ಯಾದಗಿರಿ,ಜ.19- ವಿಕಾಸದ ಜತೆಗೆ ಅಭಿವೃದ್ಧಿ ಮಂತ್ರ ಜಪಿಸಿರುವ ಪ್ರಧಾನಿ ನರೇಂದ್ರ ಮೋದಿ ಡಬ್ಬಲ್ ಎಂಜಿನ್ ಸರ್ಕಾರದಿಂದ ಡಬ್ಬಲ್ ಬೆನಿಫಿಟ್(ಉಪಯೋಗ)ಸಿಗುತ್ತದೆ ಎನ್ನುವ ಮೂಲಕ ಪರೋಕ್ಷವಾಗಿ ಬಿಜೆಪಿ ಸರ್ಕಾರವನ್ನು ಬೆಂಬಲಿಸಬೇಕೆಂದು ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಇಲ್ಲಿನ ಹುಣಸಗಿ ತಾಲ್ಲೂಕಿನ ಕೊಡೇಕಲ್ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ತಮ್ಮ 20 ನಿಮಿಷಗಳ ಭಾಷಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಯನ್ನು ಪ್ರಸ್ತಾಪಿಸಿ ಡಬ್ಬಲ್ ಎಂಜಿನ್ ಸರ್ಕಾರದಿಂದ ಇದು ಸಾಧ್ಯ ಎಂದು ಒತ್ತಿ ಒತ್ತಿ ಹೇಳಿದರು.
ಕನ್ನಡದಲ್ಲಿ ನನ್ನ ಸಹೋದರ, ಸಹೋದರಿಯರೆ ನಿಮಗೆಲ್ಲರಿಗೂ ನಮಸ್ಕಾರ ಎನ್ನುತ್ತಲೇ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ನೀರಾವರಿ, ಕೃಷಿ, ಕುಡಿಯುವ ನೀರು, ಕೈಗಾರಿಕೆ, ರಸ್ತೆ, ಸೇರಿದಂತೆ ಪ್ರತಿಯೊಂದು ಕ್ಷೇತ್ರವೂ ಅಭಿವೃದ್ಧಿಯತ್ತ ದಾಪುಗಾಲು ಇಟ್ಟಿದೆ. ಹಿಂದಿನ ಸರ್ಕಾರಗಳಂತೆ ವೋಟ್ಬ್ಯಾಂಕ್ ರಾಜಕಾರಣ ಮಾಡಿಕೊಂಡಿರಲಿಲ್ಲ. ಹಿಂದೆ ಪ್ರತಿಯೊಂದು ಯೋಜನೆಗಳಲ್ಲೂ ವೋಟ್ ಬ್ಯಾಂಕ್ ರಾಜಕಾರಣ ಅಡಗಿತ್ತು ಎಂದು ಪರೋಕ್ಷವಾಗಿ ಕಾಂಗ್ರೆಸ್ ಹೆಸರೇಳದೆ ವಾಗ್ದಾಳಿ ನಡೆಸಿದರು.
ಮೈಕೊರೆಯುವ ಚಳಿಯಲ್ಲೂ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
ಈ ಹಿಂದೆ ಉತ್ತರ ಕರ್ನಾಟಕ ಹಿಂದುಳಿಯಲು ಯಾರು ಕಾರಣ ಎಂದು ಪ್ರಶ್ನಿಸಿದ ಮೋದಿ, ಒಂದು ಯೋಜನೆ ಜಾರಿ ಮಾಡಬೇಕಾದರೆ ಅದರಲ್ಲಿ ವೋಟ್ಬ್ಯಾಂಕ್ ರಾಜಕಾರಣ ಇರುತ್ತಿತ್ತು. ಈಗ ಈ ಸಂಪ್ರದಾಯ ಹೋಗಿ ಅಭಿವೃದ್ಧಿ, ವಿಕಾಸ ನಿಮ್ಮ ಕಣ್ಣ ಮುಂದೆ ಇದೆ. ವೋಟ್ ಬ್ಯಾಂಕ್ ರಾಜಕಾರಣ ಮಾಡುವವರನ್ನು ನಂಬಬೇಡಿ ಎಂದು ಮನವಿ ಮಾಡಿದರು.
Our, government, not votebank, politics, development, PM Modi,