Saturday, February 22, 2025
Homeಜಿಲ್ಲಾ ಸುದ್ದಿಗಳು | District Newsಮೈಸೂರು | Mysuruಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪುರುಷರಿಗೆ ಆಸನಗಳನ್ನು ಬಿಟ್ಟುಕೊಡುವಂತೆ ಮಹತ್ವದ ಆದೇಶ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪುರುಷರಿಗೆ ಆಸನಗಳನ್ನು ಬಿಟ್ಟುಕೊಡುವಂತೆ ಮಹತ್ವದ ಆದೇಶ

order to give up seats to men in KSRTC buses

ಮೈಸೂರು,ಫೆ.21- ಸಾರಿಗೆ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಮೀಸಲಿಟ್ಟ ಆಸನಗಳನ್ನು ಬಿಟ್ಟು ಕೊಡಿ….. ಮೀಸಲಿಟ್ಟ ಆಸನದಲ್ಲಿ ಕುಳಿತುಕೊಂಡರೆ ದಂಡ ವಿಧಿಸಲಾಗುವುದು….. ಇತ್ಯಾದಿ ಸಂದೇಶಗಳನ್ನು ಓದಿದ್ದೇವೆ. ಪುರಷ ಪ್ರಯಾಣಿಕರಿಗೆ ಸೀಟುಗಳನ್ನು ಬಿಟ್ಟುಕೊಡುವಂತೆ ಕೆಎಸ್‌ಆರ್‌ಟಿಸಿ ಮೈಸೂರು ನಗರ ವಿಭಾಗದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ.

ಮಹಿಳೆಯರಿಗೆ ಬಸ್ಸಿನಲ್ಲಿ ಸೀಟು ಬಿಟ್ಟುಕೊಡಿ ಎಂದು ಹೇಳುವುದು ಸಾಮಾನ್ಯ. ಆದರೆ ಪುರುಷರಿಗೆ ಬಿಟ್ಟುಕೊಡಿ ಎನ್ನುವುದು ಇಲ್ಲಿಯವರೆಗೂ ಎಲ್ಲಿಯೂ ಕೇಳಿಲ್ಲ. ಆದರೆ ಕೆಎಸ್‌ಆರ್‌ಟಿಸಿಯ ಮೈಸೂರು ವಿಭಾಗದ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಇದರಿಂದ ಅಚ್ಚರಿಯಾದರೂ ಪರವಾಗಿಲ್ಲ, ಇದನ್ನು ನಂಬಲೇಬೇಕು.

ಇತ್ತೀಚಿನ ದಿನಗಳಲ್ಲಿ ಸಾರಿಗೆ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಪುರುಷ ಪ್ರಯಾಣಿಕರಿಗೆ ಸೀಟು ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದು, ಮೈಸೂರು ನಗರ ಸಾರಿಗೆ ವಾಹನಗಳಲ್ಲಿ ಪುರುಷ ಪ್ರಯಾಣಿಕರಿಗೆ ಮೀಸಲಿರುವ ಆಸನಗಳನ್ನು ಅವರಿಗೆ ಬಿಟ್ಟುಕೊಡಬೇಕು ಎಂದು ಮನವಿಗಳು ಬಂದ ಹಿನ್ನಲೆಯಲ್ಲಿ ಮೈಸೂರು ಘಟಕದಿಂದ ಕಾರ್ಯಾಚರಣೆಯಾಗುವ ಎಲ್ಲಾ ವಾಹನಗಳಲ್ಲಿ ಪುರಷ ಪ್ರಯಾಣಿಕರಿಗೆ ಮೀಸಲಿರುವ ಆಸನಗಳನ್ನು ಬಿಟ್ಟುಕೊಡುವಂತೆ ಕೆಎಸ್‌ಆರ್‌ಟಿಸಿ ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಚಾಲಕರು ಹಾಗೂ ಸಿಬ್ಬಂದಿಗೆ ಆದೇಶ ಹೊರಡಿಸಿರುವುದು ಕಂಡುಬಂದಿದೆ.

RELATED ARTICLES

Latest News