ವಡೋದರಾ, ಮಾ 22– ಗುಜರಾತ್‌ನ ವಡೋದರಾ ನಗರದಲ್ಲಿ ಇಂದು ಬೆಳಗ್ಗೆ ಏಳು ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಸಜೀವವಾಗಿ ದಹನಗೊಂಡ ಘಟನೆ ನಡೆದಿದೆ.
ಸಯಾಜಿಪುರ ಪ್ರದೇಶದ ವಿನಾಯಕ ಸೊಸೈಟಿ ಕಟ್ಟಡದ ಐದನೇ ಮಹಡಿಯಲ್ಲಿನ ಫ್ಲಾಟ್‌ನಲ್ಲಿ ಬೆಳಿಗ್ಗೆ 9.30 ರ ಸುಮಾರಿಗೆ ಶಾರ್ಟ್ ಸಕ್ ್ರಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಬಾಪೋಡ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಂ.ಆರ್.ಸಂಗದ ತಿಳಿಸಿದ್ದಾರೆ.
ದುರಂತದಲ್ಲಿ ಕಿರಣ್ ರಾಣಾ ಎಮಬುವವರ ಸುಟ್ಟ ದೇಹವನ್ನು ಹೊರತೆಗೆಯಲಾಗಿದೆ ಹಾಸಿಗೆಯ ಮೇಲೆ ಶವ ಪತ್ತೆಯಾಗಿದ್ದು, ಮೃತರು ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಅವರ ಪತ್ನಿ ಬೆಳಿಗ್ಗೆ ಬೇಗ ಕೆಲಸಕ್ಕೆ ತೆರಳಿದ್ದರಿಂದ ಬೆಂಕಿ ಹೊತ್ತಿಕೊಂಡಾಗ ಫ್ಲಾಟ್‌ನಲ್ಲಿ ಒಬ್ಬರೇ ಇದ್ದರು.
ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗೆ ಕಾರಣವಾಗಿರಬಹುದು ಎಂದು ತೋರುತ್ತಿದೆ, ಬೆಂಕಿಯ ನಿಖರವಾದ ಕಾರಣವನ್ನು ಕಂಡುಹಿಡಿಯಲು ವಿಧಿವಿಜ್ಞಾನ ತಂಡವು ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಬಾಪೊಡ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಅಕ್ಕಪಕ್ಕದ ಜನರು ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ದಳದ ತಂಡವು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದರು, ಅದು ಮತ್ತಷ್ಟು ಹರಡದಂತೆ ತಡೆಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.