Friday, December 13, 2024
Homeಬೆಂಗಳೂರುಬೆಂಗಳೂರು : ಕೊಳವೆಬಾವಿಗಳನ್ನು ಜಲಮಂಡಳಿ ಸುಪರ್ದಿಗೆ ಒಪ್ಪಿಸುವಂತೆ ಕಟ್ಟಡ ಮಾಲೀಕರಿಗೆ ಆದೇಶ

ಬೆಂಗಳೂರು : ಕೊಳವೆಬಾವಿಗಳನ್ನು ಜಲಮಂಡಳಿ ಸುಪರ್ದಿಗೆ ಒಪ್ಪಿಸುವಂತೆ ಕಟ್ಟಡ ಮಾಲೀಕರಿಗೆ ಆದೇಶ

ಬೆಂಗಳೂರು,ಮಾ.22– ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿರುವ ಹಿನ್ನಲೆಯಲ್ಲಿ ಬೇಸಿಗೆ ಮುಗಿಯುವವರೆಗೂ 20 ಸಾವಿರ ಚದರಡಿ ಮೇಲ್ಪಟ್ಟ ಕಟ್ಟಡ ನಿರ್ಮಾಣದ ಪ್ರದೇಶದಲ್ಲಿರುವ ಕೊಳವೆ ಬಾವಿಗಳನ್ನು ಜಲಮಂಡಳಿ ಸುಪರ್ದಿಗೆ ವಹಿಸುವಂತೆ ಆದೇಶಿಸಲಾಗಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಬೇಸಿಗೆ ಮುಗಿಯುವರೆಗೆ ಅಥವಾ ಮುಂದಿನ ಆದೇಶದವರೆಗೆ ಕೊಳವೆ ಬಾವಿಗಳನ್ನು ಮಂಡಳಿಯ ಸುಪರ್ದಿಗೆ ನೀಡುವಂತೆ ಕಟ್ಟಡ ಮಾಲೀಕರಿಗೆ ನಿರ್ದೇಶಿಸಿ ಆದೇಶಿಸಲಾಗಿದೆ. ಈ ಸಂಬಂಧಿ ಬೆಂಗಳೂರು ಜಲಮಂಡಳಿ ಅಧ್ಯಕ್ಷರು ಆದೇಶ ಹೊರಡಿಸಿದ್ದು, ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಸಂಸ್ಕರಿಸಿದ ನೀರು ಪಡೆಯಲು ಸೂಚಿಸಿದ್ದಾರೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ 1964ರ ಕಲಂ 33 ಮತ್ತು 34ರ ಅನುಸಾರ ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ) ಅಧಿನಿಯಮ 2011ರ ಕಂಡಿಕೆ 11ರ ಅನ್ವಯ ಸಾರ್ವಜನಿಕರ ಹಿತದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ.

ಬೆಂಗಳೂರು ನಗರದಲ್ಲಿ ಮಳೆ ಕೊರತೆಯಿಂದಾಗಿ ಅಂತರ್ಜಲ ಕುಸಿತವಾಗಿ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿವೆ. ಕುಡಿಯುವ ನೀರಿನ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಪ್ರಸ್ತುತ 20 ಸಾವಿರ ಚದರ ಅಡಿ ಮೇಲ್ಪಟ್ಟ ಕಟ್ಟಡ ನಿರ್ಮಾಣ ಮಾಡುವ ಮಾಲೀಕರೊಂದಿಗೆ ಸಭೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.

RELATED ARTICLES

Latest News