ವಿಶ್ವದೆಲ್ಲೆಡೆ ಕೋಟಿ ಕಂಠಗಳಲ್ಲಿ ಮೊಳಗಿದ ಕನ್ನಡ ಗಾಯನ

Social Share

ಬೆಂಗಳೂರು, ಅ.28- ವಿಶ್ವದೆಲ್ಲೆಡೆ ಕೋಟಿ ಕಂಠಗಳಲ್ಲಿ ಕನ್ನಡ ಗೀತೆಗಳ ಗಾಯನ ಮೊಳಗಿತು. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರಾಜ್ಯ, ರಾಷ್ಟ್ರ ಹಾಗೂ ವಿದೇಶಗಳಲ್ಲಿ ಏಕಕಾಲಕ್ಕೆ ಅಂದರೆ ಇಂದು ಬೆಳಗ್ಗೆ 11 ಗಂಟೆಗೆ ಕನ್ನಡದ ಆರು ಗೀತೆಗಳನ್ನು ಕೋಟಿ ಕಂಠಗಳಲ್ಲಿ ಹಾಡಲಾಯಿತು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ವಿನೂತನವಾದ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಆಯೋಜಿಸಿತು. ಕೋಟಿ ಕಂಠಗಳ ಗಾಯನ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆ, ಬಾರಿಸು ಕನ್ನಡ ಡಿಂಡಿಮವ, ಹುಯಿಲಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು, ಡಾ. ಡಿ.ಎಸ್.ಕರ್ಕಿ ಅವರ ಹಚ್ಚೇವು ಕನ್ನಡದ ದೀಪ, ನಾಡೋಜ ಡಾ. ಚೆನ್ನವೀರ ಕಣವಿಯವರ ವಿಶ್ವವಿನೂತನ ವಿದ್ಯಾಚೇತನ ಹಾಗೂ ಡಾ. ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಕನ್ನಡ ಗೀತೆಗಳನ್ನು ಸಾಮೂಹಿಕವಾಗಿ ಹಾಡಲಾಯಿತು.

ಜಾರ್ಖಂಡ್‍ನಲ್ಲಿ ಯಾವುದೇ ಕ್ಷಣ ಬಾಂಬ್ ಸ್ಪೋಟಿಸಬಹುದು : ರಮೇಶ್ ಬೈಸ್

ಕೋಟಿ ಕಂಠಗಳ ಗಾಯನಕ್ಕೆ ಸುಮಾರು 1.15 ಕೋಟಿ ಜನರು ಕ್ಯೂಆರ್ ಕೋಡ್‍ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದರು. ಇದರ ಭಾಗವಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಆಯೋಜಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ಸಚಿವರಾದ ವಿ.ಸುನಿಲ್‍ಕುಮಾರ್, ಆರ್.ಅಶೋಕ್, ಶಾಸಕ ಹರತಾಳು ಹಾಲಪ್ಪ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

ನಾಡಗೀತೆ ಮೂಲಕ ಆರಂಭವಾದ ಕೋಟಿಕಂಠ ಗಾಯನ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಪಾಲ್ಗೊಂಡು ಕನ್ನಡ ಗೀತೆಗಳನ್ನು ಹಾಡಿದರು. ವಿದ್ಯಾರ್ಥಿಗಳು, ಸಂಗೀತಗಾರರು, ವಿವಿಧ ವರ್ಗಗಳ ಸಾಧಕರು ಭಾಗವಹಿಸಿದ್ದು ವಿಶೇಷ ಮೆರುಗು ನೀಡಿತ್ತು. ಗಾಯಕರ ಕೈಯಲ್ಲಿ ಕನ್ನಡದ ಬಾವುಟಗಳು ರಾರಾಜಿಸುತ್ತಿದ್ದವು.

ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದಲೂ ಕೋಟಿ ಕಂಠಗಳ ಗಾಯನವನ್ನು ಹಮ್ಮಿಕೊಳ್ಳಲಾಗಿತ್ತು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕೋಟಿ ಕಂಠಗಳ ಗಾಯನ ಕಾರ್ಯಕ್ರಮವನ್ನು ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದ ಐತಿಹಾಸಿಕ ಸ್ಥಳವಾದ ತಿಮ್ಮರಾಯಸ್ವಾಮಿ ಬೆಟ್ಟದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ನವರಂಗಿ ಆಟವಾಡಲು ಹೋಗಿ ಪೊಲೀಸ್ ಅತಿಥಿಯಾದ ಬಾಲಿವುಡ್ ನಿರ್ಮಾಪಕ

ಇದೇ ರೀತಿ ಆಯಾ ಜಿಲ್ಲಾಗಳಲ್ಲೂ ಕೋಟಿ ಕಂಠಗಳ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಸೇರಿದಂತೆ ಗಣ್ಯರು ಪಾಲ್ಗೊಂಡಿದ್ದರು.
ಕಲಾವಿದರು, ನಾಗರೀಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Articles You Might Like

Share This Article