Thursday, May 8, 2025
Homeರಾಷ್ಟ್ರೀಯ | Nationalಉಗ್ರರ ವಿರುದ್ಧ ಸೇನೆಯಿಂದ 'ಆಪರೇಷನ್‌ ಸಿಂಧೂರ್, ದೇಶದೆಲ್ಲೆಡೆ ಸಂಭ್ರಮಾಚರಣೆ

ಉಗ್ರರ ವಿರುದ್ಧ ಸೇನೆಯಿಂದ ‘ಆಪರೇಷನ್‌ ಸಿಂಧೂರ್, ದೇಶದೆಲ್ಲೆಡೆ ಸಂಭ್ರಮಾಚರಣೆ

'Operation Sindoor' against terrorists, celebrations across the country

ನವದೆಹಲಿ,ಮೇ 7– ಜಮು-ಕಾಶೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್‌ 22ರಂದು ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್‌ ಸಿಂಧೂರ್‌ನಿಂದ 100ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಜಮು-ಕಾಶೀರ ಸೇರಿದಂತೆ ದೇಶಾದ್ಯಂತ ಸಂಭ್ರಮಾಚರಣೆ ಜೋರಾಗಿದೆ.

ಆಪರೇಷನ್‌ ಸಿಂಧೂರ್‌ ಮೂಲಕ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಉತ್ತರ ನೀಡಿದ್ದು, ದೇಶಾದ್ಯಂತ ಸಂಭ್ರಮಾಚರಣೆ ಮುಗಿಲುಮುಟ್ಟಿದೆ. ಜಮು-ಕಾಶೀರದಲ್ಲಿ ವಿಶೇಷವಾಗಿ ದೇಶಪ್ರೇಮಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಪರಿಸ್ಥಿತಿ ಸೂಕ್ಷ್ಮವಾಗಿರುವುದರಿಂದ ಜಮು-ಕಾಶೀರದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಧ್ಯರಾತ್ರಿ 1.30 ರ ಸುಮಾರಿಗೆ ಪಾಕಿಸ್ತಾನದ ಉಗ್ರರ ಅಡಗುದಾಣಗಳ ಮೇಲೆ ಭಾರತೀಯ ಸೇನೆ ಆಪರೇಷನ್‌ ಸಿಂಧೂರ್‌ ಹೆಸರಿನಲ್ಲಿ ಕ್ಷಿಪಣಿ ದಾಳಿ ಮಾಡಿದೆ. ಪಾಕಿಸ್ತಾನದ 9 ಸ್ಥಳಗಳ ಮೇಲೆ ದಾಳಿ ನಡೆದಿದೆ. ಈ ದಾಳಿಯಲ್ಲಿ ಅನೇಕ ಭಯೋತ್ಪಾದಕರು ಮೃತಪಟ್ಟಿದ್ದಾರೆ. ದಾಳಿಯ ನಂತರ, ಭಾರತೀಯ ಸೇನೆಯು ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿ, ಜೈ ಹಿಂದ್‌, ನ್ಯಾಯ ಸಿಕ್ಕಿದೆ ಎಂದು ಉಲ್ಲೇಖಿಸಿದೆ.

ಈ ಕಾರ್ಯಾಚರಣೆಯನ್ನು ಪ್ರಾರಂಭಿಸುವ ಮೊದಲು, ಸೈನ್ಯವು ದಾಳಿ ಮಾಡಲು ಸಿದ್ಧವಾಗಿದೆ, ಗೆಲ್ಲಲು ತರಬೇತಿ ಪಡೆದಿದೆ ಎಂದು ಪೋಸ್ಟ್‌ ಮಾಡಿತ್ತು.ರಕ್ಷಣಾ ಸಚಿವಾಲಯವು ಈ ದಾಳಿಯ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡುವ ಮೂಲಕ ಮಾಹಿತಿ ನೀಡಿದೆ. ಪಾಕಿಸ್ತಾನದ ವಿರುದ್ಧ ತೆಗೆದುಕೊಂಡ ಈ ಕ್ರಮಕ್ಕೆ ಆಪರೇಷನ್‌ ಸಿಂಧೂರ್‌ ಎಂದು ಹೆಸರಿಸಲಾಗಿದೆ.

ನೇಪಾಳಿ ಪ್ರಜೆ ಸೇರಿದಂತೆ 26 ಜನರ ಪ್ರಾಣವನ್ನು ಬಲಿ ಪಡೆದ ಬರ್ಬರ ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ನಿಖರ ಮತ್ತು ಸಂಯಮದ ಪ್ರತಿಕ್ರಿಯೆಯಾಗಿ ಭಾರತ ಆಪರೇಷನ್‌ ಸಿಂಧೂರ್‌ ಪ್ರಾರಂಭಿಸಿದೆ ಎಂದು ರಕ್ಷಣಾ ಸಚಿವಾಲಯ ಪೋಸ್ಟ್‌ ಮಾಡಿದೆ.

ಕಾರ್ಯಾಚರಣೆಯ ವಿವರಗಳನ್ನು ನೀಡಿರುವ ರಕ್ಷಣಾ ಸಚಿವಾಲಯವು, ಗಡಿಯಾಚೆಗಿನ ಭಯೋತ್ಪಾದನಾ ಪೋಷಣೆಯ ಬೇರುಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಜಮು ಮತ್ತು ಕಾಶೀರದಲ್ಲಿನ 9 ಭಯೋತ್ಪಾದಕ ಮೂಲಸೌಕರ್ಯ ತಾಣಗಳನ್ನು ಕೇಂದ್ರೀಕರಿಸಿ ದಾಳಿಗಳನ್ನು ನಡೆಸಲಾಗಿದೆ. ಮುಖ್ಯವಾಗಿ, ಯಾವುದೇ ಪಾಕಿಸ್ತಾನಿ ಸೇನಾ ಸೌಲಭ್ಯದ ಮೇಲೆ ದಾಳಿ ನಡೆದಿಲ್ಲ. ಅನಗತ್ಯ ಪ್ರಚೋದನೆಯನ್ನು ಹಬ್ಬಿಸುವುದು ಬೇಡ. ಅಪರಾಧಿಗಳನ್ನು ಹೊಣೆಗಾರರನ್ನಾಗಿ ಮಾಡುವ ಭಾರತದ ಸಂಕಲ್ಪವನ್ನು ಈ ಕಾರ್ಯಾಚರಣೆ ಪ್ರತಿಬಿಂಬಿಸುತ್ತದೆ ಎಂದು ಹೇಳಿದೆ.

RELATED ARTICLES

Latest News