ಜೂನ್ 1ರಿಂದ ‘ಒಂದು ದೇಶ-ಒಂದು ಪಡಿತರ’ ಚೀಟಿ ಯೋಜನೆ ಜಾರಿ

ನವದೆಹಲಿ, ಫೆ.8- ಒಂದು ದೇಶ, ಒಂದು ಪಡಿತರ ಚೀಟಿ ಯೋಜನೆ ಜೂ.1ರಿಂದ ದೇಶಾದ್ಯಂತ ಜಾರಿ ಮಾಡಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ಘೋಷಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಒಂದೇ ಪಡಿತರ ಚೀಟಿ ಬಳಸಿ ದೇಶದ ಯಾವುದೇ ಭಾಗದಲ್ಲಿ ಫಲಾನುಭವಿಗಳು ಸಬ್ಸಿಡಿ ದರದಲ್ಲಿ ರೇಷನ್ ಪಡೆಯಬಹುದಾಗಿದೆ ಎಂದು ಹೇಳಿದರು.

ಈಗಾಗಲೇ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಕೇರಳ, ಕರ್ನಾಟಕ, ಹರಿಯಾಣ, ತ್ರಿಪುರ ಮತ್ತು ಗೋವಾ, ಜಾರ್ಖಂಡ್ ಮಧ್ಯಪ್ರದೇಶ ಸೇರಿದಂತೆ 12 ರಾಜ್ಯಗಳಲ್ಲಿ ಜ.1ರಿಂದಲೇ ಯೋಜನೆ ಜಾರಿಯಾಗಿದೆ. ಈ ಯೋಜನೆಗಾಗಿ ಹೊಸ ಪಡಿತರ ಚೀಟಿಗಳನ್ನು ಪಡೆಯುವ ಅಗತ್ಯವಿಲ್ಲ ಮತ್ತು ಈ ವಿಷಯದಲ್ಲಿ ಹರಡಿದ ವದಂತಿಗಳನ್ನು ಹರಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.