ಬೆಂಗಳೂರು,ನ.28- ಮತದಾರರ ಪಟ್ಟಿ ಪರಿಷ್ಕರಣ ಅಕ್ರಮ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಹಲಸೂರು ಗೇಟ್ ಠಾಣೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.ಅನಿಲ್ ಬಂತ ಆರೋಪಿ. ಒಟ್ಟಾರೆ ಈ ಪ್ರಕರಣದಲ್ಲಿ ಬಂತರ ಸಂಖ್ಯೆ 12ಕ್ಕೇರಿದೆ.
ಚಿಲುಮೆ ಸಂಸ್ಥೆಯ ಉದ್ಯೋಗಿ ಅನಿಲ್ ಮಹದೇವಪುರ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.
ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್, ನಿರ್ದೇಶಕ ಕೆಂಪೇಗೌಡ, ಆಡಳಿತಾಕಾರಿ ಲೋಕೇಶ್ ಹಾಗೂ ನಾಲ್ಕು ಮಂದಿ ಸೇರಿದಂತೆ ಆರ್ಒಗಳನ್ನು ಬಂಸಲಾಗಿದೆ.
ರೈತರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ 10 ಲಕ್ಷ ಪ್ರೋತ್ಸಾಹ ಧನ ಘೋಷಿಸಿ
ಈ ಪ್ರಕರಣದಲ್ಲಿ ಭಾಗಿಯಾಗಿರುವ ಉಳಿದ ಆರೋಪಿಗಳಿಗಾಗಿ ಹಲಸೂರು ಗೇಟ್ ಠಾಣೆ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ.ಆರೋಪಿಗಳನ್ನು ಬಂಧಿಸಿದ ನಂತರ ಪೊಲೀಸರು ಮನೆ, ಕಚೇರಿಗಳ ಮೇಲೆ ದಾಳಿ ಮಾಡಿ ವಶಪಡಿಸಿಕೊಂಡಿರುವ ದಾಖಲೆಗಳನ್ನು ಸಹ ಪರಿಶೀಲನೆ ಮಾಡುತ್ತಿದ್ದಾರೆ.