ಕೊಲ್ಲಂ (ಕೇರಳ), ಡಿ 4- ಇಲ್ಲಿನ ಆರ್ಯಂಕಾವು ಚೆಕ್ ಪೋಸ್ಟ್ ಬಳಿ ತಮಿಳುನಾಡಿನ ಅಯ್ಯಪ್ಪ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್ ಸರಕು ಸಾಗಣೆ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಮೃತಪಟ್ಟು ,19 ಮಂದಿ ಗಾಯಗೊಂಡಿದ್ದಾರೆ.
ಬೆಳಗಿನ ಜಾವ 4.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಿನಿ ಬಸ್ ಸುಮಾರು 24 ಯಾತ್ರಾರ್ಥಿಗಳೊಂದಿಗೆ ಶಬರಿಮಲೆಯಿಂದ ತಮಿಳುನಾಡಿಗೆ ಹಿಂದಿರುಗುತ್ತಿದ್ದಾಗ ಸರಕು ಟ್ರಕ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ತೆನಲ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾಯಗೊಂಡವರಲ್ಲಿ 17 ಮಂದಿ ಪುನಲೂರಿನ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದು, ಇಬ್ಬರನ್ನು ತಿರುವನಂತಪುರ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.