ವಾರಣಾಸಿ,ಮಾ.1- ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಮ್ಮ ಆದಾಯ 10 ಪಟ್ಟು ಹೆಚ್ಚಾಗಿದೆ ಎಂದು ದೋಣಿ ನಿರ್ವಾಹಕರು ಹೇಳಿದ್ದಾರೆ. ದೇಶದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಹಲವಾರು ಕ್ರಮಗಳನ್ನು ಕೈಗೊಂಡಿದ್ದಾರೆ. ಇದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ನಮ್ಮ ಆದಾಯವು ವೃದ್ಧಿಸಿದೆ ಎಂದು ದೋಣಿ ನಡೆಸುವ ಸೋನಿನಿಸಾದ್ ತಿಳಿಸಿದ್ದಾರೆ.
ನಮ್ಮ ಮುತ್ತಾತ ಅವರು ಆಸಿಘಾಟ್ನಲ್ಲಿ ದೋಣಿ ನಡೆಸುತ್ತಿದ್ದರು. ಈ ಭಾಗದಲ್ಲಿ ಸುಮಾರು ಒಂದೂವರೆ ಲಕ್ಷ ಕುಟುಂಬಗಳು ಈ ವೃತ್ತಿ ಅವಲಂಬಿಸಿವೆ. ಅವರ ದೈನಂದಿನ ಖರ್ಚು, ವೆಚ್ಚಗಳನ್ನು ನಿಬಾಯಿಸುವುದು ಒಂದು ಕಾಲದಲ್ಲಿ ಕಷ್ಟವಾಗಿತ್ತು. ಆದರೆ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನದಿಗಳನ್ನು ಸ್ವಚ್ಛಗೊಳಿಸಿದ್ದರಿಂದ, ದೇವಸ್ಥಾನಗಳನ್ನು ಪುನರುಜ್ಜೀವನಗೊಳಿಸಿದ್ದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ ಎಂದಿದ್ದಾರೆ.
ಚಂದನ್ ಶೈನಿ ಮಾತನಾಡಿ, ದೋಣಿಗಳಿಗೆ ಗ್ಯಾಸ್ ಸಂಪರ್ಕ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. 84 ಘಾಟ್ಗಳು ಸುಸಜ್ಜಿತವಾಗಿವೆ. ಪ್ರಯಾಣಿಕರಿಗೆ ನಾಲ್ಕು ಪಟ್ಟು ಹೆಚ್ಚಾಗಿದೆ. ಆದಾಯವೂ ದ್ವಿಗುಣಗೊಂಡಿದೆ ಎಂದಿದ್ದಾರೆ.
