Wednesday, May 1, 2024
Homeರಾಜ್ಯಕೆಎಸ್‌ಆರ್‌ಟಿಸಿ ಸಿಬ್ಬಂದಿ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಆದೇಶ

ಕೆಎಸ್‌ಆರ್‌ಟಿಸಿ ಸಿಬ್ಬಂದಿ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಆದೇಶ

ಬೆಂಗಳೂರು,ಮಾ.16- ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳ ತುಟ್ಟಿಭತ್ಯೆ ಹಿಂಬಾಕಿ, ಗಳಿಕೆ ರಜೆ ನಗದೀಕರಣ ಹಾಗೂ ಉಪಧನದ ಬಾಕಿ ಮೊತ್ತ ಒಟ್ಟು 84 ಕೋಟಿ ರೂ.ಗಳನ್ನು ಪಾವತಿಸಲು ಆದೇಶಿಸಲಾಗಿದೆ. ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಕೆಎಸ್‌ಆರ್‌ಟಿಸಿ ಅಧ್ಯಕ್ಷರ ನಿರ್ದೇಶನದಂತೆ ಪಾವತಿಸಲು ಕೆಎಸ್‌ಆರ್‌ಟಿಸಿ ಯ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಆದೇಶಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಯ ಸಿಬ್ಬಂದಿಗಳಿಗೆ (ನಿವೃತ್ತ ಸಿಬ್ಬಂದಿ ಸೇರಿ) 2022-23ರ ಮೇಯಿಂದ ಗಳಿಕೆ ರಜೆ ನಗದೀಕರಣದ ಮೊತ್ತ 24 ಕೋಟಿ ರೂ. ಹಾಗೂ 2022ರ ಜುಲೈನಿಂದ ನವೆಂಬರ್‍ವರೆಗೆ 5 ತಿಂಗಳು, 2023 ಜನವರಿಯಿಂದ ಜುಲೈವರೆಗಿನ 7 ತಿಂಗಳು ಮತ್ತು ಕಳೆದ ಜುಲೈನಿಂದ ಅಕ್ಟೋಬರ್‍ವರೆಗಿನ 4 ತಿಂಗಳುಗಳ ಹಿಂಬಾಕಿ ತುಟ್ಟಿಭತ್ಯೆ ಮೊತ್ತ 54 ಕೋಟಿ ರೂ. ಪಾವತಿಸಲು ಆದೇಶಿಸಲಾಗಿದೆ.

2024ರ ಜನವರಿಯಲ್ಲಿ ಸಂಸ್ಥೆಯ ಸೇವೆಯಿಂದ ನಿವೃತ್ತರಾದ ಸಿಬ್ಬಂದಿಗಳ ಉಪಧನ 6 ಕೋಟಿ ರೂ. ಮೊತ್ತವನ್ನು ನಿನ್ನೆ ಬಿಡುಗಡೆಗೊಳಿಸಲು ಆದೇಶಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.

RELATED ARTICLES

Latest News