಾಜ್ಯದಲ್ಲಿ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಇಂದಿಲ್ಲಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್‍ನ ಓಮಿಕ್ರಾನ್ ತಳಿಯ ರೂಪಾಂತರಿ ಬಿಕ್ಯೂ1 ಪತ್ತೆಯಾಗಿದೆ. ಈ ಬೆನ್ನಲ್ಲೇ ರಾಜ್ಯದಲ್ಲೂ ಸಹ ಆತಂಕ ಎದುರಾಗಿದೆ.

ಸದ್ಯಕ್ಕೆ ನಮ್ಮಲ್ಲಿ ಯಾವುದೇ ಸೋಂಕು ಪ್ರಕರಣಗಳು ಪತ್ತೆಯಾಗಿಲ್ಲ. ಅಮೆರಿಕದಲ್ಲಿ ಪ್ರಕರಣಗಳು ಕಂಡುಬಂದಿವೆ. ಮಹಾರಾಷ್ಟ್ರದಲ್ಲಿ ಒಂದು ಕೇಸ್ ಪತ್ತೆಯಾಗಿದೆ. ನಮ್ಮಲ್ಲಿ ಯಾವುದೇ ಕೇಸ್‍ಗಳು ಪತ್ತೆಯಾಗಿಲ್ಲ. ಆದರೂ ಸಹ ಎಚ್ಚರ ವಹಿಸಿದ್ದು, ಗಡಿ ಜಿಲ್ಲೆಗಳಲ್ಲಿ ವಿಸ್ತೃತವಾದ ಮಾರ್ಗಸೂಚಿ ನೀಡಿದ್ದೇವೆ ಎಂದರು.

ಎಲ್ಲರ ಪ್ರೀತಿ ವಿಶ್ವಾಸವೇ ನನ್ನ ಆಸ್ತಿ : ಪತ್ರಿಕಾರಂಗದ ಭೀಷ್ಮ ಪಿ.ರಾಮಯ್ಯ

ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆಯಾ ಜಿಲ್ಲಾಕಾರಿಗಳಿಗೆ ಸೂಚನೆ ನೀಡಲಾಗಿದೆ. ಮಾಸ್ಕ್ ಕಡ್ಡಾಯಗೊಳಿಸುವ ಸಂದರ್ಭ ಬಂದಿಲ್ಲ. ಎಲ್ಲರೂ ಸಹ ಮೂರನೆ ಡೋಸ್‍ಅನ್ನು ಕಡ್ಡಾಯವಾಗಿ ಹಾಕಿಸಿಕೊಳ್ಳುವಂತೆ ಮನವಿ ಮಾಡಿದರು.

Articles You Might Like

Share This Article