ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಓವೈಸಿ ಮನವಿ

Social Share

ಬೆಂಗಳೂರು,ನ.8-ವಾಣಿಜ್ಯ ರಾಜಧಾನಿ ಹುಬ್ಬಳ್ಳಿಯ ವಿವಾದಾತ್ಮಕ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಎಐಎಂಐಎಂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ಅಸಾವುದ್ದೀನ್ ಓವೈಸಿ ಮನವಿ ಮಾಡಿದ್ದಾರೆ.

ಈ ಕುರಿತು ಹುಬ್ಬಳ್ಳಿ ಮಹಾನಗರ ಪಾಲಿಕೆಗೆ ಮನವಿ ಮಾಡಿರುವ ಅವರು ನ.10ರಂದು ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಬೇಕೆಂದು ಯೋಜಿಸುತ್ತಿದ್ದೇವೆ. ಕಾನೂನಿನಡಿ ಅವಕಾಶ ನೀಡಬೇಕೆಂದು ಆಯುಕ್ತರಿಗೆ ಪತ್ರದಲ್ಲಿ ಕೋರಿದ್ದಾರೆ.

ಓವೈಸಿ ಅವರ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಹುಬ್ಬಳ್ಳಿ ಮಹಾನಗರ ಪಾಲಿಕೆ ಆಯುಕ್ತರು, ಸರ್ಕಾರ ಮತ್ತು ಈದ್ಗಾ ಮೈದಾನದ ಬಾಧ್ಯಸ್ಥರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯನವರೇ ನಿಮ್ಮ ಕ್ಷೇತ್ರ ಅಂತಿಮಗೊಳಿಸಿ : ಸಿಎಂ ಬೊಮ್ಮಾಯಿ
ಕಳೆದ ಆಗಸ್ಟ್‍ನಲ್ಲಿ ಕರ್ನಾಟಕ ಹೈಕೋರ್ಟ್ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅವಕಾಶ ನೀಡಿತ್ತು. ಈಗ ಇದನ್ನು ಆಧಾರವಾಗಿಟ್ಟುಕೊಂಡಿರುವ ಓವೈಸಿ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ಕೊಡಬೇಕೆಂದು ಒತ್ತಾಯಿಸಿದ್ದಾರೆ.

ದಶಕಗಳಿಂದ ಕಗ್ಗಂಟಾಗಿದ್ದ ವಿವಾದಾತ್ಮಕ ಹುಬ್ಬಳ್ಳಿಯ ಈದ್ಗಾ ಮೈದಾನವು ನ್ಯಾಯಾಲಯದಲ್ಲಿ ಸುದೀರ್ಘ ಕಾನೂನು ಹೋರಾಟ ನಡೆಸಿದ ಬಳಿಕ ಇದು ಸರ್ಕಾರಕ್ಕೆ ಸೇರಿದೆ ಎಂದು ತೀರ್ಪು ನೀಡಿತ್ತು. ಈ ಜಾಗದಲ್ಲಿ ಹಬ್ಬ ಹರಿದಿನ ಆಚರಣೆ, ಜಯಂತಿ ಯಾವುದೇ ಕಾರ್ಯಕ್ರಮಗಳನ್ನು ಮಾಡಬೇಕಾದರೆ ಸ್ಥಳೀಯ ಆಡಳಿತದ ಒಪ್ಪಿಗೆ ಪಡೆಯಬೇಕೆಂದು ಸೂಚನೆ ನೀಡಿತ್ತು.

ಮಧ್ಯ ಪ್ರದೇಶದಲ್ಲಿ ಹಂದಿಜ್ವರಕ್ಕೆ 85 ಹಂದಿಗಳು ಸಾವು

ಆಗಸ್ಟ್ ತಿಂಗಳಿನಲ್ಲಿ ಗಣಪತಿ ಆಚರಣೆಗೆ ಸಮಿತಿಯೊಂದನ್ನು ರಚನೆ ಮಾಡಿತ್ತು. ಸಮಿತಿಯು ಕೆಲವು ಷರತ್ತುಬದ್ದ ನಿಯಮಗಳನ್ನು ಹಾಕಿತ್ತು. ಆದರೆ ಕೆಲವರು ಇದನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಅಂತಿಮವಾಗಿ ನ್ಯಾಯಾಲಯ ಆಚರಣೆಗೆ ಒಪ್ಪಿಗೆ ಸೂಚಿಸಿತ್ತು. ಈಗ ಓವೈಸಿ ಕೂಡ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಪಟ್ಟು ಹಿಡಿದಿದ್ದಾರೆ.

Articles You Might Like

Share This Article