Thursday, January 2, 2025
Homeರಾಜ್ಯಬಾಣಂತಿಯರ ಸಾವಿನ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡಬಾರದು : ಗುಂಡೂರಾವ್‌

ಬಾಣಂತಿಯರ ಸಾವಿನ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡಬಾರದು : ಗುಂಡೂರಾವ್‌

Opposition parties should not do politics over death: Gundu Rao

ಬೆಳಗಾವಿ,ಡಿ.9- ಬಾಣಂತಿಯರ ಮರಣಗಳು ಆಗುತ್ತಿವೆ, ಪ್ರತಿ ವರ್ಷ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಇದ್ದೇ ಇರುತ್ತದೆ. ಅದನ್ನೇ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸುವುದಕ್ಕೂ ಮುನ್ನ ಮಾತನಾಡಿದ ಅವರು, ಬಾಣಂತಿಯರ ಸಾವಿನ ವಿಚಾರವಾಗಿ ಅಧಿವೇಶನದಲ್ಲಿ ಗಂಭೀರವಾಗಿ ಚರ್ಚೆ ಆಗಬೇಕು. ಅದಕ್ಕೆ ನಾವು ಉತ್ತರ ನೀಡುತ್ತೇವೆ ಎಂದರು.ಬಾಣಂತಿಯರ ಸಾವಿನ ಬಗ್ಗೆ ನಿಜಾಂಶಗಳ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. ಬಾಣಂತಿಯರ ಮರಣಗಳು ಆಗುತ್ತಿವೆ. ಅದಕ್ಕೆ ವೈದ್ಯಕೀಯ ಕಾರಣ ಎನ್ನಲಾಗದು. ಅದನ್ನೇ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು ಎಂದು ಅವರು ವಿರೋಧ ಪಕ್ಷಗಳ ವಿರುದ್ಧ ಕಿಡಿ ಕಾರಿದರು.

ವ್ಯವಸ್ಥೆಗಳನ್ನು ಸರಿಪಡಿಸುವ ಕೆಲಸ ಸಾಕಷ್ಟು ಆಗುತ್ತಿದೆ. ಬಾಣಂತಿಯರ ಮರಣಗಳ ಬಗ್ಗೆ ಬೆಳಗಾವಿ ಅಧಿವೇಶನಲ್ಲಿ ಉತ್ತರ ಕೊಡಲಾಗುವುದು. ಸರ್ಕಾರ ಮೇಡಿಕಲ್‌ ಮಾಫಿಯಾ ಹಿಡಿತಕ್ಕೆ ಸಿಲುಕಿದೆಯಾ ಎಂಬ ವಿಚಾರವಾಗಿ ಸದನದಲ್ಲಿ ನಾನು ಚರ್ಚೆ ಮಾಡುತ್ತೇನೆ ಎಂದರು. ಆರೋಗ್ಯ ಇಲಾಖೆ ಬಗ್ಗೆ ಮಾತನಾಡಬೇಕು.

ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಮರಣದ ವಿಚಾರವಾಗಿ ನಮಗೆ ಬಹಳ ಚಿಂತೆ ಇದೆ. ಸರ್ಕಾರವೂ ಎಚ್ಚೆತ್ತುಕೊಂಡಿದೆ ಎಂದರು.ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತವಾದ ಚಿಕಿತ್ಸೆ ಸಿಗುತ್ತಿಲ್ಲ, ಬಡವರು ಸರ್ಕಾರಿ ಆಸ್ಪತ್ರೆಗೆ ಬರಲು ಭಯ ಪಡುವಂತಾಗಿದೆ ಎಂಬ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಾಗೇನಿಲ್ಲ ಎಂದು ಸಮಜಾಯಿಷಿ ನೀಡಿದರು.

ವೈದ್ಯರು, ವೈದ್ಯಕೀಯ ಸಿಬ್ಬಂದಿ ನೇಮಕಾತಿ :
ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಹಾಗೂ ಸಿಬ್ಬಂದಿ ಕೊರತೆ ಇದೆ. ಮುಂದಿನ ದಿನಗಳಲ್ಲಿ ನೇಮಕಾತಿಗಳನ್ನು ಮಾಡಲಾಗುವುದು. ಅರೆ ವೈದ್ಯಕಿಯ ಸಿಬ್ಬಂದಿ ಕೊರತೆ ಇದೆ. ಅವರನ್ನೂ ನೇಮಕ ಮಾಡಿಕೊಳ್ಳಲಾಗುವುದು ಎಂದು ದಿನೇಶ್‌ ಗುಂಡೂರಾವ್‌ ತಿಳಿಸಿದರು.

RELATED ARTICLES

Latest News