ಭಾರತದಲ್ಲಿ ಸೆಕ್ಯುಲರಿಸಂ ಅಗತ್ಯವಿಲ್ಲ : ತಮಿಳುನಾಡು ರಾಜ್ಯಪಾಲ ಆರ್‌.ಎನ್‌.ರವಿ

ಚೆನ್ನೈ,ಸೆ.24– ಜಾತ್ಯಾತೀತತೆ ಎನ್ನುವುದು ಯುರೋಪಿಯನ್‌ ದೇಶದ ಪರಿಕಲ್ಪನೆಯಾಗಿದೆ. ಭಾರತದಲ್ಲಿ ಸೆಕ್ಯುಲರಿಸಂ ಅಗತ್ಯವಿಲ್ಲ ಎಂದು ತಮಿಳುನಾಡು ರಾಜ್ಯಪಾಲ ಆರ್‌.ಎನ್‌.ರವಿ ಹೇಳಿದ್ದಾರೆ. ಸದ್ಯ ಈ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದ್ದು ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕನ್ಯಾಕುಮಾರಿಯ ತಿರುವಟ್ಟಾರ್ನಲ್ಲಿ ನಡೆದ ಹಿಂದೂ ಧರ್ಮದ ವಿದ್ಯಾಪೀಠಂನ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಜಾತ್ಯಾತೀತತೆ ಎನ್ನುವುದು ಪಶ್ಚಿಮದ ದೂರದ ದೇಶದಿಂದ ಬಂದ ಪರಿಕಲ್ಪನೆಯಾಗಿದ್ದು, ಜಾತ್ಯಾತೀತತೆಗೆ ಭಾರತದಲ್ಲಿ ನೆಲೆಯಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯೂರೋಪಿನಲ್ಲಿ ಚರ್ಚ್‌ ಹಾಗೂ ರಾಜರ ನಡುವೆ ಜಗಳ ಉಂಟಾದಾಗ ಜಾತ್ಯಾತೀತತೆ ಎಂಬ ಪರಿಕಲ್ಪನೆ ಹುಟ್ಟಿಕೊಂಡಿದೆ. ಭಾರತದಲ್ಲಿ ಧರ್ಮ ಎಂಬ ಪರಿಕಲ್ಪನೆ ಇರಬೇಕಾದರೆ ಜಾತ್ಯಾತೀತತೆ ಅಗತ್ಯವಿಲ್ಲ. ಅದು ಯೂರೋಪಿನಲ್ಲಿಯೇ ಇರಲಿ. ಈ ದೇಶದ ಜನರ ಮೇಲೆ ಬಹಳಷ್ಟು ವಂಚನೆ ಮಾಡಲಾಗಿದೆ. ಅದರಲ್ಲಿ ಈ ಜಾತ್ಯಾತೀತತೆಯು ಒಂದು. ಇದು ಜನರಿಗೆ ತಪ್ಪು ಕಲ್ಪನೆಯನ್ನು ನೀಡುತ್ತಿದೆ ಎಂದರು. ಈ ಹೇಳಿಕೆ ಬೆನ್ನಲ್ಲೇ ವಿಪಕ್ಷಗಳಿಂದ ಭಾರೀ ವಿವಾದ ವ್ಯಕ್ತವಾಗಿದೆ. ಕಮ್ಯೂನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾದ ನಾಯಕಿ ಬೃಂದಾ ಕಾರಟ್‌ ಮಾತನಾಡಿ, ರಾಜ್ಯಪಾಲರಿಗೆ … Continue reading ಭಾರತದಲ್ಲಿ ಸೆಕ್ಯುಲರಿಸಂ ಅಗತ್ಯವಿಲ್ಲ : ತಮಿಳುನಾಡು ರಾಜ್ಯಪಾಲ ಆರ್‌.ಎನ್‌.ರವಿ